ಉತ್ತರ ಪ್ರದೇಶ | ಮುಸ್ಲಿಂ ಯುವಕನಿಗೆ ಥಳಿಸಿ, ವಿವಸ್ತ್ರಗೊಳಿಸಿ, ಜೈ ಶ್ರೀರಾಮ್ ಕೂಗಲು ಒತ್ತಾಯ: ಆರೋಪ

Date:

ಉತ್ತರ ಪ್ರದೇಶದ ಮೀರತ್‌ನಲ್ಲಿ ಮುಸ್ಲಿಂ ಯುವಕನೊಬ್ಬನಿಗೆ ಥಳಿಸಿ, ಆತನನ್ನು ವಿವಸ್ತ್ರಗೊಳಿಸಿ ಜೈ ಶ್ರೀ ರಾಮ್ ಎಂದು ಕೂಗುವಂತೆ ಒತ್ತಾಯಿಸಲಾಗಿದೆ ಎಂದು ಸೋಮವಾರ ಯುವಕನ ಕುಟುಂಬ ಆರೋಪಿಸಿದೆ.

- Advertisement -

ಆದರೆ ಆರೋಪಿಗಳು ಆತನನ್ನು ವಿವಸ್ತ್ರಗೊಳಿಸಿ ಜೈ ಶ್ರೀರಾಮ್ ಜಪಿಸಲು ಒತ್ತಾಯಿಸಿದ್ದಾರೆ ಎಂಬುದನ್ನು ಪೊಲೀಸರು ಅಲ್ಲಗಳೆದಿದ್ದಾರೆ. ಇದು ಯುವಕ ಮತ್ತು ಥಳಿಸಿದವರ ನಡುವೆ ಇರುವ ಪರಸ್ಪರ ದ್ವೇಷದಿಂದಾಗಿ ನಡೆದ ಘಟನೆಯಂತೆ ತೋರುತ್ತದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನನ್ನ ಮಗ ಮಂಗಲ್ ಪಾಂಡೆ ನಗರದ ಖಾಸಗಿ ಶೂಟಿಂಗ್ ರೇಂಜ್‌ನಲ್ಲಿ ಅಭ್ಯಾಸ ಮುಗಿಸಿ ಶನಿವಾರ ರಾತ್ರಿ 8 ಗಂಟೆಗೆ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ” ಎಂದು ಮೀರತ್‌ನ ಪಲ್ಲವಪುರಂನ ಸೋಫಿಪುರ್ ಗ್ರಾಮದ ನಿವಾಸಿ ಗುಲ್ಫಾಮ್ ಎಂಬವರ ತಂದೆ ಅಫ್ತಾಬ್ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ: ರಸ್ತೆ ಬದಿ ಹಚ್ಚೆ ಹಾಕಿಸಿಕೊಂಡ 68 ಮಹಿಳೆಯರಿಗೆ ಹೆಚ್‌ಐವಿ ಸೋಂಕು

ಯುವಕನನ್ನು ಮೂವರು ಯುವಕರು ಮೋಟಾರ್‌ಸೈಕಲ್‌ನಲ್ಲಿ ವಿಕ್ಟೋರಿಯಾ ಪಾರ್ಕ್‌ಗೆ ಕರೆದೊಯ್ದಿದ್ದು, ಅಲ್ಲಿ ಥಳಿಸಿ ವಿವಸ್ತ್ರಗೊಳಿಸಿದರು. ಜೈ ಶ್ರೀ ರಾಮ್ ಎಂದು ಕೂಗುವಂತೆ ಒತ್ತಾಯಿಸಿದರು ಎಂದು ಅಫ್ತಾಬ್ ದೂರಿದ್ದಾರೆ.

ದುಷ್ಕರ್ಮಿಗಳು ಅವರ ಮೊಬೈಲ್ ಫೋನ್ ಕೂಡ ಕಿತ್ತುಕೊಂಡಿದ್ದಾರೆ. ಥಳಿಸಿ ವಿವಸ್ತ್ರಗೊಳಿಸಿದ ಬಳಿಕ ಗುಲ್ಫಾಮ್ ಪ್ರಜ್ಞಾಹೀನನಾಗಿ ಬಿದ್ದಿದ್ದನು ಎಂದು ಸಂತ್ರಸ್ತನ ಕುಟುಂಬಸ್ಥರು ಹೇಳಿದ್ದಾರೆ. ಆದರೆ ಪೊಲೀಸರು ಕುಟುಂಬಸ್ಥರ ಈ ಆರೋಪವನ್ನು ಅಲ್ಲಗಳೆದಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಸಿವಿಲ್ ಲೈನ್ಸ್ ಎಸ್‌ಎಚ್‌ಒ ಮಹಾವೀರ್ ಸಿಂಗ್, “ಎಫ್‌ಐಆರ್‌ನಲ್ಲಿ ಸಂತ್ರಸ್ತರನ್ನು ಜೈ ಶ್ರೀ ರಾಮ್ ಎಂದು ಕೂಗುವಂತೆ ಒತ್ತಾಯಿಸುವ ಯಾವುದೇ ಉಲ್ಲೇಖವಿಲ್ಲ. ಇದು ಯುವಕರ ನಡುವಿನ ದ್ವೇಷದ ಪ್ರಕರಣವಾಗಿದೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ ಸಂಭಲ್‌ ಹಿಂಸಾಚಾರ | ನಾಲ್ವರು ಸಾವು; ನಿರ್ಬಂಧ, ಸಂಸದರ ವಿರುದ್ಧ ಪ್ರಕರಣ

ಸದ್ಯ ಯುವಕನ ತಂದೆ ಅಫ್ತಾಬ್ ಅವರ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 351 (2) (ಕ್ರಿಮಿನಲ್ ಬೆದರಿಕೆ), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಮತ್ತು 324 (ಕಿಡಿಗೇಡಿತನ) ಅಡಿಯಲ್ಲಿ ದೂರು ದಾಖಲಾಗಿದೆ.

ಆರೋಪಿಗಳನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಎಸ್‌ಎಚ್‌ಒ ಸಿಂಗ್ ತಿಳಿಸಿದ್ದಾರೆ. ಸದ್ಯ ಗುಲ್ಫಾಮ್ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಲ್ಫಾಮ್ ರಾಷ್ಟ್ರೀಯ ಶೂಟಿಂಗ್ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾನೆ ಎಂದು ಕುಟುಂಬ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...