ಫರಿದಾಬಾದ್| ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ; ಐವರ ಬಂಧನ

Date:

ಫರಿದಾಬಾದ್‌ನ ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ.

- Advertisement -

ನವಾಡ ಕೊಹ್ ಗ್ರಾಮದ ನಿವಾಸಿ, ಸ್ಥಳೀಯ ಕಾಂಗ್ರೆಸ್ ನಾಯಕ ಜ್ಯೋತೇಂದರ್ ಭದಾನ ಸಹೋದರನ ಕುನಾಲ್ ಭದನಾ (32) ಮೃತಪಟ್ಟ ವ್ಯಕ್ತಿ. ಫೋನ್ ಕರೆಯಲ್ಲಿ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಅಪರಾಧ ತನಿಖಾ ವಿಭಾಗದ ಎಸಿಪಿ ಅಮನ್ ಯಾದವ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆರೋಪಿಗಳನ್ನು ಕೋಟ್ ಗ್ರಾಮದ ನಿವಾಸಿಗಳಾದ ವಿಜಯ್ ಸಿಂಗ್ (48), ವೀರೇಂದ್ರ ಅಲಿಯಾಸ್ ಬಿಲ್ಲು (40), ಫರಿದಾಬಾದ್‌ನ ಎಸ್‌ಜಿಎಂ ನಗರದ ನಿವಾಸಿಗಳಾದ ರಮೇಶ್ (42), ಪ್ರದೀಪ್ ಅಲಿಯಾಸ್ ಕಲ್ಲು (34) ಮತ್ತು ಸಂದೀಪ್ ಅಲಿಯಾಸ್ ಸ್ಯಾಂಡಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ ಜೂನ್ 29ರಂದು, ಪ್ರದೀಪ್ ಮತ್ತು ಭದನಾ ಸ್ನೇಹಿತ ರೋಹಿತ್ ನಡುವೆ ಫೋನ್‌ನಲ್ಲಿ ವಾಗ್ವಾದ ನಡೆದಿದೆ. ಇಬ್ಬರೂ ಕೂಡಾ ಪರಸ್ಪರ ನಿಂದನೆ ಮಾಡಿಕೊಂಡಿದ್ದಾರೆ. ಅದಾದ ಬಳಿಕ ಮರುದಿನ ಪ್ರದೀಪ್ ವಿಜಯ್ ಮತ್ತು ರೋಹಿತ್ ಕುನಾಲ್ ಕೂಡಾ ಕಾನ್ಫರೆನ್ಸ್ ಕರೆಯ ಮೂಲಕ ಪರಸ್ಪರರ ನಿಂದನೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ?  ಪಂಜಾಬ್‌| ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಲಾಂಡಾನ ಐವರು ಸಹಾಯಕರ ಬಂಧನ

“ಇದಾದ ಬಳಿಕ ವಿಜಯ್ ಸಿಂಗ್ ತನ್ನ ಸಹೋದರ ವೀರೇಂದ್ರ ಮತ್ತು ಇತರ ಸಹಚರರಾದ ಸಂದೀಪ್, ಪ್ರದೀಪ್ ಮತ್ತು ರಮೇಶ್ ಅವರೊಂದಿಗೆ ಕುನಾಲ್ ಮತ್ತು ಇತರರು ನಿಂತಿದ್ದ ಮಸೀದಿ ಚೌಕ್‌ಗೆ ತಮ್ಮ ಕಾರಿನಲ್ಲಿ ಹೋಗಿದ್ದಾರೆ. ಇಲ್ಲಿ ವಾಗ್ದಾದ ನಡೆದಿದ್ದು ಕುನಾಲ್ ಭದನಾ ಮೇಲೆ ವಿಜಯ್ ಸಿಂಗ್ ಗುಂಡು ಹಾರಿಸಿದ್ದಾನೆ. ಕುನಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ” ಎಂದು ಎಸಿಪಿ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಜ್ಯೋತೇಂದರ್ ಭದನಾ ದೂರಿನ ಆಧಾರದ ಮೇಲೆ, ದಾಬುವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೋಲಿಸರು ಹೇಳಿದ್ದಾರೆ.

“ನನ್ನ ಸಹೋದರನ ಸ್ನೇಹಿತ ನನಗೆ ಮಾಹಿತಿ ನೀಡಿದ ನಂತರ ನಾನು ಸ್ಥಳಕ್ಕೆ ಧಾವಿಸಿದೆ. ವಿಜಯ್ ನನ್ನ ಸಹೋದರನ ಎದೆಗೆ ಗುಂಡು ಹಾರಿಸಿದಾಗ ಬಿಲ್ಲು ನನ್ನ ಸಹೋದರನ ಕೈ ಹಿಡಿದುಕೊಂಡಿರುವುದನ್ನು ನಾನು ನೋಡಿದೆ. ನಂತರ ಅವರು ತಮ್ಮ ಸ್ವಿಫ್ಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಇತರರ ಸಹಾಯದಿಂದ ನಾನು ಕುನಾಲ್ ಅನ್ನು ಏಷ್ಯನ್ ಆಸ್ಪತ್ರೆಗೆ ಕರೆದೊಯ್ದಿದ್ದೇನೆ. ವೈದ್ಯರು ನನ್ನ ಸಹೋದರ ಸಾವನ್ನಪ್ಪಿರುವುದಾಗಿ ಘೋಷಿಸಿದ್ದಾರೆ” ಎಂದು ಕಾಂಗ್ರೆಸ್ ನಾಯಕ ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...