ಫರಿದಾಬಾದ್ ದುರಂತ | ಮನೆ ಛಾವಣಿ ಕುಸಿದು ಮೂವರು ಮಕ್ಕಳು ಸಾವು

Date:

ಹರಿಯಾಣದ ಫರಿದಾಬಾದ್ ಬಳಿಯ ಸಿಕ್ರಿ ಗ್ರಾಮದಲ್ಲಿ ಶನಿವಾರ ಮನೆಯ ಛಾವಣಿ ಕುಸಿದು ಮೂವರು ಸಹೋದರರು ಮೃತಪಟ್ಟಿದ್ದಾರೆ. ಮೃತರನ್ನು ಆಕಾಶ್ (10), ಮುಸ್ಕಾನ್ (8) ಹಾಗೂ ಆದಿಲ್ (6) ಎಂದು ಗುರುತಿಸಲಾಗಿದೆ.

- Advertisement -

ಪೊಲೀಸರ ಪ್ರಕಾರ, ಸಾಮಾನ್ಯವಾಗಿ ‘ಛಜ್ಜಾ’ ಎಂದು ಕರೆಯಲ್ಪಡುವ ಛಾವಣಿ ಶಿಥಿಲಗೊಂಡಿತ್ತು. ಮಳೆ ಸುರಿದ ಪರಿಣಾಮ ಛಾವಣಿಯ ಕಾಂಕ್ರೀಟ್ ಚಪ್ಪಡಿ ಕುಸಿದಿದೆ. ಮನೆಯಲ್ಲಿದ್ದ ಮೂವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಛಾವಣಿಯ ಅವಶೇಷಗಳನ್ನು ತೆಗೆದ ನಂತರ, ಸ್ಥಳೀಯ ನಿವಾಸಿಗಳು ಪ್ರಜ್ಞಾಹೀನ ಮಕ್ಕಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆ ವೇಳೆಗಾಗಲೇ ಮೂವರೂ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರೆ

ಮನೆ ಶಿಥಿಲಾವಸ್ಥೆಯಲ್ಲಿದೆ ಎಂಬುದು ತಿಳಿದಿದ್ದರೂ, ಮನೆಯನ್ನು ಬಾಡಿಗೆಗೆ ನೀಡಿದ್ದ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತ ಪರಾರಿಯಾಗಿದ್ದು, ಆತನ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ತಂದೆ ಧರ್ಮೇಂದ್ರ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮಕ್ಕಳ ಮೃತದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಸೆಕ್ಟರ್ 58 ಪೊಲೀಸ್ ಠಾಣೆಯ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಕ್ರಿಶನ್ ಕುಮಾರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...