ಹರಿಯಾಣ | ಹಿಂಸಾಚಾರದಲ್ಲಿ ಗುಂಡು ಹಾರಿಸಿ ದಲಿತ ವ್ಯಕ್ತಿಯ ಹತ್ಯೆ, ಆರು ಮಂದಿಗೆ ಗಾಯ

Date:

ಹರಿಯಾಣದ ಫರಿದಾಬಾದ್ ಜಿಲ್ಲೆಯ ಫತೇಪುರ್ ಬಿಲ್ಲೋಚ್ ಗ್ರಾಮದಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ  25 ವರ್ಷದ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು  ತಿಳಿಸಿದ್ದಾರೆ.

- Advertisement -

ಬಲ್ಲಭಗಢದ ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ದೇವೇಂದ್ರ ಮೃತನು. ಫತೇಪುರ್ ಬಿಲ್ಲೋಚ್ ಗ್ರಾಮದ ನಿವಾಸಿ ಸುಂದರ್ ಲಾಲ್ ನೀಡಿದ ದೂರಿನ ಪ್ರಕಾರ, ಜೂ.26ರ ರಾತ್ರಿ ಗ್ರಾಮದಲ್ಲಿ ತನ್ನ ಸಂಬಂಧಿ ದೇವೇಂದ್ರ ಮಾರುಕಟ್ಟೆ ಕಡೆಗೆ ಹೋಗುತ್ತಿದ್ದಾಗ ಮೇಲ್ಜಾತಿ ಸಮುದಾಯವರು ದೇವೇಂದ್ರ ಅವರನ್ನು ಜಾತಿ ನಿಂದನೆ ಮಾಡಿದ್ದಾರೆ. ಇದನ್ನು ಪ್ರತಿಭಟಿಸಿದಾಗ ಹಲ್ಲೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಜಗಳ ವಿಕೋಪಕ್ಕೆ ಹೋಗಿದ್ದು, ಎರಡೂ ಕಡೆಯ ಸದಸ್ಯರು ಸ್ಥಳಕ್ಕಾಗಮಿಸಿದಾಗ ಆರೋಪಿಗಳು ದೇವೇಂದ್ರನ ಮೇಲೆ ಗುಂಡು ಹಾರಿಸಿದ್ದು, ಅವರು ಸ್ಥಳದಲ್ಲೇ ಮೇತಪಟ್ಟಿದ್ದಾರೆ. ಇದರ ನಂತರ ಮೇಲ್ಜಾತಿ ಸಮುದಾಯದವರು ಗುಂಡಿನ ದಾಳಿಯನ್ನು ನಿಲ್ಲಿಸಲಿಲ್ಲ. ದಲಿತ ಸಮುದಾಯದ ಇತರರ ಮೇಲೂ ಗುಂಡು ಹಾರಿಸಿದರು. ಗಲಭೆಯಲ್ಲಿ ಇನ್ನೂ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹತ್ಯೆಯ ನಂತರ ದಲಿತ ಸಮುದಾಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಸುಂದರ್ ಲಾಲ್ ತಿಳಿಸಿದ್ದಾರೆ

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆ ಸೇರಿದಂತೆ ಬಲ್ಲಭಗಢದ ಸದರ್ ಪೊಲೀಸ್ ಠಾಣೆಯಲ್ಲಿ  ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...