ಪಶ್ಚಿಮ ಬಂಗಾಳ | ಸುಳ್ಳು ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತನ ಬಂಧನ

Date:

ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸಿ ಹತ್ತು ದಿನಗಳಾಗುತ್ತಿದ್ದಂತೆ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತವನ್ನು ಪ್ರಶ್ನಿಸುವವರನ್ನು ಹತ್ತಿಕ್ಕುವ ಕೆಲಸವನ್ನು ಶುರು ಮಾಡಿದೆ. ಕೋಲ್ಕತ್ತಾ ಪೊಲೀಸರು ಸಾಮಾಜಿಕ ಕಾರ್ಯಕರ್ತ ಫರಿದುಲ್ ಇಸ್ಲಾಂ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ್ದಾರೆ.

- Advertisement -

ಭಾನುವಾರ ತಿಲ್ಜಲಾದಲ್ಲಿ ಬುಲ್ಡೋಜರ್ ಕಾರ್ಯಾಚರಣೆಯನ್ನು ವಿರೋಧಿಸಿ ಜನನಿಬಿಡ ಪಾರ್ಕ್ ಸರ್ಕಸ್ ಸೆವೆನ್-ಪಾಯಿಂಟ್ ಕ್ರಾಸಿಂಗ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಈ ವೇಳೆ ಹಿಂಸಾಚಾರ ನಡೆದಿತ್ತು. ಕೆಪಿ ಮತ್ತು ಸಿಎಪಿಎಫ್ ಎರಡಕ್ಕೂ ಸೇರಿದ ವಾಹನಗಳನ್ನು ಜನಸಮೂಹ ಧ್ವಂಸಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಇದೀಗ ಪ್ರಚೋದನಕಾರಿ ಪೋಸ್ಟ್‌ಗಳನ್ನು ಮಾಡಿ ಈ ಪ್ರತಿಭಟನೆ ಆಯೋಜಿಸಿದ ಆರೋಪದ ಮೇಲೆ ಫರಿದುಲ್ ಇಸ್ಲಾಂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಂಗಳವಾರ ಸಂಜೆ 7 ಗಂಟೆಯವರೆಗೆ ಒಟ್ಟು 46 ಮಂದಿಯನ್ನು ಬಂಧಿಸಲಾಗಿದೆ. ಬೆನಿಯಾಪುಕೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಷ್ಟವನ್ನು ಭರಿಸಲು ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬಂಧನದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರ ಫರಿದುಲ್ ಇಸ್ಲಾಂ, “ನಾನು ಈ ಪ್ರತಿಭಟನೆಗೆ ಕರೆ ನೀಡಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟರ್ ನೋಡಿದೆ. ನಾನು ಹತ್ತಿರದಲ್ಲಿದ್ದರಿಂದ, ನಾನು ಆ ಪ್ರತಿಭಟನೆಯಲ್ಲಿ ಭಾಗಿಯಾದೆ. ಅಲ್ಲಿ, ನನಗೆ ಪರಿಚಯವಿರುವ ಯಾರೂ ಇರಲಿಲ್ಲ. ಆದರೆ ಅದು ಬುಲ್ಡೋಜರ್ ಕ್ರಮ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವುದರ ವಿರುದ್ಧ ಸ್ವಯಂಪ್ರೇರಿತ ಪ್ರತಿಭಟನೆಯಾಗಿತ್ತು. ನನ್ನ ಹೆಸರನ್ನು ಸಹ ಮತದಾರರ ಪಟ್ಟಿಯಿಂದ ಅಳಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನು ಫರಿದುಲ್ ಇಸ್ಲಾಂ ಬಂಧನವನ್ನು ಸಾಮಾಜಿಕ ಹೋರಾಟಗಾರರು ಖಂಡಿಸಿದ್ದಾರೆ. “ಮಾನವ ಹಕ್ಕುಗಳ ಚಳವಳಿಯೊಂದಿಗೆ ಸಂಬಂಧ ಹೊಂದಿರುವ ಫರಿದುಲ್ ಗೂಂಡಾಗಿರಿಯಲ್ಲಿ ಭಾಗಿಯಾಗಿಲ್ಲ. ಸರ್ಕಾರದ ಕ್ರಮದ ವಿರುದ್ಧ ಮಾತನಾಡಿದ್ದಕ್ಕೆ ಅವರನ್ನು ಬಂಧಿಸುವುದು ಸರಿಯಲ್ಲ. ಈ ಬಂಧನವನ್ನು ನಾವು ಖಂಡಿಸುತ್ತೇವೆ” ಎಂದು ಚಲನಚಿತ್ರ ನಿರ್ಮಾಪಕ ದ್ವೈಪಾಯನ್ ಬ್ಯಾನರ್ಜಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...