ಮಧ್ಯ ಪ್ರದೇಶ | ಜೀಪು ಹರಿಸಿ ರೈತನ ಹತ್ಯೆ ಮಾಡಿದ ಬಿಜೆಪಿ ನಾಯಕ; ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

Date:

ಜಮೀನು ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕನೊಬ್ಬ ರೈತರೊಬ್ಬರನ್ನು ಹತ್ಯೆ ಮಾಡಿದ್ದು, ಕೊಲೆಯನ್ನು ತಡೆಯಲು ಬಂದ ರೈತನ ಪುತ್ರಿಯರ ಮೇಲೆ ಹಲ್ಲೆಯ ಜೊತೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಮಧ್ಯ ಪ್ರದೇಶದ ಗುಣಾ ಜಿಲ್ಲೆಯ ಗಣೇಶ್‌ಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಬಿಜೆಪಿ ನಾಯಕ ಮಹೇಂದ್ರ ನಾಗರ್ ಮತ್ತು ಆತನ ಸಹಚರರು ರಾಮಸ್ವರೂಪ ಧಾಕಡ್ ಎಂಬ ರೈತನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಫತೇಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೈತ ರಾಮಸ್ವರೂಪ ಧಾಕಡ್ ಅವರು ಪತ್ನಿಯೊಂದಿಗೆ ಹೊಲಕ್ಕೆ ತೆರಳುತ್ತಿದ್ದ ವೇಳೆ ಮಹೇಂದ್ರ ನಾಗರ್ ಮತ್ತು ಅವರ ಗುಂಪು ಅವರನ್ನು ಮಾರ್ಗಮಧ್ಯೆ ತಡೆದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಆರೋಪಿಗಳು ರೈತನ ಮೇಲೆ ಜೀಪನ್ನು ಹರಿಸಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಯಲ್ಲಿ ಆರೋಪಿಗಳು ಮಧ್ಯಪ್ರವೇಶಿಸಲು ಬಂದ ರೈತನ ಇಬ್ಬರು ಪುತ್ರಿಯರ ಮೇಲೂ ಹಲ್ಲೆ ನಡೆಸಿದ್ದಾರೆ. “ನಾನು ತಂದೆಯನ್ನು ರಕ್ಷಿಸಲು ಹೋದಾಗ ಅವರು ನನ್ನ ಬಟ್ಟೆ ಹರಿದು ಹಲ್ಲೆ ನಡೆಸಿದರು. ಬಂದೂಕಿನಿಂದ ಗುಂಡು ಹಾರಿಸಿ ಬೆದರಿಸಿದರು” ಎಂದು ಸಂತ್ರಸ್ತ ರೈತರ ಪುತ್ರಿಯರು ತಿಳಿಸಿದ್ದಾರೆ.

“ಸುಮಾರು ಒಂದು ಗಂಟೆಯವರೆಗೆ ದಾಳಿ ಮುಂದುವರಿದಿತ್ತು. ಆ ಸಮಯದಲ್ಲಿ ಸುಮಾರು 20 ಜನರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದರು. ಇಬ್ಬರು ಬಾಲಕಿಯರ ಬಟ್ಟೆ ಹರಿದು, ನಂತರ ಆರೋಪಿಗಳು ವಾಹನವನ್ನು ಹರಿಸಿ ಹತ್ಯೆ ಮಾಡಿದ್ದಾರೆ” ಎಂದು ರೈತನ ಸಹೋದರ ರಾಮಕುಮಾರ್ ಅವರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ತಲೆ ಮೇಲೆ ಹೊತ್ತು ಮೆರೆಸಿದವರು ಈಗ ಪಲಾಯನ ಮಾಡುವುದು ತರವೇ?

ಗಾಯಗೊಂಡ ರೈತನನ್ನು ಸುಮಾರು ಒಂದು ಗಂಟೆಯವರೆಗೆ ಆಸ್ಪತ್ರೆಗೆ ಕರೆದೊಯ್ಯಲು ಅನುಮತಿಸಲಿಲ್ಲ. ಗನ್‌ ಹಿಡಿದು ಬೆದರಿಸಿದರು ಎಂದು ಆರೋಪಿಸಲಾಗಿದೆ. ಕೊನೆಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆನಂತರ ಚಿಕಿತ್ಸೆ ವೇಳೆ ಅವರು ಮೃತಪಟ್ಟರು ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಂದ್ರ ನಾಗರ್ ಹಾಗೂ ಅವರ ಕುಟುಂಬದ ಮೂವರು ಮಹಿಳೆಯರು ಹಾಗೂ ಇತರ 14 ಜನರ ವಿರುದ್ಧ ಹತ್ಯೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಫತೇಗಢ ಠಾಣಾಧಿಕಾರಿ ತಿಳಿಸಿದ್ದಾರೆ.

ಬಾಮೋರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಋಷಿ ಅಗ್ರವಾಲ್ ಈ ಘಟನೆಯನ್ನು ಖಂಡಿಸಿದ್ದಾರೆ, “ಮಧ್ಯಪ್ರದೇಶದಲ್ಲಿ ಹಿಂಸೆ, ಲೂಟಿ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿರುವವರು ಈ ಎಲ್ಲವನ್ನು ನೋಡುತ್ತಾ ಸುಮ್ಮನಿದ್ದಾರೆ. ಪೊಲೀಸರು ಭಯದಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಮಹೇಂದ್ರ ನಾಗರ್ ಕಳೆದ ಕೆಲವು ವರ್ಷಗಳಿಂದ ಸಣ್ಣ ರೈತರಿಗೆ ಬೆದರಿಕೆ ಹಾಕಿ, ಸುಮಾರು 25 ರೈತರನ್ನು ತಮ್ಮ ಜಮೀನನ್ನು ಕಡಿಮೆ ಬೆಲೆಗೆ ಮಾರುವಂತೆ ಒತ್ತಾಯಿಸಿ, ಗ್ರಾಮದಿಂದ ಓಡಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಘಟನೆಯ ನಂತರ ಆರೋಪಿಯು ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧ್ಯಾ ಸೇರಿದಂತೆ ಮುಂತಾದ ಗಣ್ಯರ ಜೊತೆಯಿರುವ ಫೋಟೊಗಳು ವೈರಲ್‌ ಆಗುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...