ರೈತ ಹೋರಾಟ | ರೈತ ಶುಭಕರನ್ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

Date:

ರೈತರು ಮತ್ತು ಹರಿಯಾಣ ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯಲ್ಲಿ ಸಾವನ್ನಪ್ಪಿದ ರೈತ ಶುಭಕರನ್ ಸಿಂಗ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶಿಸಿದೆ.

ಫೆಬ್ರವರಿ 21ರಂದು ಪಂಜಾಬ್-ಹರಿಯಾಣ ಗಡಿ ಪ್ರದೇಶ ಖನೌರಿಯಲ್ಲಿ ರೈತರ ಮೇಲೆ ಪೊಲೀಸರು ಟಿಯರ್ ಗ್ಯಾಸ್ ಮತ್ತು ರಬ್ಬರ್ ಗುಂಡಿನ ದಾಳಿ ನಡೆಸಿದ್ದರು. ರಬ್ಬರ್ ಗುಂಡಿನ ದಾಳಿಯಲ್ಲಿ ರೈತ ಶುಭಕರನ್ ಸಿಂಗ್ ಸಾವನ್ನಪ್ಪಿದ್ದರು.

ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪಂಜಾಬ್-ಹರಿಯಾಣ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಜಿ ಎಸ್ ಸಂಧವಾಲಿಯಾ ಮತ್ತು ನ್ಯಾಯಮೂರ್ತಿ ಲಪಿತಾ ಬ್ಯಾನರ್ಜಿ ಅವರ ವಿಭಾಗೀಯ ಪೀಠವು ವಿಚಾರಣೆ ನಡೆಸುತ್ತಿದೆ. ಈ ವೇಳೆ, ಶುಭಕರನ್ ಸಿಂಗ್ ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ನ್ಯಾಯಾಲಯ ಆದೇಶಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಪಂಜಾಬ್ ಮತ್ತು ಹರಿಯಾಣದ ಇಬ್ಬರು ಎಡಿಜಿಪಿ ಶ್ರೇಣಿಯ ಅಧಿಕಾರಿಗಳ ತಂಡವು ತನಿಖೆ ನಡೆಸಬೆಕು” ಎಂದು ಪೀಠವು ಹೇಳಿದೆ.

ರೈತನ ಸಾವಿನ ಘಟನೆ ಬಗ್ಗೆ ಪಂಜಾಬ್ ಸರ್ಕಾರ ಈಗಾಗಲೇ ಕೊಲೆ ಪ್ರಕರಣವನ್ನು ಶೂನ್ಯ ಎಫ್‌ಐಆರ್‌ನಲ್ಲಿ ದಾಖಲಿಸಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಮತ್ತು ಕೃಷಿ ಸಾಲ ಮನ್ನಾ ಸೇರಿದಂತೆ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಫೆಬ್ರವರಿ 13ರಿಂದ ‘ದೆಹಲಿ ಚಲೋ’ ನಡೆಸುತ್ತಿವೆ. ಅದರೆ, ರೈತರು ದೆಹಲಿಗೆ ಬರದಂತೆ ತಡೆಯಲು ಹರಿಯಾಣ ಮತ್ತು ಕೇಂದ್ರ ಬಿಜೆಪಿ ಸರ್ಕಾರಗಳು ಭಾರೀ ಪ್ರಯತ್ನ ನಡೆಸುತ್ತಿವೆ.

ರೈತ ಶುಭಕರನ್ ಸಾವಿನಿಂದಾಗಿ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಸ್ಥಗಿತಗೊಂಡಿದ್ದ ರೈತ ಹೋರಾಟ ಮತ್ತೆ ಆಂರಭವಾಗಿದೆ. ಪ್ರತಿಭಟನಾನಿರತ ರೈತರು ದೆಹಲಿಗೆ ಬುಧವಾರ ಪಾದಯಾತ್ರೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ | ಪೇಟ ಮತ್ತು ಸನ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ದೇಶಾದ್ಯಂತ ಜಾತಿ ದೌರ್ಜ್ಯನದ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತೀಚಿನ ಘಟನೆಯೊಂದರಲ್ಲಿ, ಪೇಟ...

ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ...

ಸಿಕ್ಕಿಂ ಪ್ರವೇಶಿಸುವ ಪ್ರವಾಸಿ ವಾಹನಗಳು ಕಸದ ಚೀಲ ಹೊತ್ತೊಯ್ಯುವುದು ಕಡ್ಡಾಯ!

ಸಿಕ್ಕಿಂಗೆ ಪ್ರವೇಶಿಸುವ ಎಲ್ಲಾ ಪ್ರವಾಸಿ ವಾಹನಗಳು ಈಗ ಕಡ್ಡಾಯವಾಗಿ ದೊಡ್ಡ ಕಸದ...

ನಿಫಾ ವೈರಸ್‌ನಿಂದ ಕೇರಳದ 14 ವರ್ಷದ ಬಾಲಕ ಸಾವು

ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ...