ಶಂಭು ಗಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರತಿಭಟನಾನಿರತ ರೈತ; ಆಸ್ಪತ್ರೆಯಲ್ಲಿ ಸಾವು

Date:

ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 55 ವರ್ಷದ ರೈತ ಗುರುವಾರ ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೃತ ರೈತರನ್ನು ತರಣ್ ಜಿಲ್ಲೆಯ ಪಹುವಿಂಡ್‌ನ ರೇಷಮ್ ಸಿಂಗ್ ಎಂದು ಗುರುತಿಸಲಾಗಿದೆ. ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಇದನ್ನು ಓದಿದ್ದೀರಾ? ಎಂಎಸ್‌ಪಿ | 43ನೇ ದಿನಕ್ಕೆ ಕಾಲಿಟ್ಟ ದಲೈವಾಲ್ ಉಪವಾಸ; ರೈತರ ಬಲಿಗೆ ಕಾಯುತ್ತಿದೆಯೇ ಕೇಂದ್ರ?

ಈ ಪ್ರತಿಭಟನಾ ಸ್ಥಳದಲ್ಲಿ ರೈತ ರೇಷಮ್ ಸಿಂಗ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮೂರು ವಾರದಲ್ಲಿ ಎರಡನೇ ಬಾರಿಗೆ ರೈತರ ಪ್ರತಿಭಟನೆಯಲ್ಲಿ ಆತ್ಮಹತ್ಯೆ ಪ್ರಯತ್ನ ನಡೆದಿದೆ. ಡಿಸೆಂಬರ್ 18ರಂದು ಶಂಭು ಗಡಿಯಲ್ಲಿ ಮತ್ತೊಬ್ಬ ರೈತ ರಂಜೋಧ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಆತ್ಮಹತ್ಯೆಗೆ ಯತ್ನಿಸಿದ ರೇಷಮ್ ಸಿಂಗ್ ಅವರನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಇನ್ನು ನವೆಂಬರ್ 26ರಿಂದ ಖಾನೌರಿ ಗಡಿಯಲ್ಲಿ ಆಮರಣಾಂತ ಉಪವಾಸ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ (70) ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಇದರಿಂದಾಗಿ ದುಃಖಿತರಾಗಿ ರೈತ ರಂಜೋಧ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಕೊಪ್ಪಳ | ಭತ್ತ ನಾಟಿಯಲ್ಲಿ ಕೊಳೆರೋಗ; ರೈತರು ಕಂಗಾಲು

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರೈತ ನಾಯಕ ತೇಜ್‌ವೀರ್ ಸಿಂಗ್, “ದೀರ್ಘಕಾಲದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಕೂಡಾ ನಮ್ಮ ಸಮಸ್ಯೆಗಳನ್ನು ಪರಿಹರಿಸದ ಕೇಂದ್ರ ಸರ್ಕಾರದ ವಿರುದ್ಧ ರೇಷಮ್ ಸಿಂಗ್ ಅಸಮಾಧಾನಗೊಂಡಿದ್ದರು” ಎಂದು ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಫೆಬ್ರವರಿ 13ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಹಲವು ಬಾರಿ ದೆಹಲಿಗೆ ಮಾರ್ಚ್‌ ನಡೆಸಲು ರೈತರು ಮುಂದಾಗಿದ್ದು ಅವರನ್ನು ಪೊಲೀಸರು ತಡೆದಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...