ರೈತರ ಕನಿಷ್ಠ ಬೆಂಬಲ ಬೆಲೆ, ಯುವಕರ ಉದ್ಯೋಗದ ಬಗ್ಗೆ ಕೇಳಿಸಿಕೊಳ್ಳದ ಕೇಂದ್ರ: ರಾಹುಲ್ ಗಾಂಧಿ

Date:

ರೈತರು ಕನಿಷ್ಠ ಬೆಂಬಲ ಬೆಲೆ, ಯುವಕರು ಉದ್ಯೋಗ ನೀಡಿಕೆ, ಮಹಿಳೆಯರು ಹಣದುಬ್ಬರದಿಂದ ನಿವಾರಣೆ ಬಗ್ಗೆ ಕೇಂದ್ರವನ್ನು ಕೇಳುತ್ತಿದ್ದರೂ ಸರ್ಕಾರ ಮಾತ್ರ ಕೇಳಿಸಿಕೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

- Advertisement -

ರಾಜಸ್ಥಾನದ ಬಿಕನೇರ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ. ಈ ಚುನಾವಣೆಯು ಹಿಂದುಳಿದ ವರ್ಗ, ದಲಿತರು, ಬುಡಕಟ್ಟು ವರ್ಗ ಹಾಗೂ ಸಾಮಾನ್ಯ ವರ್ಗದ ಬಡಜನರ ಚುನಾವಣೆಯಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೊಡ್ಡ ಉದ್ಯಮಿಗಳಿಂದ ಚುನಾವಣಾ ಬಾಂಡ್ ಮೂಲಕ ಹಣ ತೆಗೆದುಕೊಂಡಿದೆ. ನಮ್ಮ ಪಕ್ಷದ ಬ್ಯಾಂಕ್ ಅಕೌಂಟ್‌ಗಳನ್ನು ಸ್ಥಗಿತಗೊಳಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯು ದೇಶದ ಬಡ ಜನರು ಹಾಗೂ 22-25 ಉದ್ಯಮಿಗಳ ನಡುವೆ ನಡೆಯುವ ಚುನಾವಣೆಯಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಪ್ರಸ್ತುತ ದೇಶದ ಅತೀ ದೊಡ್ಡ ಸಮಸ್ಯೆಗಳೆಂದರೆ ನಿರುದ್ಯೋಗ ಹಾಗೂ ಹಣದುಬ್ಬರ. ಆದರೆ ಈ ಸಮಸ್ಯೆಗಳನ್ನು ಮಾಧ್ಯಮಗಳಲ್ಲಿ ತೋರಿಸಲಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದರು.

ಪಕ್ಷದ ಚುನಾವಣಾ ಪ್ರಣಾಳಿಕೆ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಶೀಘ್ರದಲ್ಲೇ ನೀಡಿದ ಭರವಸೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ 15-20 ಉದ್ಯಮಿಗಳ ಸಾಲ ಮನ್ನ ಮಾಡಲಾಗಿದೆ. ಇದೇ ಹಣವನ್ನು ಮನ್‌ರೇಗಾ ಯೋಜನೆಯ ಕೂಲಿಗಾಗಿ 24 ವರ್ಷಗಳವರೆಗೂ ಖರ್ಚು ಮಾಡಬಹುದಿತ್ತು ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತದ ಇತಿಹಾಸದಲ್ಲಿಯೇ ನಮ್ಮ ದೇಶದ ರೈತರು ತೆರೆಗೆಯನ್ನು ಪಾವತಿಸುತ್ತಿರುವುದು ಇದೇ ಮೊದಲು ಎಂದು ಎಂದು ಕೇಂದ್ರ ಸರ್ಕಾರದ ರೈತ ವಿರೋಧ ನೀತಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...