ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ: ರಾಹುಲ್ ಗಾಂಧಿ ಆಕ್ರೋಶ

Date:

ಭಾರತ–ಅಮೆರಿಕ ವ್ಯಾಪರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಅವರು, ಇದೀಗ ಮತ್ತೊಮ್ಮೆ ಕಿಡಿಕಾರಿದ್ದಾರೆ.

- Advertisement -

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಲು ಸಾಲು ಪ್ರಶ್ನೆ ಕೇಳಿರುವ ಅವರು, ಭಾರತೀಯ ರೈತರಿಗೆ ದ್ರೋಹ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ‘ಅಮೆರಿಕದ ಜೊತೆ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘ಡ್ರೈ ಡಿಸ್ಟಿಲರ್ಸ್ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರ ಅರ್ಥವೇನು? ಭಾರತೀಯ ಜಾನುವಾರುಗಳಿಗೆ ಅಮೆರಿಕದ ಮೆಕ್ಕೆಜೋಳದಿಂದ ತಯಾರಿಸಿದ ಡಿಸ್ಟಿಲರ್‌ಗಳ ಧಾನ್ಯಗಳನ್ನು ನೀಡಲಾಗುತ್ತದೆಯೇ? ಹೀಗೆ ಮಾಡುವುದರಿಂದ ನಮ್ಮ ಹಾಲಿನ ಉತ್ಪನ್ನಗಳು ಅಮೆರಿಕದ ಕೃಷಿ ಉದ್ಯಮದ ಮೇಲೆ ಅವಲಂಬಿತವಾಗುವಂತೆ ಮಾಡುವುದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಭಾರತವು ಅಮೆರಿಕದಿಂದ ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದರೆ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ದೇಶದಾದ್ಯಂತದ ಸೋಯಾ ಬೆಳೆಯುವ ರೈತರ ಮೇಲೆ ನೇರ ಪರಿಣಾಮ ಬೀರಲಿದೆ. ಮಾತ್ರವಲ್ಲ, ತೀವ್ರ ಬೆಲೆ ನಷ್ಟ ಉಂಟಾಗಲಿದೆ. ಇದನ್ನು ಭಾರತದ ರೈತರು ಹೇಗೆ ತಡೆದುಕೊಳ್ಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಪದಾರ್ಥಗಳು ಎಂದರೆ ಏನು? ಅದು ಏನನ್ನು ಒಳಗೊಂಡಿದೆ? ಇದರಿಂದ ಮುಂದಿನ ದಿನಗಳಲ್ಲಿ ಅಮೆರಿಕದ ದ್ವಿದಳ ಧಾನ್ಯಗಳು ಹಾಗೂ ಇತರೆ ಬೆಳಗಳ ಆಮದಿಗೆ ಅಡಿಪಾಯ ಹಾಕುವುದಿಲ್ಲವೇ? ಎಂದು ಕೇಳಿದ್ದಾರೆ.

‘ವ್ಯಾಪಾರೇತರ ಅಡೆತಡೆಗಳನ್ನು ತೆಗೆದುಹಾಕುವುದರ ಅರ್ಥವೇನು? ಮುಂದಿನ ದಿನಗಳಲ್ಲಿ ಮಾರ್ಪಡಿಸಿದ ತಳಿಗಳ ಮೇಲಿನ ತಮ್ಮ ನಿಲುವನ್ನು ಸಡಿಲಗೊಳಿಸಿ, ಸಂಗ್ರಹಣೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಮತ್ತು ಬೋನಸ್‌ ಅನ್ನು ಕಡಿಮೆ ಮಾಡಲು ಭಾರತದ ರೈತರ ಮೇಲೆ ಒತ್ತಡ ಹೇರಲಾಗುವುದಿಲ್ಲವೇ? ಎಂದು ಅವರು ಕೇಳಿದ್ದಾರೆ.

ಅಮೆರಿಕ ಹಾಗೂ ಭಾರತ ನಡುವಿನ ಈ ವ್ಯಾಪಾರ ಒಮ್ಮೆ ಆರಂಭವಾದರೆ, ಇದು ಪ್ರತೀ ವರ್ಷವೂ ದೊಡ್ಡದಾಗುತ್ತದೆ. ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್‌ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ.

‘ಉಭಯ ದೇಶಗಳ ನಡುವೆ ಈ ವ್ಯಾಪಾರ ಒಪ್ಪಂದ ಆರಂಭವಾದೆ, ಮುಂದಿನ ದಿನಗಳಲ್ಲಿ ಇದನ್ನು ತಡೆಯಲು ಸಾಧ್ಯವಾಗುತ್ತದೆಯೇ? ಇದು ವರ್ಷದಿಂದ ವರ್ಷಕ್ಕೆ ಹಚ್ಚಾಗುತ್ತಾ ಹೋಗುತ್ತದೆ. ಈ ಬಗ್ಗೆ ರೈತರು ಸ್ಪಷ್ಟತೆ ಪಡೆಯಬೇಕು’ ಎಂದು ಹೇಳಿದರು.

ಇದು ಕೇವಲ ಇಂದಿನ ಸಮಸ್ಯೆಯಲ್ಲ, ಭವಿಷ್ಯದ ದೃಷ್ಟಿಯಿಂದ ಗಂಭೀರವಾಗಿ ಯೋಚಿಸಬೇಕಾಗಿದೆ. ಭಾರತದ ಕೃಷಿ ಉದ್ಯಮದ ಮೇಲೆ ದೀರ್ಘಕಾಲದ ಹಿಡಿತ ಸಾಧಿಸಲು ಇನ್ನೊಂದು ದೇಶಕ್ಕೆ ಅವಕಾಶ ನೀಡುತ್ತಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಗಲಭೆ, ಜಾಮಿಯಾ ಹಿಂಸಾಚಾರ: ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿಗಳು ವಜಾ

2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ರಾತ್ರಿ 10 ಗಂಟೆಗೂ ಮಹಿಳೆಯರು ನಿರ್ಭಯವಾಗಿ ಓಡಾಡುವಂತಿರಬೇಕು: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ದೆಹಲಿಯ ಸಾರ್ವಜನಿಕ ಸ್ಥಳಗಳು ಹಾಗೂ ಸಾರಿಗೆ ವ್ಯವಸ್ಥೆಯನ್ನು ಬಳಸುವಾಗ ಪ್ರತಿಯೊಬ್ಬ ಮಹಿಳೆಯೂ...