ಸರ್ಕಾರದ ಜೊತೆ ಮಾತುಕತೆ ವಿಫಲ: 200ಕ್ಕೂ ಹೆಚ್ಚು ಸಂಘಟನೆಗಳಿಂದ ಇಂದು ರೈತ ಪ್ರತಿಭಟನೆ

Date:

ಕೇಂದ್ರ ಸಚಿವರು ಹಾಗೂ ರೈತ ಸಂಘಟನೆಗಳ ನಾಯಕರಿಂದ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಇಂದು ದೇಶದ ವಿವಿಧ ಭಾಗಗಳ 200ಕ್ಕೂ ಹೆಚ್ಚು ರೈತ ಸಂಘಟನೆಗಳು ಬೃಹತ್ ಮಟ್ಟದಲ್ಲಿ ‘ದೆಹಲಿ ಚಲೋ’  ನಡೆಸಲಿವೆ.

- Advertisement -

ನಿನ್ನೆ(ಫೆ.12) ನಡೆದ ಸಭೆಯಲ್ಲಿ ರೈತ ಸಂಘಟನೆಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ನಿರ್ಣಯ ಕೈಗೊಳ್ಳದ ಕಾರಣ ಮಾತುಕತೆ ವಿಫಲವಾಯಿತು. ಆದಾಗ್ಯೂ, ಹೆಚ್ಚಿನ ವಿಷಯಗಳಲ್ಲಿ ಒಮ್ಮತವನ್ನು ಸಾಧಿಸಲಾಗಿದೆ ಮತ್ತು ಸಮಿತಿಯ ರಚನೆಯ ಮೂಲಕ ಇನ್ನು ಕೆಲವನ್ನು ಪರಿಹರಿಸುವ ಸೂತ್ರವನ್ನು ಪ್ರಸ್ತಾಪಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ರೈತರ ಪ್ರತಿಭಟನೆ ಹಿನ್ನೆಲೆ, ದೆಹಲಿ ಪೊಲೀಸರು ಭದ್ರತಾ ಕ್ರಮಗಳನ್ನು ಹೆಚ್ಚಿಸಿದ್ದಾರೆ, ಸಭೆಗಳಿಗೆ ನಿರ್ಬಂಧಗಳನ್ನು ಹೇರಿದ್ದಾರೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ರಾಜಧಾನಿ ಅಕ್ಕಪಕ್ಕದ ಗಡಿಗಳನ್ನು ಭದ್ರಪಡಿಸಿದ್ದಾರೆ.

ಹರಿಯಾಣ ಮತ್ತು ಪಂಜಾಬ್‌ನಿಂದ ಪ್ರತಿಭಟನಾ ನಿರತ ರೈತರು ಮಂಗಳವಾರ ದೆಹಲಿಯತ್ತ ಪಾದಯಾತ್ರೆ ಆರಂಭಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಅವರು ಫತೇಘರ್ ಸಾಹಿಬ್‌ನಲ್ಲಿ ರೈತ ಸಂಘಗಳೊಂದಿಗೆ ಸಭೆ ನಡೆಸಿದರು.

ಪಂಜಾಬ್‌ನ ಫತೇಘರ್ ಸಾಹಿಬ್‌ನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಮುಖಂಡ ಲಖ್ವಿಂದರ್ ಸಿಂಗ್, “ಜನರು ಸಿದ್ಧರಾಗಿದ್ದಾರೆ ಮತ್ತು ಸಭೆ ಕೂಡ ನಡೆಯುತ್ತಿದೆ. ನಾವು ಸಾಮಾನ್ಯ ಜನರಿಗೆ ಅನಾನುಕೂಲತೆಯನ್ನು ಉಂಟುಮಾಡಲು ಬಯಸುವುದಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.

ರೈತ ಸಂಘಗಳು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೇಲಿನ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ದೆಹಲಿಗೆ ತೆರಳಲಿವೆ. ರೈತರು ದೆಹಲಿ ಪ್ರವೇಶಿಸದಂತೆ ಪೊಲೀಸರು ಕಾಂಕ್ರೀಟ್ ತಡೆ, ಬ್ಯಾರಿಕೇಡ್ ಮತ್ತು ಮುಳ್ಳುತಂತಿಗಳನ್ನು ಹಾಕಿದ್ದಾರೆ. ದೆಹಲಿ ಮತ್ತು ಎನ್‌ಸಿಆರ್‌ಗೆ ಆಗಮಿಸುವ ವಾಹನ ಸಂಚಾರದ ಕುರಿತು ಸಾರ್ವಜನಿಕರಿಗೆ ಸಲಹೆಗಳನ್ನು ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಕಾರ ಆರೋಪ; ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ

ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ 20 ವರ್ಷದ ಬುಡಕಟ್ಟು (ದಲಿತ) ಮಹಿಳೆಯೊಬ್ಬರು...

ಆರೋಪಿಯನ್ನು ಹಿಡಿದರೂ FIRನಲ್ಲಿ ಹೆಸರಿಲ್ಲ; ಯುಪಿ ಪೊಲೀಸರ ನಡೆಗೆ ಸುಪ್ರೀಂ ಅಸಮಾಧಾನ

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ತನಿಖೆಯಲ್ಲಿ ಉತ್ತರ ಪ್ರದೇಶ ಪೊಲೀಸರ...