‘ರೈತರು ಸಬ್ಸಿಡಿ ಪಡೆಯುತ್ತಾರೆ – ನಾನೂ ಪಡೆದಿದ್ದೇನೆ’: ಸೌತೆಕಾಯಿಗೆ 99 ಲಕ್ಷ ರೂ. ಸಬ್ಸಿಡಿ ಪಡೆದ ಕೇಂದ್ರ ಸಚಿವ ಚೌಧರಿ ಭಂಡತನ

Date:

ಸೌತೆಕಾಯಿ ಕೃಷಿ ಯೋಜನೆಗಾಗಿ ಸುಮಾರು 99 ಲಕ್ಷ ರೂ. ಸರ್ಕಾರಿ ಸಬ್ಸಿಡಿ ಪಡೆದಿರುವುದನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಭಗೀರಥ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ. ‘ತಾವು ಬಾಲ್ಯದಿಂದಲೂ ಕೃಷಿಯಲ್ಲಿ ತೊಡಗಿಸಿಕೊಂಡಿರುವ ರೈತ. ಎಲ್ಲ ರೈತರು ಸಬ್ಸಿಡಿ ಪಡೆಯುವಂತೆ, ನಾನೂ ಅನುದಾನ ಪಡೆದಿದ್ದೇನೆ’ ಎಂದು ಅವರು ಹೇಳಿಕೊಂಡಿದ್ದಾರೆ.

- Advertisement -

ಇತ್ತೀಚೆಗೆ, ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ತನಿಖಾ ವರದಿಯೊಂದನ್ನು ಪ್ರಕಟಿಸಿತ್ತು. ರಾಜಸ್ಥಾನದಲ್ಲಿ ಕೃಷಿ ಭೂಮಿ ಹೊಂದಿರುವ ಚೌಧರಿ, 1.99 ಕೋಟಿ ರೂ. ವೆಚ್ಚದ ಸೌತೆಕಾಯಿ ಕೃಷಿ ಮಾಡಿದ್ದಾರೆ. ಅದಕ್ಕಾಗಿ, ತಾವೇ ಉಪಾಧ್ಯಕ್ಷರಾಗಿರುವ ‘ರಾಷ್ಟ್ರೀಯ ತೋಟಗಾರಿಕಾ ಮಂಡಳಿ’ (NHB) ಮೂಲಕ 99.6 ಲಕ್ಷ ರೂ. ಸಬ್ಸಿಡಿ ಪಡೆದುಕೊಂಡಿದ್ದಾರೆ. ಅಲ್ಲದೆ, ದೇಶಾದ್ಯಂತ ವಾಣಿಜ್ಯ ಬೆಳೆಗಾಗಿ ಈ ಮಂಡಳಿಯಿಂದ ಅನುಮೋದನೆ ಪಡೆದ ಕೇವಲ 467 ಮಂದಿ ಫಲಾನುಭವಿಗಳಲ್ಲಿ ಚೌಧರಿಯೂ ಒಬ್ಬರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ತಾವು ತಮ್ಮದೇ ಸಚಿವಾಲಯದಿಂದ ಸಬ್ಸಿಡಿ ಪಡೆದಿರುವುದನ್ನು ಸಮರ್ಥನೆ ಮಾಡಿಕೊಂಡಿರುವ ಚೌಧರಿ, “ನಾನು ರೈತ. ಬಾಲ್ಯದಿಂದಲೂ ಕೃಷಿಯಲ್ಲಿದ್ದೇನೆ. ಸಾವಿರಾರು ರೈತರು ಸರ್ಕಾರದ ಸಬ್ಸಿಡಿಗಳನ್ನು ಪಡೆಯುತ್ತಾರೆ. ನಾನೂ ಅದೇ ರೀತಿಯಲ್ಲಿ ಪಡೆದುಕೊಂಡಿದ್ದೇನೆ. ಈ ಅನುದಾನಕ್ಕಾಗಿ 2018ರಲ್ಲೇ ಅರ್ಜಿ ಸಲ್ಲಿಸಿದ್ದೆ. ನಾನು ಸಚಿವ ಸ್ಥಾನ ವಹಿಸಿಕೊಳ್ಳುವುದಕ್ಕಿಂತ ಬಹಳ ಹಿಂದೆಯೇ ಪ್ರಕ್ರಿಯೆ ಆರಂಭವಾಗಿತ್ತು. ನಾನು ಎಲ್ಲ ನಿಯಮ ಮತ್ತು ವಿಧಾನಗಳನ್ನು ಪಾಲಿಸಿದ್ದು, ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲ” ಎಂದು ಹೇಳಿಕೊಂಡಿದ್ದಾರೆ.

ಈ ಲೇಖನ ಓದಿದ್ದೀರಾ?: ಪ್ಯಾಲೆಸ್ತೀನ್ ಮಕ್ಕಳ ನರಮೇಧ: ಇಸ್ರೇಲ್‌ ಕುತಂತ್ರ ಬೆತ್ತಲೆ ಮಾಡಿದ ನ್ಯಾ. ಎಸ್ ಮುರಳೀಧರ್ ಯಾರು?

ಆದರೆ, ತನಿಖಾ ವರದಿಯು ಚೌಧರಿ ಅವರ ಸಮರ್ಥನೆಯನ್ನು ಅಲ್ಲಗಳೆಯುತ್ತದೆ. ಯಾಕೆಂದರೆ, ಚೌಧರಿ ಅವರು 2025ರ ಏಪ್ರಿಲ್ 15ರಂದು ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಿದ್ದರು. ಕೇವಲ 14 ದಿನಗಳಲ್ಲೇ, ಅಂದರೆ ಏಪ್ರಿಲ್ 29ರಂದು ಅವರ ಅರ್ಜಿಗೆ ತಾತ್ವಿಕ ಅನುಮೋದನೆ ಸಿಕ್ಕಿತ್ತು. ತದನಂತರ 2026ರ ಮಾರ್ಚ್ 11ರಂದು ಅಂತಿಮ ಅನುಮೋದನೆ ದೊರೆತು, ಮಾರ್ಚ್ 30ರಂದು 99.03 ಲಕ್ಷ ರೂ.ಗಳ ಬಂಡವಾಳ ಹೂಡಿಕೆ ಸಬ್ಸಿಡಿಯನ್ನು ಸಚಿವರ ಬ್ಯಾಂಕ್ ಸಾಲದ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎಂಬುದನ್ನು ವರದಿ ಉಲ್ಲೇಖಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ ಬದುಕುವ ಭಗತ್ ಸಿಂಗ್

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ...

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ – ಪತ್ರಿಕಾಧರ್ಮ ಅಡವಿಟ್ಟ ಮಾಧ್ಯಮಗಳು

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ...