ದೆಹಲಿಗೆ ರೈತರ ಪಾದಯಾತ್ರೆ; ಗಡಿಗಳಲ್ಲಿ ಪೊಲೀಸರ ಸಂಖ್ಯೆ ಹೆಚ್ಚಳ

Date:

ಪ್ರತಿಭಟನಾನಿರತ ರೈತರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಬುಧವಾರ ದೆಹಲಿಯತ್ತ ಪಾದಯಾತ್ರೆ ಆರಂಭಿಸುತ್ತಿದ್ದಾರೆ. ರೈತರು ದೆಹಲಿಗೆ ಪಾದಯಾತ್ರೆ ಹೊರಡುವುದಾಗಿ ಘೋಷಿಸುತ್ತಿದ್ದಂತೆ, ಪಂಜಾಬ್-ಹರಿಯಾಣ ಗಡಿಯಲ್ಲಿ ಹರಿಯಾಣ ಪೊಲೀಸರು ರೈತರನ್ನು ತಡೆಯಲು ಮತ್ತಷ್ಟು ಭದ್ರತೆ ಹೆಚ್ಚಿಸುತ್ತಿದ್ದಾರೆ.

- Advertisement -

ರೈತರ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಇಂದು (ಮಾರ್ಚ್‌ 6) ದೆಹಲಿಗೆ ಪಾದಯಾತ್ರೆ ನಡೆಸುವುದಾಗಿ ಭಾನುವಾರ ಘೋಷಿಸಿದ್ದವು. ದೇಶದ ರೈತರು ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದವು. ಅಲ್ಲದೆ, ಮುಂದಿನ ವಾರ, ದೇಶಾದ್ಯಂತ ನಾಲ್ಕು ಗಂಟೆಗಳ ‘ರೈಲ್ ರೋಖೋ’ ನಡೆಸಲು ಕೂಡ ಕರೆ ನೀಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನಾತ್ಮಕ ಗ್ಯಾರಂಟಿ ನೀಡಬೇಕು, ರೈತರ ಸಾಲ ಮನ್ನಾ ಮಾಡಬೇಕು ಎಂಬ ಹಕ್ಕೊತ್ತಾಯ ಸೇರಿದಂತೆ ಹಲವಾರು ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 13ರಂದು ಸಂಘಟನೆಗಳು ‘ದೆಹಲಿ ಚಲೋ’ಗೆ ಕರೆಕೊಟ್ಟಿದ್ದವು. ಆದರೆ, ಅವರನ್ನು ಹರಿಯಾಣ ಪೊಲೀಸರು ಶಂಭು ಮತ್ತು ಖನೌರಿ ಗಡಿಯಲ್ಲಿ ತಡೆದಿದ್ದಾರೆ.

ಬೃಹತ್ ಬ್ಯಾರಿಕೇಡ್‌ಗಳು, ಕಾಂಕ್ರೀಟ್‌ ಬ್ಲಾಕ್‌ಗಳು, ಕಬ್ಬಿಣದ ಮೊಳೆಗಳನ್ನು ರಸ್ತೆಗೆ ಹಾಕಿರುವ ಪೊಲೀಸರು ಗಡಿ ದಾಟಿ ರೈತರು ದೆಹಲಿಯತ್ತ ಸಾಗದಂತೆ ತಡೆಯುತ್ತಿದ್ದಾರೆ. ರೈತರ ಮೇಲೆ ಪೊಲೀಸರು ಟಿಯರ್ ಗ್ಯಾಸ್ ಮತ್ತು ರಬ್ಬರ್‌ ಬುಲೆಟ್‌ಗಳಿಂದ ದಾಳಿ ನಡೆಸಿದ್ದಾರೆ. ರಬ್ಬರ್ ಬುಲೆಟ್‌ ದಾಳಿಯಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೆ, ಪ್ರತಿಭಟನೆ ಆರಂಭವಾದಾಗಿಂದ ಈವರೆಗೆ 6 ಮಂದಿ ರೈತರು ಸಾವನ್ನಪ್ಪಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೋದಿ ಸರ್ಕಾರದ ವಿರುದ್ಧ ಮಾತಾಡಿದ್ರೆ ಟ್ವಿಟರ್ ಖಾತೆ ಬ್ಲಾಕ್

ದೆಹಲಿ ಗಡಿಯಲ್ಲಿಯೂ ರೈತರನ್ನು ತಡೆಯಲು ದೆಹಲಿ ಪೊಲೀಸರು ಭಾರೀ ಭದ್ರತೆ ನಿಯೋಜಿಸಿದ್ದಾರೆ. ಟಿಕ್ರಿ, ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಬೃಹತ್ ಬ್ಯಾರಿಕೇಡ್‌ಗಳು, ಮುಳ್ಳಿನ ತಂತಿ, ಕಬ್ಬಿಣದ ಮೊಳೆಗಳನ್ನು ಹಾಕಿದ್ದಾರೆ. ರೈಲ್ವೆ, ಮೆಟ್ರೋ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

ರೈತರ ‘ರೈಲ್ ರೋಕೋ’ ಪ್ರತಿಭಟನೆ
ರೈತರ ಆಂದೋಲನವನ್ನು ತೀವ್ರಗೊಳಿಸಲು ರೈತ ಮುಖಂಡರು ಮಾರ್ಚ್ 10 ರಂದು ‘ರೈಲ್ ರೋಕೋ’ ಪ್ರತಿಭಟನೆಗೆ ದೇಶಾದ್ಯಂತ ರೈತರು ಮತ್ತು ಕಾರ್ಮಿಕರಿಗೆ ಕರೆ ನೀಡಿದ್ದಾರೆ. ಅಂದು ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ದೇಶಾದ್ಯಂತ ‘ರೈಲ್ ರೋಕೋ’ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

2020-21ರ ಆಂದೋಲನದ ನೇತೃತ್ವ ವಹಿಸಿದ್ದ ರೈತರ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 14 ರಂದು ದೆಹಲಿಯಲ್ಲಿ ‘ಕಿಸಾನ್ ಮಹಾಪಂಚಾಯತ್’ ನಡೆಸುವುದಾಗಿ ಘೋಷಿಸಿದೆ. ಅಂದು 400ಕ್ಕೂ ಹೆಚ್ಚು ರೈತ ಸಂಘಟನೆಗಳು ‘ಕಿಸಾನ್ ಮಹಾಪಂಚಾಯತ್’ನಲ್ಲಿ ಭಾಗವಹಿಸಲಿವೆ ಎಂದು ಎಸ್‌ಕೆಎಂ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...