ದೆಹಲಿಯ ರಾಮ್‌ಲೀಲ ಮೈದಾನದಲ್ಲಿ ಕೇಂದ್ರದ ವಿರುದ್ಧ ರೈತರ ಬೃಹತ್ ಪ್ರತಿಭಟನೆ

Date:

ರೈತ ವಲಯಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ನೀತಿಗಳ ವಿರುದ್ಧ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

- Advertisement -

ಮೂರು ರೈತ ಕಾನೂನುಗಳನ್ನು ರದ್ದುಪಡಿಸಲು ಆಗ್ರಹಿಸಿ 2020-21ರಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯಲ್ಲಿ ರೈತ ಸಂಘಟನೆಗಳನ್ನು ಮುನ್ನಡೆಸಿದ್ದ ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ ನೀಡಿದ್ದು, ಕೇಂದ್ರದ ನೀತಿಗಳ ವಿರುದ್ಧ ಹೋರಾಟ ತೀವ್ರಗೊಳಿಸುವುದಾಗಿ ಕೇಂದ್ರ ‘ಕಿಸಾನ್ ಮಜ್ದೂರ್‌ ಮಹಾಪಂಚಾಯತ್’ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರತಿಭಟನಾನಿರತಾ ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ಕೇಂದ್ರದಿಂದ ರೈತ ಪರವಾದ ನೀತಿಗಳನ್ನು ಜಾರಿಗೊಳಿಸಬೇಕಿದೆ. ನಾವು ಬೆಳೆಗಳನ್ನು ಪರಿಪೂರ್ಣಗೊಳಿಸಲು ಕನಿಷ್ಠ ಬೆಂಬಲ ಬೆಲೆಗಾಗಿ ಕೂಡ ಬೇಡಿಕೆಯಿಡುತ್ತಿದ್ದೇವೆ. 2021ರ ಅಕ್ಟೋಬರ್‌ನಲ್ಲಿ ಲಕೀಂಪುರ ಕೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ್ದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ಸರ್ಕಾರಿ ನೌಕರಿ ನೀಡಬೇಕು” ಎಂದು ಪಂಜಾಬ್‌ನ ಪಾಟಿಯಾಲದ ಹರ್ಮಾನ್‌ ಸಿಂಗ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

“ನಾವು ಬುಧವಾರ ರಾತ್ರಿ ದೆಹಲಿಗೆ ಆಗಮಿಸಿದ್ದೇವೆ. ನಾವು ಇಲ್ಲಿನ ಗುರುದ್ವಾರದಲ್ಲಿ ಇಂದು ಬೆಳಿಗ್ಗೆ ಪ್ರಾರ್ಥನೆ ನೆರವೇರಿಸಿದೆವು. ಇಂದಿನ ಪ್ರತಿಭಟನೆ ಮುಗಿದ ತರುವಾಯು ಗುರುದ್ವಾರಕ್ಕೆ ತೆರಳುತ್ತೇವೆ”ಎಂದು ಪಾಟಿಯಾಲದ ಬಲಜಿತ್‌ ಸಿಂಗ್‌ ಹೇಳಿದರು.

ರೈತರು ಪ್ರತಿಭಟನೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ದೆಹಲಿಯಲ್ಲಿ ಸಾರ್ವಜನಿಕರು ಸಂಚಾರಿ ದಟ್ಟಣೆ ತಪ್ಪಿಸಲು ಸಂಚಾರಿ ಸೂಚನೆಗಳನ್ನು ಪಾಲಿಸಬೇಕೆಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ರೈತರು ದೆಹಲಿಗೆ ಆಗಮಿಸಿರುವ ಕಾರಣ ದೆಹಲಿಯ ಗಡಿಗಳಲ್ಲಿ ಅರೆಸೇನಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 5 ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸಭೆ ಸೇರಬಾರದು ಎಂದು ದೆಹಲಿ ಪೊಲೀಸರು ರೈತರಿಗೆ ತಿಳಿಸಿದ್ದಾರೆ.

ಅದೇ ರೀತಿ ರಾಮಲೀಲ ಮೈದಾನದಲ್ಲಿ ನಡೆಯುವ ಪ್ರತಿಭಟನೆಗೆ ಟ್ರಾಕ್ಟರ್‌ – ಟ್ರಾಲಿಗಳನ್ನು ತರಬಾರದು ಎಂದು ಪೊಲೀಸರು ರೈತರಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...