ಮೂರನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ; ಪ್ರತಿಭಟನೆಯೊಂದಿಗೆ ಕೇಂದ್ರದ ಜೊತೆ ಮಾತುಕತೆ

Date:

ದೆಹಲಿ ಚಲೋ ಹಮ್ಮಿಕೊಂಡಿರುವ ರೈತ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಹಾಗೂ ಸರ್ಕಾರದೊಂದಿಗೆ ಈಗಾಗಲೇ ಎರಡು ಸುತ್ತು ವಿಫಲಗೊಂಡಿರುವ ಮಾತುಕತೆ ಮೂರನೇ ಸುತ್ತಿಗೆ ಸಜ್ಜುಗೊಂಡಿದೆ.

- Advertisement -

ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಶ್ ಗೋಯಲ್ ಹಾಗೂ ನಿತ್ಯಾನಂದ ರೈ ಅವರು ಇಂದು ಸಂಜೆ ರೈತ ಸಂಘಟನೆಗಳ ಪ್ರತಿನಿಧಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎರಡು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಫೆ.13ರಂದು ರೈತರು ದೆಹಲಿ ಚಲೋ ನಡೆಸಲು ಪ್ರಾರಂಭಿಸಿದರು.

ಈ ನಡುವೆ  ಭಾರತೀಯ ಕಿಸಾನ್ ಯೂನಿಯನ್‌ ಹರ್ಮೀತ್‌ ಸಿಂಗ್‌ ಹಾಗೂ ಪಂಜಾಬ್‌ನ ಸಂಯುಕ್ತ ಕಿಸಾನ್‌ ಮೋರ್ಚಾ ಫೆ.16ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ಫೆ.15 ರಂದು (ಇಂದು) ಪಂಜಾಬ್‌ನ ಎಲ್ಲ ಟೋಲ್‌ ಪ್ಲಾಜಾಗಳಲ್ಲಿ ಬೆಳಿಗ್ಗೆ 11 ಗಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಪ್ರತಿಭಟನೆ ನಡೆಸಲಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ಎರಡನೇ ದಿನ (ಫೆ.14) ನಡೆದ ಪ್ರತಿಭಟನೆಯಲ್ಲಿ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿಯಲ್ಲಿ ಭದ್ರತಾ ಪಡೆಗಳು ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ ರೈತರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.

ಹರಿಯಾಣ ಪೊಲೀಸರು ಡಾಟಾ ಸಿಂಘ್ವಾಲಾ-ಖನೌರಿ ಗಡಿಯಲ್ಲಿ ಬ್ಯಾರಿಕೇಡ್‌ಗಳಿಂದ ಭದ್ರಪಡಿಸಿದ್ದು, ರೈತರು ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ದೆಹಲಿಗೆ ಹೋಗುವುದನ್ನು ತಡೆದಿದ್ದಾರೆ. ಪ್ರತಿಭಟನಾ ನಿರತ ರೈತರು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ ಮತ್ತು ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ .

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...