ಕೇರಳ | ಬಿಜೆಪಿ ರಾಜಕೀಯಕ್ಕೆ ಬೇಸರ: ಕರ್ನಾಟಕದ ನೆರವು ಬೇಡವೆಂದ ಸಂತ್ರಸ್ತ ಕುಟುಂಬ

Date:

ಇತ್ತೀಚಿಗೆ ಕೇರಳ ದ ವಯನಾಡಿನಲ್ಲಿ ಆನೆ ದಾಳಿಯಿಂದ ಮೃತಪಟ್ಟ ಸಂತ್ರಸ್ತ ಕುಟುಂಬ ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆ ನೀಡಿದ 15 ಲಕ್ಷ ರೂ. ನೆರವನ್ನು ನಿರಾಕರಿಸಿದೆ. ಬಿಜೆಪಿಯ ಸಂಕುಚಿತ ರಾಜಕೀಯಕ್ಕೆ ಬೇಸರ ವ್ಯಕ್ತಪಡಿಸಿ ಹಣ ಬೇಡವೆಂದು ಹೇಳಿದೆ.

- Advertisement -

ಫೆ.10ರಂದು ವಯನಾಡಿನ ಮನಾಂತವಾಡಿ ಬಳಿಯ ಪಯ್ಯಂಪ್ಪಲ್ಲಿ ಎಂಬಲ್ಲಿ ಬೇಲೂರಿನ ಮಾಕ್ನಾ ಎಂಬ ಕಾಡಾನೆ ತುಳಿತದಿಂದ ಅಜೀಶ್ ಜೋಸೆಫ್ ಮನಚಿಯಿಲ್(42) ಎಂಬುವವರು ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಫೆ.26ರಂದು ಸಾರ್ವಜನಿಕಗೊಳಿಸಿದ ಪತ್ರದಲ್ಲಿ ಅಜೀಶ್ ಜೋಸೆಫ್ ಕುಟುಂಬ, “ಮಧ್ಯಸ್ಥಿಕೆ ವಹಿಸಿದ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ. ಆದಾಗ್ಯೂ ನಮಗಾದ ನಷ್ಟವನ್ನು ಯಾರೊಬ್ಬರು ತಂದುಕೊಡಲು ಸಾಧ್ಯವಿಲ್ಲ. ಇಂತಹ ಸಂಕಷ್ಟದ ಸಮಯದಲ್ಲೂ ಪ್ರತಿಯೊಬ್ಬರು ನಮ್ಮ ಜೊತೆಗೆ ಇರುವರೆಂದು ಭಾವಿಸುತ್ತೇವೆ. ಆದರೆ ಕರ್ನಾಟಕದಲ್ಲಿ ಬಿಜೆಪಿಯು ಈ ವಿವಾದವನ್ನು ರಾಜಕೀಯಗೊಳಿಸುವುದನ್ನು ಕೇಳಿ ನಮಗೆ ದುಃಖವಾಗಿದೆ. ಇವರ ಪ್ರತಿಕ್ರಿಯೆ ಅಮಾನವೀಯವಾಗಿದೆ. ಈ ಸಂದರ್ಭದಲ್ಲಿ ನಾವು ಹಣಕಾಸು ನೆರವನ್ನು ಗೌರವಿತವಾಗಿ ನಿರಾಕರಿಸುತ್ತೇವೆ” ಎಂದು ತಿಳಿಸಿದ್ದಾರೆ.

ಫೆ.19ರಂದು ವಯನಾಡ್ ಸಂಸದ ಹಾಗೂ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅಜೀಶ್ ಕುಟುಂಬಕ್ಕೆ ಕರೆ ಮಾಡಿ ಕರ್ನಾಟಕ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ಲಕ್ಷ ರೂ. ನೆರವು ನೀಡಿದೆ ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಇದೇ ದಿನದಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜೆಯೇಂದ್ರ ಸಾಮಾಜಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ರಾಹುಲ್‌ ಗಾಂಧಿಯವರನ್ನು ಸಂತೈಸಲು ಸಂತ್ರಸ್ತ ಕುಟುಂಬಕ್ಕೆ ನೆರವು ನೀಡಿರುವ ಕರ್ನಾಟಕದ ನಿರ್ಧಾರ ಕರ್ನಾಟಕ ತೆರಿಗೆ ಪಾವತಿದಾರರ ಹಣವನ್ನು ಅತಿರೇಕವಾಗಿ ದುರ್ಬಳಕೆ ಮಾಡುವುದಾಗಿದೆ. ಕರ್ನಾಟಕದ ಆನೆಯ ಮೇಲೆ ಸುಳ್ಳು ಆರೋಪ ಹೊರಿಸುತ್ತಿರುವುದು ವಿಶ್ವಾಸ ದ್ರೋಹವಾಗಿದೆ” ಎಂದು ತಿಳಿಸಿದ್ದರು.

ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಕರ್ನಾಟಕದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಬಿಜೆಪಿಯು ಮಾನವೀಯತೆಯ ವಿರುದ್ಧವಾಗಿದೆ. ಆನೆ ಕರ್ನಾಟಕದ ಕಣ್ಗಾವಲಿಯಲ್ಲಿ ಇದ್ದ ಕಾರಣ ಮಾನವೀಯತೆಯ ನೆಲೆಯಲ್ಲಿ ನೆರವನ್ನು ನೀಡಲಾಗಿತ್ತು ಎಂದಿದ್ದರು.

ಈ ನಡುವೆ ಕೇರಳ ಸರ್ಕಾರ ಶನಿವಾರ(ಫೆ.24) ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ. ನೆರವು ನೀಡಿದೆ. ಇತರ ಸ್ವಯಂಸೇವಾ ಸಂಸ್ಥೆಗಳು ಹಾಗೂ ಕುಟುಂಬಗಳು ಕುಟುಂಬಕ್ಕೆ ನೆರವು ನೀಡುವುದಾಗಿ ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...