ವಿಷ ಸೇವಿಸಿ ತಂದೆ-ಮಗಳ ಸಾವು, ತಾಯಿ-ಮಗನ ಸ್ಥಿತಿ ಗಂಭೀರ!

Date:

ಹಣಕಾಸಿನ ವಿಚಾರದ ಕೌಟುಂಬಿಕ ಕಲಹವೊಂದು ಇಡೀ ಕುಟುಂಬವನ್ನೇ ಬಲಿ ತೆಗೆದುಕೊಂಡಿರುವ ದಾರುಣ ಘಟನೆ ಪಂಜಾಬ್‌ನ ಪಟಿಯಾಲಾ ಜಿಲ್ಲೆಯ ಆಫೀಸರ್ಸ್ ಕಾಲೋನಿಯಲ್ಲಿ ನಡೆದಿದೆ. ಬ್ಯಾಂಕ್ ಉದ್ಯೋಗಿಯೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ತಂದೆ ಮತ್ತು ಮಗಳು ಸಾವನ್ನಪ್ಪಿದ್ದಾರೆ.

- Advertisement -

ಮೃತರನ್ನು 45 ವರ್ಷದ ಖಾಸಗಿ ಬ್ಯಾಂಕ್ ಉದ್ಯೋಗಿ ವಿಕಾಸ್ ಬತೀಶ್ ಮತ್ತು ಅವರ 13 ವರ್ಷದ ಮಗಳು ಖುಷಿ ಬತೀಶ್ ಎಂದು ಗುರುತಿಸಲಾಗಿದೆ. ವಿಷ ಸೇವನೆಯಿಂದ ಅಸ್ವಸ್ಥರಾಗಿರುವ ಪತ್ನಿ ತಮನ್ನಾ ಬತೀಶ್ (43) ಮತ್ತು ಮಗ ಕನವ್ ಬತೀಶ್ (11) ಅವರ ಸ್ಥಿತಿ ಚಿಂತಾಜನಕವಾಗಿದ್ದು, ರಾಜೀಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ʼಅಪ್ಪ-ಅಮ್ಮ ಕ್ಷಮಿಸಿ, ಈ ಅವಮಾನ ಸಹಿಸಲಾರೆʼ: ಶಿಕ್ಷಕಿ ಬೈದರೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಕಳೆದ ಬುಧವಾರ ರಾತ್ರಿ ಬತೀಶ್ ಅವರ ಮನೆಯಲ್ಲಿ ಈ ದುರಂತ ನಡೆದಿದೆ. ವಿಷ ಸೇವಿಸಿದ ಬಳಿಕ ಕುಟುಂಬದ ನಾಲ್ವರೂ ಅಸ್ವಸ್ಥರಾಗಿದ್ದನ್ನು ಗಮನಿಸಿದ ವಿಕಾಸ್ ಅವರ ಅತ್ತೆ-ಮಾವ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ವಿಕಾಸ್ ಮತ್ತು ಮಗಳು ಖುಷಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಡೆಪ್ಯೂಟಿ ಎಸ್‌ಪಿ ಸಂಜೀವ್ ಸಿಂಗ್ಲಾ, “ಪ್ರಾಥಮಿಕ ತನಿಖೆಯಲ್ಲಿ ಹಣಕಾಸಿನ ಸಮಸ್ಯೆ ಮತ್ತು ಕೌಟುಂಬಿಕ ಕಲಹವೇ ಸಾವಿಗೆ ಕಾರಣವಾಗಿರುವ ಸಾಧ್ಯತೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5 7
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...