ತೆಲಂಗಾಣದಲ್ಲಿ 21% ಮತದಾರರ ಹೆಸರು ಡಿಲೀಟ್‌ ಆಗುವ ಆತಂಕ; ಕಾಂಗ್ರೆಸ್‌ ನಾಯಕರಿಗೆ ಸಿಎಂ ರೇವಂತ್‌ ರೆಡ್ಡಿ ಎಚ್ಚರಿಕೆ

Date:

ತೆಲಂಗಾಣದಲ್ಲಿ ನಡೆದಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವೇಳೆ ಸುಮಾರು 21% ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಅಳಿಸಿಹೋಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ರೇವಂತ್‌ ರೆಡ್ಡಿ ಪಕ್ಷದ ಸಚಿವರು, ಶಾಸಕರು ಮತ್ತು ಹಿರಿಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

- Advertisement -

ಆಗಸ್ಟ್‌ 10ರಂದು SIR ಪ್ರಕ್ರಿಯೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಡೆದ ಸಭೆಯಲ್ಲಿ ರೇವಂತ್‌ ರೆಡ್ಡಿ, ಮತದಾರರ ಹೆಸರುಗಳನ್ನು ಡಿಲೀಟ್‌ ಆಗದಂತೆ ರಕ್ಷಿಸುವಲ್ಲಿ ವಿಫಲರಾದರೆ ಅದಕ್ಕೆ ಬೂತ್‌ ಮಟ್ಟದ ಉಸ್ತುವಾರಿ ಸೇರಿದಂತೆ ಪಕ್ಷದ ನಾಯಕರೇ ಹೊಣೆ ಎಂದು ಹೇಳಿದ್ದಾರೆ. ವಿವಿಧ ಕ್ಷೇತ್ರಗಳು ಹಾಗೂ ಜಿಲ್ಲೆಗಳಿಂದ ಬಂದಿರುವ ಆಂತರಿಕ ವರದಿಗಳ ಆಧಾರದ ಮೇಲೆ ಅವರು ಈ ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಮತದಾರರ ಹೆಸರುಗಳು ಡಿಲೀಟ್‌ ಆಗುವ ಅಪಾಯದಲ್ಲಿವೆ ಎಂಬುದರ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿರುವ ಲೋಕಸಭೆ ಹಾಗೂ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳನ್ನು ಗುರುತಿಸಿ, ಕರಡು ಮತದಾರರ ಪಟ್ಟಿ ಪ್ರಕಟವಾಗುವ ಮುನ್ನವೇ ಅವುಗಳನ್ನು ಪರಿಹರಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಸುವಂತೆಯೂ ಸಚಿವರಿಗೆ ಸೂಚಿಸಲಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನಾಯಕರು ತಮ್ಮ ಕ್ಷೇತ್ರಗಳಲ್ಲೇ ನಾಲ್ಕು ದಿನಗಳ ಕಾಲ ಉಳಿದು, ಮತದಾರರ ಪಟ್ಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಬೇಕು. ಆಗಸ್ಟ್‌ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗುವ ಮುನ್ನವೇ ಈ ಕಾರ್ಯ ಪೂರ್ಣಗೊಳಿಸಬೇಕು ಎಂದು ರೇವಂತ್‌ ರೆಡ್ಡಿ ಸೂಚಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಹೆಸರು ಕಾಣಿಸದಿದ್ದರೆ ಹೊಸದಾಗಿ ನೋಂದಣಿ ಮಾಡಿಸಲು ಪಕ್ಷದ ನಾಯಕರು ಮತದಾರರಿಗೆ ನೆರವಾಗಬೇಕು. ಇದಕ್ಕಾಗಿ ಫಾರ್ಮ್‌-6 ಮೂಲಕ ಅರ್ಜಿ ಸಲ್ಲಿಸಿ ಹೆಸರು ಸೇರ್ಪಡೆಗೊಳಿಸುವಂತೆ ಸಹಾಯ ಮಾಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಂತಿಮ ಮತದಾರರ ಪಟ್ಟಿ ಅಕ್ಟೋಬರ್‌ 19ರಂದು ಪ್ರಕಟವಾಗಲಿದೆ.

SIR ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಪಕ್ಷ ಸಹಿಸುವುದಿಲ್ಲ. ಅಗತ್ಯವಿದ್ದರೆ ಎಐಸಿಸಿ ನಿರ್ದೇಶನದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರೇವಂತ್‌ ರೆಡ್ಡಿ ಎಚ್ಚರಿಸಿದ್ದಾರೆ.

ತೆಲಂಗಾಣ ಮುಖ್ಯ ಚುನಾವಣಾಧಿಕಾರಿ ಸಿ. ಸುದರ್ಶನ್‌ ರೆಡ್ಡಿ ನೀಡಿರುವ ಮಾಹಿತಿಯ ಪ್ರಕಾರ, ರಾಜ್ಯದ 33 ಜಿಲ್ಲೆಗಳಲ್ಲಿ ಒಟ್ಟು 3,38,26,448 ಎಣಿಕೆ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿತ್ತು. ಇವುಗಳಲ್ಲಿ 2,64,73,616 ನಮೂನೆಗಳನ್ನು ಮತದಾರರು ಸಲ್ಲಿಸಿದ್ದು, ಅವುಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಉಳಿದ 73,52,832 ನಮೂನೆಗಳನ್ನು ಚುನಾವಣಾ ಆಯೋಗ ‘ಸಂಗ್ರಹಿಸಲಾಗದ’ (Uncollectable) ನಮೂನೆಗಳೆಂದು ಗುರುತಿಸಿದೆ. ಈ ಮತದಾರರನ್ನು ‘ಗೈರು, ಸ್ಥಳಾಂತರಗೊಂಡವರು ಅಥವಾ ಮೃತಪಟ್ಟವರು’ (Absent, Shifted or Dead) ಎಂಬ ವರ್ಗಕ್ಕೆ ಸೇರಿಸಲಾಗಿದೆ.

ಈ ಮತದಾರರ ಹೆಸರುಗಳ ಡಿಲೀಷನ್‌ ಸಂಬಂಧ ಚುನಾವಣಾ ಆಯೋಗದಿಂದ ನೋಟಿಸ್‌ ಬಂದಿದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಿ, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮತದಾರರಿಗೆ ನೆರವಾಗುವಂತೆ ರೇವಂತ್‌ ರೆಡ್ಡಿ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್‌ 17ರಿಂದ ಅಕ್ಟೋಬರ್‌ 15ರವರೆಗೆ ನಡೆಯಲಿದೆ.

ಇದನ್ನೂ ಓದಿ: ಎಸ್‌ಐಆರ್‌ | ಬೆಂಗಳೂರಿನ ಒಂದೇ ಬೂತ್‌ನಲ್ಲಿ 93.71% ಮತದಾರರ ಹೆಸರು ನಾಪತ್ತೆ

ಈ ನಡುವೆ, SIRಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಚುನಾವಣಾ ಆಯೋಗ ಬಹಿರಂಗಪಡಿಸಬೇಕು ಎಂದು ಭಾರತ ರಾಷ್ಟ್ರ ಸಮಿತಿ (BRS) ಒತ್ತಾಯಿಸಿದೆ. ಬಿಆರ್‌ಎಸ್‌ ನಾಯಕ ಹಾಗೂ ಎಂಎಲ್‌ಸಿ ಡಿ. ಶ್ರವಣ್‌, 73 ಲಕ್ಷಕ್ಕೂ ಹೆಚ್ಚು ನಮೂನೆಗಳನ್ನು ‘ಸಂಗ್ರಹಿಸಲಾಗದ’ ಎಂದು ಏಕೆ ಗುರುತಿಸಲಾಗಿದೆ? ಎಂದು ಪ್ರಶ್ನಿಸಿದ್ದಾರೆ. ಮುಖ್ಯ ಚುನಾವಣಾಧಿಕಾರಿ ಕಚೇರಿಯ ಪ್ರಕಾರ, ಈ 73,52,832 ಮತದಾರರ ಪೈಕಿ 45 ಲಕ್ಷಕ್ಕೂ ಹೆಚ್ಚು ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು ಎಂದು ಗುರುತಿಸಲಾಗಿದೆ. 11 ಲಕ್ಷಕ್ಕೂ ಹೆಚ್ಚು ಮತದಾರರು ಗೈರು ಅಥವಾ ಪತ್ತೆಯಾಗದವರು ಎಂದು ದಾಖಲಿಸಲಾಗಿದೆ.

SIR ಪರಿಶೀಲನೆ ವೇಳೆ ತೆಲಂಗಾಣ ಸರ್ಕಾರ ಇತ್ತೀಚೆಗೆ ಪರಿಚಯಿಸಿರುವ ಫ್ಯಾಮಿಲಿ ರಿಜಿಸ್ಟರ್‌ ಸರ್ಟಿಫಿಕೇಟ್‌ (FRC) ಅನ್ನು ಮಾನ್ಯ ದಾಖಲೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ತಿಳಿಸಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮದ ಬಗ್ಗೆಯೂ ರೇವಂತ್‌ ರೆಡ್ಡಿ ಸಭೆಯಲ್ಲಿ ಚರ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಅಭಿಪ್ರಾಯ ಪಡೆಯುವ ಸಾಧ್ಯತೆಯ ಬಗ್ಗೆಯೂ ಸರ್ಕಾರ ಚಿಂತನೆ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...