ಬಂಧನ ಭೀತಿಯಿಂದ ರಾತ್ರಿಯಿಡಿ ಕಾಂಗ್ರೆಸ್ ಕಚೇರಿಯಲ್ಲೇ ಕಳೆದ ವೈ ಎಸ್ ಶರ್ಮಿಳಾ: ವಿಡಿಯೋ ವೈರಲ್

Date:

ಸರ್ಕಾರ ಗೃಹ ಬಂಧನಕ್ಕೆ ಒಳಪಡಿಸುವ ಭೀತಿಯಿಂದ ಆಂಧ್ರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆ ವೈ ಎಸ್ ಶರ್ಮಿಳಾ ಅವರು ರಾತ್ರಿಯಿಡಿ ಕಾಂಗ್ರೆಸ್ ಕಚೇರಿಯಲ್ಲೇ ಕಳೆದಿದ್ದಾರೆ. ಶರ್ಮಿಳಾ ರಾತ್ರಿಯಿಡಿ ವಾಸ್ತವ್ಯ ಮಾಡಿರುವ ವಿಡಿಯೋ ಎಲ್ಲಡೆ ವೈರಲ್ ಆಗಿದೆ.

ವೈರಲ್‌ ಆದ ವಿಡಿಯೋದಲ್ಲಿ ಇರುವಂತೆ ವೈ ಎಸ್‌ ಶರ್ಮಿಳಾ ಅವರು ವಿಜಯವಾಡದ ಪಕ್ಷದ ಕಚೇರಿಯ ತನ್ನ ಚೇಂಬರ್‌ ಪಕ್ಕದಲ್ಲೇ ಹಾಸಿಗೆಯಲ್ಲಿ ಮಲಗಿದ್ದಾರೆ. ಕಾರ್ಯಕರ್ತರಿಂದ ಹಮ್ಮಿಕೊಳ್ಳಲಾದ ಚಲೋ ಸೆಕ್ರೆಟ್ರಿಯೇಟ್ ಪ್ರತಿಭಟನೆಯ ನಂತರ ಈ ಬೆಳವಣಿಗೆ ನಡೆದಿದೆ.

ನಿರುದ್ಯೋಗ ಯುವಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸುವಂತೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ಯೋಜಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಜಯವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೈ ಎಸ್ ಶರ್ಮಿಳಾ, ಜಗನ್‌ ಮೋಹನ್ ರೆಡ್ಡಿ ಕಳೆದ ಐದು ವರ್ಷಗಳಲ್ಲಿ ಯುವಕರು, ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇಣಿಗೆ ನೀಡಿ ಇಲ್ಲವೇ ಇಡಿ, ಐಟಿ ದಾಳಿ ಎದುರಿಸಿ: 30 ಸಂಸ್ಥೆಗಳಿಂದ ₹335 ಕೋಟಿ ಬಿಜೆಪಿಗೆ

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲೂ ಕೂಡ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ನಿರುದ್ಯೋಗಿಗಳ ಪರವಾಗಿ ಪ್ರತಿಭಟನೆಗೆ ಕರೆ ನೀಡಿದರೆ, ನೀವು ನಮ್ಮನ್ನು ಗೃಹಬಂಧನಕ್ಕೆ ಒಳಪಡಿಸಲು ಯತ್ನಿಸುತ್ತಿದ್ದೀರಾ? ಪ್ರಜಾಪ್ರಭುತ್ವದಲ್ಲಿ ನಮಗೆ ಪ್ರತಿಭಟಿಸಲು ಹಕ್ಕಿಲ್ಲವೆ? ಮಹಿಳೆಯಾದ ನಾನು ಪೊಲೀಸರ ಗೃಹ ಬಂಧನದಿಂದ ತಪ್ಪಿಸಿಕೊಂಡು ರಾತ್ರಿಯಿಡಿ ಪೊಲೀಸರ ಕಚೇರಿಯಲ್ಲಿ ಕಳೆಯುವುದು ಸರ್ಕಾರಕ್ಕೆ ಖಂಡಿತಾ ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದ್ದಾರೆ.

“ಸಾವಿರಾರು ಪೊಲೀಸರು ನಮ್ಮನ್ನು ಸುತ್ತುವರಿದಿದ್ದಾರೆ. ಕಬ್ಬಿಣದ ತಂತಿಗಳನ್ನು ಕಟ್ಟಿ ನಮ್ಮನ್ನು ಒತ್ತೆಯಾಳಾಗಿ ಇಡಲಾಗಿದೆ. ನಾವು ನಿರುದ್ಯೋಗಿಗಳ ಪರ ನಿಂತರೆ ಅವರು ನಮ್ಮನ್ನು ಬಂಧಿಸಲು ಯತ್ನಿಸುತ್ತಿದ್ದಾರೆ.ನಮ್ಮ ಪ್ರಯತ್ನವನ್ನು ತಪ್ಪಿಸುವ ನೀವು ಸರ್ವಾಧಿಕಾರಿಗಳು. ನಿಮ್ಮ ಕ್ರಮಕ್ಕೆ ಇದು ಸಾಕ್ಷಿಯಾಗಿದೆ. ವೈಸಿಪಿ ಸರ್ಕಾರ ನಿರುದ್ಯೋಗಿಗಳ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದರು.

ಆಂಧ್ರ ಪ್ರದೇಶದ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸೋದರಿ ಆಗಿರುವ ವೈ ಎಸ್‌ ಶರ್ಮಿಳಾ ಅವರು ಜನವರಿ 4ರಂದು ಕಾಂಗ್ರೆಸ್ ಸೇರ್ಪಡೆಗೊಂಡು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕಗೊಂಡರು. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ತೆಲಂಗಾಣದ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷರಾಗಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್...

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...