ಶುಲ್ಕ ವಿವಾದ | ಶಾಲೆಯಿಂದ ಹೊರಹಾಕಲಾಗಿದ್ದ 32 ವಿದ್ಯಾರ್ಥಿಗಳ ಮರು ಸೇರ್ಪಡೆಗೆ ಆದೇಶ

Date:

ದೆಹಲಿಯಲ್ಲಿ ಶುಲ್ಕ ವಿವಾದ ಕಾರಣಕ್ಕಾಗಿ ಶಾಲೆಯಿಂದ ಹೊರದಬ್ಬಲಾಗಿದ್ದ 32 ವಿದ್ಯಾರ್ಥಿಗಳ ಪೋಷಕರು ದೂರುಗಳನ್ನು ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಮರಳಿ ಸೇರಿಸಿಕೊಳ್ಳುವಂತೆ ಡಿಪಿಎಸ್‌ ದ್ವಾರಕಾ ಶಾಲೆಗೆ ಶಿಕ್ಷಣ ನಿರ್ದೇಶನಾಲಯ (ಡಿಒಇ) ನಿರ್ದೇಶನ ನೀಡಿದೆ.

- Advertisement -

ಶಾಲೆಗೆ ನೀಡಲಾದ ಆದೇಶ ಪ್ರತಿಯಲ್ಲಿ ಡಿಒಇ, “ಶಾಲೆಯ ಧೋರಣೆ, ಕ್ರಮಗಳು ನ್ಯಾಯಾಲಯದ ನಿರ್ದೇಶನಗಳನ್ನು ಉಲ್ಲಂಘಿಸಿವೆ. ಶಾಲೆಯು ಇಲಾಖೆಯ ಅನುಮೋದನೆಯಿಲ್ಲದೆ ಶುಲ್ಕ ಹೆಚ್ಚಳ ಮತ್ತು ಶುಲ್ಕ ಸಂಬಂಧಿತ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ತಾರತಮ್ಯವನ್ನು ಮಾಡುವಂತಿಲ್ಲ. ಯಾವುದೇ ಮಗು ಶುಲ್ಕ ಸಂಬಂಧಿತ ಸಮಸ್ಯೆಗಳ ಕಾರಣಕ್ಕೆ ತಾರತಮ್ಯವನ್ನು ಎದುರಿಸಬಾರದು. ಆದರೂ, ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಲಾಗಿದೆ. ಇದು ಕಾನೂನುಬಾಹಿರ ಕ್ರಮ. ಶಾಲೆಯಿಂದ ಹೊರಹಾಕಲ್ಪಟ್ಟ ಮಕ್ಕಳನ್ನು ಮರಳಿ ಸೇರಿಸಿಕೊಳ್ಳಬೇಕು” ಎಂದು ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಸರಿಯಾದ ಯಾವುದೇ ಕಾರಣ, ಸಮರ್ಥನೆಯ ಅಂಶಗಳಿಲ್ಲದೆ ವಿದ್ಯಾರ್ಥಿಗಳನ್ನು ತೆಗೆದುಹಾಕುವುದು, ಪೋಷಕರ ಒಪ್ಪಿಗೆಯಿಲ್ಲದೆ ವಿದ್ಯಾರ್ಥಿಗಳನ್ನು ಶಾಲಾ ಬಸ್‌ಗಳಲ್ಲಿಯೇ ಮನೆಗೆ ಕಳುಹಿಸುವುದು ಅನುಚಿತ ಕೃತ್ಯವಾಗಿದೆ. ಹೆಚ್ಚಿನ ಶುಲ್ಕವನ್ನು ಪಾವತಿಸದ ಕಾರಣ ಪ್ರವೇಶ ಪತ್ರ ಅಥವಾ ವರ್ಗಾವಣೆ ಪ್ರಮಾಣಪತ್ರಗಳನ್ನು ತಡೆಹಿಡಿಯುವುದು ಸೂಕ್ತವಲ್ಲ. ಇಂತಹ ಧೋರಣೆಯನ್ನು ಸಹಿಸಲಾಗದು” ಎಂದು ಹೇಳಿದೆ.

“ಶುಲ್ಕ ವಿವಾದದ ಕಾರಣಕ್ಕಾಗಿ ಶಾಲೆಯಿಂದ ತೆಗೆದುಹಾಕಲಾದ ಎಲ್ಲ ವಿದ್ಯಾರ್ಥಿಗಳನ್ನು ಮತ್ತೆ ಸೇರಿಸಿಕೊಳ್ಳಬೇಕು. ಬಲವಂತ ಅಥವಾ ತಾರತಮ್ಯಕ್ಕೆ ಒಳಪಡಿಸಬಾರದು. ಶಾಲೆಯು ಮೂರು ದಿನಗಳಲ್ಲಿ ಅನುಸರಣಾ ವರದಿಯನ್ನು ಇಲಾಖೆಗೆ ಸಲ್ಲಿಸಬೇಕು ಎಂದು ಡಿಒಇ ಹೇಳಿದೆ. ಆದಾಗ್ಯೂ, ಈವರೆಗೆ ಶಾಲೆಯಿಂದ ಯಾವುದೇ ಪಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಪೋಷಕರ ದೂರಿನ ಪ್ರಕಾರ, “ಶಾಲೆಯು ಕಳೆದ ಕೆಲವು ವರ್ಷಗಳಿಂದ ಅನುಮೋದಿಸದ ಶುಲ್ಕಗಳನ್ನು ಸಂಗ್ರಹಿಸಲು ಮುಂದಾಗಿದೆ. ಆ ಶುಲ್ಕಗಳನ್ನು ಪಾವತಿಸುವಂತೆ ಪೋಷಕರ ಮೇಲೆ ಒತ್ತಡ ಮತ್ತು ಬಲವಂತದ ತಂತ್ರಗಳನ್ನು ಬಳಸಿದೆ. ಮಾಸಿಕ ಶುಲ್ಕವನ್ನು ಈ ಹಿಂದೆ 7,000 ರೂ. ಹೆಚ್ಚಿಸಲಾಗಿತ್ತು. ಇತ್ತೀಚೆಗೆ ಅದನ್ನು 9,000 ರೂ.ಗೆ ಹೆಚ್ಚಿಸಲಾಗಿದೆ” ಎಂದು ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...