21 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಲಡಾಖ್ ಹೋರಾಟಗಾರ ಸೋನಮ್ ವಾಂಗ್​ಚುಕ್

Date:

ಲಡಾಖಿನ ನಾಜೂಕು ಪರಿಸರದ ಉಳಿವು ಮತ್ತು 6ನೇ ಶೆಡ್ಯೂಲಿನೊಂದಿಗೆ ರಾಜ್ಯದ ಸ್ಥಾನಮಾನಕ್ಕೆ ಒತ್ತಾಯಿಸಿ ಇಂಜಿನಿಯರ್ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್​ಚುಕ್ ಕಳೆದ 21 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಮಾ.26ರಂದು ಕೊನೆಗೊಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

21 ದಿನಗಳ ಕಾಲ ಉಪ್ಪು ಮತ್ತು ನೀರನ್ನು ಮಾತ್ರ ಸೇವಿಸಿ ಸತ್ಯಾಗ್ರಹ ನಡೆಸುತ್ತಿದ್ದರು. ನನ್ನ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರೂ ಕೂಡ, ಹೋರಾಟ ಮುಂದುವರಿಯಲಿದೆ ಎಂದು ಸೋನಮ್ ವಾಂಗ್​ಚುಕ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಇವರ ಹೋರಾಟಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

“ಲಡಾಖ್‌ಗೆ ಸಾಂವಿಧಾನಿಕ ರಕ್ಷಣೆ ಮತ್ತು ಜನರ ರಾಜಕೀಯ ಹಕ್ಕುಗಳಿಗಾಗಿ ನಾನು ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಹೇಳುವ ಮೂಲಕ ವಾಂಗ್‌ಚುಕ್ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉಪವಾಸ ಅಂತ್ಯಗೊಳ್ಳುತ್ತಿದ್ದಂತೆ ಕೇಂದ್ರಾಡಳಿತ ಪ್ರದೇಶದ ವಿವಿಧ ಭಾಗಗಳಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದು, ಇದೇ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಮಹಿಳಾ ಸಂಘಟನೆಗಳು ಘೋಷಿಸಿವೆ.

ಮಾರ್ಚ್ 6ರಂದು ಸೋನಮ್ ವಾಂಗ್​ಚುಕ್ ತಮ್ಮ ಉಪವಾಸವನ್ನು ಪ್ರಾರಂಭಿಸಿದ್ದರು. 21 ದಿನಗಳವರೆಗೆ ಸತ್ಯಾಗ್ರಹ ನಡೆಸುತ್ತೇನೆ. ಕೇಂದ್ರ ಸರ್ಕಾರವು ಒಂದು ವೇಳೆ ನಮ್ಮ ಮನವಿಗೆ ಓಗೊಡದಿದ್ದರೆ, ನನ್ನ ಹೋರಾಟವನ್ನು ಸಾವಿನವರೆಗೂ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲೂಬಹುದು” ಎಂದು ಹೇಳಿದ್ದರು.

ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಲಡಾಖ್‌ಗೆ ತೆರಳಿದ್ದ ಖ್ಯಾತ ನಟ ಪ್ರಕಾಶ್ ರಾಜ್, ಹೋರಾಟದಲ್ಲಿ ಭಾಗವಹಿಸುವ ಮೂಲಕ ಸೋನಮ್ ವಾಂಗ್​ಚುಕ್ ಅವರನ್ನು ಬೆಂಬಲಿಸಿದ್ದರು. ಅಲ್ಲದೇ, ಈ ಕುರಿತು ಅವರು ಟ್ವಿಟರ್​ನಲ್ಲಿ ಪೋಸ್ಟ್ ಕೂಡ ಹಂಚಿಕೊಂಡಿದ್ದರು.

ಇದನ್ನು ಓದಿದ್ದೀರಾ? ಲಡಾಖ್​ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ಪ್ರಕಾಶ್ ರಾಜ್; ವಾಂಗ್​ಚುಕ್ ಹೋರಾಟಕ್ಕೆ ಬೆಂಬಲ

ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್​ಚುಕ್, ಬಾಲಿವುಡ್ ನಟ ಅಮೀರ್ ಖಾನ್, ಕರೀನಾ ಕಪೂರ್, ಬೊಮನ್ ಇರಾನಿ ನಟನೆಯ, ರಾಜ್‌ಕುಮಾರ್ ಹಿರಾನಿ ನಿರ್ದೇರ್ಶನದ ‘ತ್ರೀ ಈಡಿಯಟ್ಸ್ (3 idiots) ಸಿನಿಮಾಕ್ಕೆ ಪ್ರೇರಣೆಯಾಗಿದ್ದರು. ಆದರೆ, ಈ ಹೋರಾಟಕ್ಕೆ ಚಿತ್ರತಂಡವಾಗಲೀ, ನಟರಾಗಲೀ ಬೆಂಬಲ ಸೂಚಿಸಿರಲಿಲ್ಲ. ಹೀಗಾಗಿ, ಸೋಷಿಯಲ್ ಮೀಡಿಯಾಗಳಲ್ಲಿ ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ...