ಕೇರಳದ ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಬುಧವಾರ ಮುಂಜಾನೆ ಕೊಚ್ಚಿಯ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ನಿಶಾದ್ ಯೂಸುಫ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸ್ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಅಧಿಕ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಇದನ್ನು ಓದಿದ್ದೀರಾ? ಕೇರಳ | ಕಣ್ಣೂರು ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಪಿಎಂ ನಾಯಕಿ ದಿವ್ಯಾ ಬಂಧನ
43 ವರ್ಷದ ನಿಶಾದ್ ಯೂಸುಫ್ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಮೃತದೇಹವನ್ನು ಎರ್ನಾಕುಲಂನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.
2022ರಲ್ಲಿ ಅತ್ಯುತ್ತಮ ಸಂಕಲನಕಾರನಾಗಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಗೆದ್ದ ಯೂಸುಫ್, ತಳ್ಳುಮಾಲಾ, ಚಾವರ್, ಉಂಡಾ, ಸೌದಿ ವೆಲ್ಲಕ್ಕ, ಒನ್, ಆಪರೇಷನ್ ಜಾವಾ, ಬಾಜೂಕಾ, ಕಂಗುವಾ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ತಳ್ಳುಮಾಲಾ ಸಿನಿಮಾದ ಸಂಕಲನಕ್ಕೆ ಅತ್ಯುತ್ತಮ ಸಂಕಲನಕಾರ ರಾಜ್ಯ ಪ್ರಶಸ್ತಿ ಲಭಿಸಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
