ಕೇರಳ | ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

Date:

ಕೇರಳದ ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಬುಧವಾರ ಮುಂಜಾನೆ ಕೊಚ್ಚಿಯ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

- Advertisement -

ನಿಶಾದ್ ಯೂಸುಫ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸ್ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಅಧಿಕ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ಕೇರಳ | ಕಣ್ಣೂರು ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ; ಸಿಪಿಎಂ ನಾಯಕಿ ದಿವ್ಯಾ ಬಂಧನ

43 ವರ್ಷದ ನಿಶಾದ್ ಯೂಸುಫ್ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಮೃತದೇಹವನ್ನು ಎರ್ನಾಕುಲಂನ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

2022ರಲ್ಲಿ ಅತ್ಯುತ್ತಮ ಸಂಕಲನಕಾರನಾಗಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಗೆದ್ದ ಯೂಸುಫ್, ತಳ್ಳುಮಾಲಾ, ಚಾವರ್, ಉಂಡಾ, ಸೌದಿ ವೆಲ್ಲಕ್ಕ, ಒನ್, ಆಪರೇಷನ್ ಜಾವಾ, ಬಾಜೂಕಾ, ಕಂಗುವಾ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ತಳ್ಳುಮಾಲಾ ಸಿನಿಮಾದ ಸಂಕಲನಕ್ಕೆ ಅತ್ಯುತ್ತಮ ಸಂಕಲನಕಾರ ರಾಜ್ಯ ಪ್ರಶಸ್ತಿ ಲಭಿಸಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...