ಗುಜರಾತ್ ವಿಮಾನ ದುರಂತ | ಸಿನಿಮಾ ನಿರ್ಮಾಪಕ ನಾಪತ್ತೆ: ಅಪಘಾತದಲ್ಲಿ ಮೃತಪಟ್ಟಿರುವ ಶಂಕೆ

Date:

ಕಳೆದ ವಾರ ನಡೆದ ಗುಜರಾತ್ ವಿಮಾನ ದುರಂತದ ಬಳಿಕ ಸಿನಿಮಾ ನಿರ್ಮಾಪಕರೊಬ್ಬರು ನಾಪತ್ತೆಯಾಗಿದ್ದು, ಅವರ ಮೊಬೈಲ್ ಫೋನ್ ಅಪಘಾತ ಸ್ಥಳದಿಂದ ಕೇವಲ 700 ಮೀಟರ್ ದೂರದಲ್ಲಿರುವುದಾಗಿ ಪತ್ತೆಯಾಗಿದೆ. ವಿಮಾನ ಅಪಘಾತದಲ್ಲಿ ಮೃತಪಟ್ಟವರಲ್ಲಿ ಅವರೂ ಒಬ್ಬರಾಗಿರುವ ಆತಂಕದಲ್ಲಿರುವ ಕುಟುಂಬಸ್ಥರು ಸದ್ಯ ತಮ್ಮ ಡಿಎನ್‌ಎ ಮಾದರಿ ನೀಡಿದ್ದಾರೆ.

- Advertisement -

ಜೂನ್ 12ರಂದು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್‌ಇಂಡಿಯಾ AI-171 ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಕೆಲವೇ ಕ್ಷಣಗಳಲ್ಲಿ ವೈದ್ಯಕೀಯ ಕಾಲೇಜಿನ ಆವರಣಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿದ್ದ 242 ಮಂದಿಯಲ್ಲಿ 241 ಮಂದಿ ಮತ್ತು ಹಾಸ್ಟೆಲ್‌, ಮೆಸ್‌ನಲ್ಲಿದ್ದ ಒಟ್ಟ 29 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಈವರೆಗೂ ಮೃತರ ಅಧಿಕೃತ ಅಂಕಿಅಂಶ ಬಿಡುಗಡೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ಕಾಡುವ ಹಲವು ಪ್ರಶ್ನೆಗಳು, ತಜ್ಞರೇನು ಹೇಳುತ್ತಾರೆ?

ನರೋಡಾ ನಿವಾಸಿ ಮಹೇಶ್ ಕಲಾವಾಡಿಯಾ, ಮಹೇಶ್ ಜಿರಾವಾಲಾ ಎಂದೂ ಕರೆಯಲಾಗುವ ಸಂಗೀತ ಆಲ್ಬಮ್‌ ನಿರ್ದೇಶಕರು, ಸಿನಿಮಾ ನಿರ್ಮಾಪಕರಾಗಿದ್ದಾರೆ. ಗುಜರಾತ್ ವಿಮಾನ ದುರಂತ ನಡೆದ ಮಧ್ಯಾಹ್ನ ಲಾ ಗಾರ್ಡನ್ ಪ್ರದೇಶದಲ್ಲಿ ಯಾರನ್ನೋ ಭೇಟಿಯಾಗಲು ಹೋಗಿದ್ದರು, ಆದರೆ ಮರಳಿ ಬಂದಿಲ್ಲ ಎಂದು ಪತ್ನಿ ಹೇತಲ್ ಹೇಳಿದ್ದಾರೆ.

“ನನ್ನ ಗಂಡ ಮಧ್ಯಾಹ್ನ 1:14ಕ್ಕೆ ನನಗೆ ಕರೆ ಮಾಡಿ ತನ್ನ ಮೀಟಿಂಗ್ ಮುಗಿದಿದೆ, ಮನೆಗೆ ಬರುತ್ತಿರುವುದಾಗಿ ತಿಳಿಸಿದರು. ಆದರೆ ಮನೆಗೆ ಬರದಿದ್ದಾಗ ನಾನು ಫೋನ್‌ಗೆ ಕರೆ ಮಾಡಿದೆ ಆದರೆ ಅದು ಸ್ವಿಚ್ ಆಫ್ ಆಗಿತ್ತು. ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಅವರ ಮೊಬೈಲ್ ಫೋನ್‌ನ ಕೊನೆಯ ಸ್ಥಳವು ಅಪಘಾತ ನಡೆದ ಸ್ಥಳದಿಂದ 700 ಮೀಟರ್ ದೂರದಲ್ಲಿ ಕಾಣಿಸಿಕೊಂಡಿದೆ” ಎಂದು ಹೇಳಿದ್ದಾರೆ.

“ಮಧ್ಯಾಹ್ನ 1:40ರ ಸುಮಾರಿಗೆ(ವಿಮಾನ ದುರಂತ ನಡೆದ ಸಮಯ) ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ಅವರ ಸ್ಕೂಟರ್ ಮತ್ತು ಮೊಬೈಲ್ ಫೋನ್ ಕಾಣೆಯಾಗಿದೆ. ಇದೆಲ್ಲವೂ ಅಸಾಮಾನ್ಯ. ಅವರು ಮನೆಗೆ ಬರಲು ಆ ಮಾರ್ಗದಲ್ಲಿ ಎಂದಿಗೂ ಬಂದಿಲ್ಲ. ಅಪಘಾತದಿಂದ ಮೃತಪಟ್ಟವರಲ್ಲಿ ಅವರೂ ಒಬ್ಬರಾಗಿರುವ ಆತಂಕವಿದೆ. ಆದ್ದರಿಂದ ನಾವು ಡಿಎನ್ಎ ಮಾದರಿಗಳನ್ನು ಸಲ್ಲಿಸಿದ್ದೇವೆ” ಎಂದು ಹೇತಲ್ ತಿಳಿಸಿದ್ದಾರೆ.

ಹಲವು ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ ಅಥವಾ ಸಂಪೂರ್ಣವಾಗಿ ತುಂಡು ತುಂಡಾಗಿದೆ. ಸದ್ಯ ಮೃತರ ಪತ್ತೆಗಾಗಿ ಡಿಎನ್‌ಎ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈವರೆಗೆ ಡಿಎನ್ಎ ಹೊಂದಾಣಿಕೆಯ ಮೂಲಕ 47 ಮೃತರ ಗುರುತು ಪತ್ತೆಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...