ಕೊನೆಯ ಹಂತದ ಮತದಾನ | ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ

Date:

ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗವು ಮಾಹಿತಿ ನೀಡಿದೆ.

- Advertisement -

ಮಧ್ಯಾಹ್ನ 3 ಗಂಟೆಗೆ ಏಳು ರಾಜ್ಯಗಳು ಮತ್ತು ಚಂಡೀಗಢದಲ್ಲಿ 49.68% ಮತದಾನವಾಗಿದೆ. ಬಿಹಾರದಲ್ಲಿ 42.95ಕ್ಕಿಂತ ಕಡಿಮೆ ಮತದಾನವಾಗಿದ್ದರೆ, ಹಿಮಾಚಲ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ. 58% ರಷ್ಟು ಅತಿ ಹೆಚ್ಚು ಮತದಾನವಾಗಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಉಳಿದಂತೆ ಒಡಿಶಾದಲ್ಲಿ 49.77 ಶೇ, ಪಂಜಾಬ್‌ನಲ್ಲಿ 43 ಶೇ. ಮತದಾನ ನಡೆದಿರುವುದಾಗಿ ವರದಿಯಾಗಿದೆ. ಅಂತಿಮ ಹಂತದಲ್ಲಿ ಒಟ್ಟು ಏಳು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಚಂಡೀಗಢ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಕೊನೆಯ ಹಂತದಲ್ಲಿ ಸ್ಪರ್ಧಿಸುತ್ತಿರುವ ಪ್ರಮುಖ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.

ಪಂಜಾಬ್‌ನ 13 ಕ್ಷೇತ್ರ, ಹಿಮಾಚಲ ಪ್ರದೇಶದ 4, ಉತ್ತರ ಪ್ರದೇಶದ 13, ಪಶ್ಚಿಮ ಬಂಗಾಳದ 9, ಬಿಹಾರದ 8 ಹಾಗೂ ಒಡಿಶಾದ 6, ಜಾರ್ಖಂಡ್‌ನ 3 ಕ್ಷೇತ್ರಗಳಿಗೆ ಮತದಾನ ನಡೆಯುತ್ತಲಿದೆ.

ಇದನ್ನು ಓದಿದ್ದೀರಾ? 7ನೇ ಹಂತದ ಮತದಾನ | ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾಚಾರ; ಇವಿಎಂಗಳನ್ನು ಕೆರೆಗೆ ಎಸೆದ ಗುಂಪು

ವಾರಣಾಸಿಯಿಂದ ಸ್ಪರ್ಧಿಸುತ್ತಿರುವ ಪ್ರಧಾನಿ ಮೋದಿಯ ಹೊರತಾಗಿ , ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಹಾರದ ಪಾಟ್ನಾ ಸಾಹಿಬ್‌ನಿಂದ ರವಿಶಂಕರ್ ಪ್ರಸಾದ್ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ನಟಿ ಕಂಗನಾ ರಣಾವತ್ ಅಭ್ಯರ್ಥಿಗಳು ಸೇರಿದ್ದಾರೆ.

ಕಾಂಗ್ರೆಸ್‌ನ ಮನೀಶ್ ತಿವಾರಿ ಚಂಡೀಗಢದಿಂದ ಸ್ಪರ್ಧಿಸಿದ್ದರೆ, ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶದ ಮಂಡಿಯಿಂದ ಮತ್ತು ಅಜಯ್ ರಾಯ್ ವಾರಣಾಸಿಯಿಂದ ಕಣದಲ್ಲಿದ್ದಾರೆ. ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸುತ್ತಿದ್ದಾರೆ. ಕೊನೆಯ ಹಂತದಲ್ಲಿ ಒಟ್ಟು 904 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜೂನ್ 4ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...