ಉತ್ತರ ಪ್ರದೇಶ| ತಾಪಮಾನ ಏರಿಕೆ; ಕೊನೆಯ ಹಂತದ ಚುನಾವಣೆ ದಿನ 33 ಸಿಬ್ಬಂದಿ ಸಾವು

Date:

ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ ಮಾಹಿತಿ ನೀಡಿದ್ದಾರೆ.

- Advertisement -

ಗೃಹರಕ್ಷಕರು, ನೈರ್ಮಲ್ಯ ಕಾರ್ಯಕರ್ತರು ಮತ್ತು ಇತರ ಚುನಾವಣಾ ಸಿಬ್ಬಂದಿಗಳು ಇದರಲ್ಲಿ ಸೇರಿದ್ದಾರೆ. ಬಲ್ಲಿಯಾ ಲೋಕಸಭಾ ಕ್ಷೇತ್ರದ ಸಿಕಂದರ್‌ಪುರ ಪ್ರದೇಶದ ಮತಗಟ್ಟೆಯೊಂದರಲ್ಲಿ ಮತದಾರ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮತಗಟ್ಟೆಯಲ್ಲಿ ನಿಂತಿದ್ದ ರಾಮ್ ಬದನ್ ಚೌಹಾಣ್ ಎಂಬ ಮತದಾರರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಅವರನ್ನು ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶ| ತಾಪಮಾನ ಏರಿಕೆ; 15 ಚುನಾವಣಾ ಸಿಬ್ಬಂದಿ ಸಾವು

ಆಯಾ ಕ್ಷೇತ್ರಗಳಲ್ಲಿ ಚುನಾವಣಾ ಸಿಬ್ಬಂದಿ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ವರದಿಯನ್ನೂ ಸಲ್ಲಿಸಲಿದ್ದಾರೆ ಎಂದು ಸಿಇಒ ರಿನ್ವಾ ತಿಳಿಸಿದ್ದಾರೆ.

ಚುನಾವಣಾ ಆಯೋಗದ ಆದೇಶದಂತೆ ಚುನಾವಣಾ ಸಿಬ್ಬಂದಿ ಕುಟುಂಬ ಸದಸ್ಯರಿಗೆ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ ಇವಿಎಂಗಳ ಕಾವಲು ಕಾಯುತ್ತಿದ್ದ ಪಿಎಸಿ ಕಾನ್‌ಸ್ಟೆಬಲ್ ಶನಿವಾರ ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ?  ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಜೆಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಉಪೇಂದ್ರ ಅಗರ್ವಾಲ್ ಅವರು ಕಾನ್ಸ್‌ಟೇಬಲ್ ಸಾವನ್ನು ಖಚಿತಪಡಿಸಿದ್ದು, ಸ್ಥಳದಲ್ಲಿ ಕರ್ತವ್ಯದಲ್ಲಿರುವ ಅಧಿಕಾರಿಗಳಿಗೆ ಕೂಲರ್‌ಗಳು ಮತ್ತು ಇತರ ಸೌಲಭ್ಯಗಳು ಲಭ್ಯವಿದೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಹೇಳಿದರು.

ಏಳನೇ ಹಂತದಲ್ಲಿ, ಉತ್ತರ ಪ್ರದೇಶದ ಮಹಾರಾಜ್‌ಗಂಜ್, ಗೋರಖ್‌ಪುರ, ಕುಶಿನಗರ, ಡಿಯೋರಿಯಾ, ಬನ್ಸ್‌ಗಾಂವ್ (ಎಸ್‌ಸಿ), ಘೋಸಿ, ಸೇಲಂಪುರ, ಬಲ್ಲಿಯಾ, ಗಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ ಮತ್ತು ರಾಬರ್ಟ್ಸ್‌ಗಂಜ್‌ನಲ್ಲಿ (ಎಸ್‌ಸಿ) ಮತದಾನ ನಡೆಯಿತು.

ಚುನಾವಣಾ ಆಯೋಗವು ಈ ಹಂತದಲ್ಲಿ 1,08,349 ಚುನಾವಣಾ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...