ಆಪರೇಷನ್ ಸಿಂಧೂರ | ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದ ಯೋಧರ ಹೆಸರುಗಳು ಕಡೆಗೂ ಬಹಿರಂಗ

Date:

ಕಳೆದ ವರ್ಷ ನಡೆದಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಸಮಯದಲ್ಲಿ ವೀರಮರಣ ಹೊಂದಿದ ಭಾರತೀಯ ಭೂಸೇನೆಯ ಐದು ಸಿಬ್ಬಂದಿ ಮತ್ತು ವಾಯುಸೇನೆಯ ಒಬ್ಬ ಸಿಬ್ಬಂದಿಯ ಹೆಸರುಗಳು ಕಡೆಗೂ ಬಹಿರಂಗಗೊಂಡಿವೆ. ಮೃತ ಯೋಧರ ಹೆಸರುಗಳನ್ನು ‘ನ್ಯಾಷನಲ್ ವಾರ್ ಮೆಮೆರಿಯಲ್’ ವೆಬ್‌ಸೈಟ್‌ನ ‘ರೋಲ್ ಆಫ್ ಆನರ್’ ವಿಭಾಗದಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ.

- Advertisement -

ಹುತಾತ್ಮರಾದ ಆ ಆರು ಮಂದಿ ಸಿಬ್ಬಂದಿಗಳು; ಸುಬೇದಾರ್ ಮೇಜರ್ ಪವನ್ ಕುಮಾರ್, ರೈಫಲ್‌ಮನ್ ಸುನಿಲ್ ಕುಮಾರ್, ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್, ಅಗ್ನಿವೀರ್ ಮುರಳಿ ನಾಯಕ್, ಹವಿಲ್ದಾರ್ ಸುನಿಲ್ ಕುಮಾರ್ ಸಿಂಗ್ ಹಾಗೂ ವಾಯುಸೇನೆಯ ಸಾರ್ಜೆಂಟ್ ಸುರೇಂದ್ರ ಕುಮಾರ್.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಆರು ಮಂದಿ ವೀರರ ಹೆಸರುಗಳನ್ನು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿರುವ ‘ತ್ಯಾಗ ಚಕ್ರ’ದ ಮೇಲೆಯೂ ಕೆತ್ತಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. (ಈ ‘ತ್ಯಾಗ ಚಕ್ರ’ವು ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನದಿಂದಲೂ ದೇಶದ ರಕ್ಷಣೆಗಾಗಿ ರಣಾಂಗಣದಲ್ಲಿ ಪ್ರಾಣತ್ಯಾಗ ಮಾಡಿದ ವೀರ ಮಿಲಿಟರಿ ಸಿಬ್ಬಂದಿಗಳ ಸ್ಮರಣಾರ್ಥವಾಗಿ ನಿರ್ಮಿಸಲಾಗಿದೆ.)

2025ರ ಏಪ್ರಿಲ್ 22ರಂದು 26 ಜನರ ಸಾವಿಗೆ ಕಾರಣವಾಗಿದ್ದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು 2025ರ ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತ್ತು. ತದನಂತರ, 2025ರ ಮೇ 10ರಂದು ಉಭಯ ದೇಶಗಳು ಕದನ ವಿರಾಮ ಘೋಷಿಸಿದ್ದವು.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...