ನೂತನ ಸೆಬಿ ಮುಖ್ಯಸ್ಥರಾಗಿ ತುಹಿನ್‌ ಕಾಂತ ಪಾಂಡೆ ನೇಮಕ

Date:

Advertisements

ಕೇಂದ್ರ ಸರ್ಕಾರವು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ ನೂತನ ಮುಖ್ಯಸ್ಥರನ್ನಾಗಿ ಹನಕಾಸು ಕಾರ್ಯದರ್ಶಿಯಾದ ತುಹಿನ್‌ ಕಾಂತ ಪಾಂಡೆ ಅವರನ್ನು ನೇಮಕ ಮಾಡಿದೆ. ಪಾಂಡೆ ಅವರು 1987ನೇ ಸಾಲಿನ ಒಡಿಶಾ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದು, 1988ರಲ್ಲಿ ಸೆಬಿ ಸ್ಥಾಪನೆಯಾದ ನಂತರ 11ನೇ ಮುಖ್ಯಸ್ಥರಾಗಿದ್ದಾರೆ.

ಪಾಂಡೆ ಅವರು ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಹಿರಿಯ ಅಧಿಕಾರಿಗಳಲ್ಲಿ ಮೊದಲ ಸಾಲಿನನವರಾಗಿದ್ದು, ತೆರಿಗೆ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮೊದಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಇವರು ಏರ್‌ ಇಂಡಿಯಾದ ಖಾಸಗೀಕರಣ ಹಾಗೂ ಎಲ್‌ಐಸಿ ಸಂಸ್ಥೆ ಸಾರ್ವಜನಿಕ ಹೂಡಿಕೆಯಲ್ಲಿ ಸೇರಲು ಪ್ರಮುಖ ಪಾತ್ರವಹಿಸಿದ್ದರು.

ಮೂಲತಃ ಪಂಜಾಬ್‌ನವರಾದ ಪಾಂಡೆ ಪಂಜಾಬ್‌ ವಿವಿಯಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಲಂಡನ್‌ನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ಒಡಿಶಾದಲ್ಲಿ ಐಎಎಸ್ ಅಧಿಕಾರಿಯಾದ ನಂತರ ಜಿಲ್ಲಾಧಿಕಾರಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಸರ್ಕಾರಿ ಅಧಿಸೂಚನೆಯಂತೆ ಪಾಂಡೆ ಅವರನ್ನು ಸಂಪುಟ ಸಮಿತಿಯು ಮೂರು ವರ್ಷದವರೆಗೆ ಸೆಬಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲು ಅನುಮೋದಿಸಿದೆ. ತುಹಿನ್‌ ಕಾಂತ ಪಾಂಡೆ ಅವರು ಮಾಧಬಿ ಪುರಿ ಬುಚ್‌ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಮಾಧಬಿ ಪುರಿ ಬುಚ್‌ ಅವರು ಸೆಬಿಯ ಮೊದಲ ಮಹಿಳಾ ಮುಖ್ಯಸ್ಥರಾಗಿದ್ದರು.

ಮಾಧಬಿ ಬುಚ್‌ ವಿರುದ್ಧ ಹಿಂಡನ್‌ಬರ್ಗ್‌ ರಿಸರ್ಚ್‌ ಮಾಡಿರುವ ಆರೋಪಗಳು ಸೇರಿದಂತೆ ಹಲವು ಆರೋಪಗಳು ಕೇಳಿ ಬಂದ ಕಾರಣ ಅವರನ್ನು ಎರಡನೇ ಅವಧಿಗೆ ಮುಂದುವರಿಸಲು ಕೇಂದ್ರ ಸರ್ಕಾರ ಆಸಕ್ತಿ ತೋರಿಸಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

Download Eedina App Android / iOS

X