ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲು

Date:

ಕೋಮು ಸೌಹಾರ್ದತೆಗೆ ಬೆದರಿಕೆ ಒಡ್ಡುವಂತಹ ಹಾಗೂ ಭಾರತದ ಸಾರ್ವಭೌಮತೆಗೆ ಧಕ್ಕೆ ತರುವಂತಹ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಪಶ್ಚಿಮ ಬಂಗಾಳದ ನರೇಂದ್ರಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

- Advertisement -

ಡಿಸೆಂಬರ್ 19ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅಮಿತ್ ಮಾಳವಿಯಾ ಪ್ರಚೋದನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಟಿಎಂಸಿ ನಾಯಕ ತನ್ಮೋಯ್ ಘೋಷ್ ನರೇಂದ್ರ ಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಈ ದೂರಿನಲ್ಲಿ ನಿರ್ದಿಷ್ಟ ಪೋಸ್ಟ್ ಒಂದನ್ನು ಉಲ್ಲೇಖಿಸಲಾಗಿದ್ದು, ಇದು ಕೋಮು ಸೌಹಾರ್ದತೆಯ ವಿರುದ್ಧ ಪ್ರಚೋದನೆ ನೀಡುವಂತಿದೆ ಎಂದು ಆರೋಪಿಸಲಾಗಿದೆ. ಇದರಿಂದ ಭಾರತದ ಸಾರ್ವಭೌಮತೆಗೆ ಗಮನಾರ್ಹ ಬೆದರಿಕೆ ಎದುರಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ- ಸಿದ್ದು ಸರ್ಕಾರಗಳ ನಡೆ ಅನುಕರಣೀಯ ಅಲ್ಲ; ಶೋಭೆ ತರುವುದಿಲ್ಲ

“ಬಾಂಗ್ಲಾದೇಶದ ಢಾಕಾದಲ್ಲಿ ನಡೆಯುತ್ತಿರುವ ಧ್ವಂಸ ಕಾರ್ಯಾಚರಣೆ ಒಂದು ಎಚ್ಚರಿಕೆಯಾಗಿದೆ. ಭಯೋತ್ಪಾದನೆಯನ್ನು ತುಷ್ಟೀಕರಣ ಮಾಡಿದಾಗ ಹಾಗೂ ಕಾನೂನು ರಾಹಿತ್ಯವನ್ನು ಸಹಜವೆಂಬಂತೆ ಸ್ವೀಕರಿಸಿದಾಗ ಹೇಗೆ ಸಮಾಜದ ಹೆಣಿಗೆ ಬಿಚ್ಚಿಕೊಳ್ಳುತ್ತದೆ ಎಂಬುದಕ್ಕೆ ಇದು ನಿದರ್ಶನ” ಎಂದು ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ಹಲವು ರಾಜ್ಯಗಳಲ್ಲಿ ಪ್ರಕರಣ

ಪಶ್ಚಿಮ ಬಂಗಾಳದ ಪ್ರಕರಣಕ್ಕೂ ಮುನ್ನ ಕರ್ನಾಟಕದಲ್ಲೂ ಅಮಿತ್ ಮಾಳವಿಯಾ ವಿರುದ್ಧ ಗಂಭೀರ ಸ್ವರೂಪದ ಎಫ್‌ಐಆರ್ ದಾಖಲಾಗಿತ್ತು. 2023ರ ಜೂನ್ ತಿಂಗಳಲ್ಲಿ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಅನಿಮೇಟೆಡ್ ವಿಡಿಯೋವನ್ನು ಹಂಚಿಕೊಂಡ ಆರೋಪದಡಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕೆಪಿಸಿಸಿ ಮುಖಂಡರ ದೂರಿನನ್ವಯ, ಧರ್ಮಗಳ ನಡುವೆ ದ್ವೇಷ ಬಿತ್ತುವ (ಐಪಿಸಿ 153A) ಹಾಗೂ ಕ್ರಿಮಿನಲ್ ಒಳಸಂಚು (120B) ನಡೆಸಿದ ಆರೋಪದಡಿ ಪೊಲೀಸರು ತನಿಖೆ ಕೈಗೊಂಡಿದ್ದರು.

​ಇದೇ ಮಾದರಿಯಲ್ಲಿ ತಮಿಳುನಾಡು ಪೊಲೀಸರು ಸಹ ಮಾಳವಿಯಾ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದರು. ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ತಿರುಚಿ, ಸುಳ್ಳು ಸುದ್ದಿ ಹರಡಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿ 2023ರಲ್ಲಿ ತಮಿಳುನಾಡಿನ ತಿರುಚ್ಚಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಹೀಗೆ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ದಕ್ಷಿಣದ ರಾಜ್ಯಗಳಲ್ಲೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರ ವಿರುದ್ಧ ದಾಖಲಾಗುತ್ತಿರುವ ಸರಣಿ ದೂರುಗಳು, ಸಾಮಾಜಿಕ ಜಾಲತಾಣಗಳ ರಾಜಕೀಯ ದುರ್ಬಳಕೆ ಕುರಿತ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...