ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

Date:

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್ ರಾಂಧವಾ ಅವರ ಆತ್ಮಹತ್ಯೆ ವಿವಾದದ ನಡುವೆ ರಾಜೀನಾಮೆ ನೀಡಿದ್ದ ಪಂಜಾಬ್‌ನ ಮಾಜಿ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

- Advertisement -

ಲಾಲ್ಜಿತ್ ಸಿಂಗ್ ಅವರು ತಮ್ಮ ರಾಜಕೀಯ ಸಹಾಯಕರಿಗೆ ಗೋದಾಮು ಟೆಂಡರ್ ನೀಡುವಂತೆ ಭುಲ್ಲರ್, ರಾಂಧವಾ ಅವರ ಮೇಲೆ ಒತ್ತಡ ಹೇರಿದ್ದಾರೆ. ಇದಕ್ಕೆ ನಿರಾಕರಿಸಿದಾಗ ಅವರನ್ನು ನಿವಾಸಕ್ಕೆ ಕರೆಸಿ, ಹಲ್ಲೆ ನಡೆಸಿ, ಬ್ಲ್ಯಾಕ್‌ಮೇಲ್ ಮಾಡಲು 10 ಲಕ್ಷ ರೂ. ಲಂಚ ಸ್ವೀಕರಿಸಿರುವುದಾಗಿ ಕ್ಯಾಮೆರಾದಲ್ಲಿ ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಇದನ್ನು ಓದಿದ್ದೀರಾ? ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ವಿವಾದ: ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ರಾಜೀನಾಮೆ

ಇದೀಗ ಪಂಜಾಬ್ ಪೊಲೀಸರು ಶನಿವಾರ ಮಾಜಿ ಸಚಿವ ಲಾಲ್ಜಿತ್ ಸಿಂಗ್, ಅವರ ತಂದೆ ಸುಖದೇವ್ ಸಿಂಗ್ ಭುಲ್ಲರ್ ಮತ್ತು ಅವರ ಆಪ್ತ ಸಹಾಯಕ (ಪಿಎ) ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಮೃತರ ಪತ್ನಿ ಉಪಿಂದರ್ ಕೌರ್ ಸಲ್ಲಿಸಿದ ದೂರಿನ ಮೇರೆಗೆ ಅಮೃತಸರದ ರಂಜಿತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಈ ಮೂವರು ನಿರಂತರ ಕಿರುಕುಳ, ದೈಹಿಕ ಹಲ್ಲೆ, ಮಾನಸಿಕ ಹಿಂಸೆ ಮತ್ತು ಒತ್ತಡ ಹೇರಿ ತಮ್ಮ ಪತಿಗೆ ಆತ್ಮಹತ್ಯೆಗೆ ಪ್ರೇರೇಪಿಸಿದ್ದಾರೆ ಎಂದು ಪತ್ನಿ ಉಪಿಂದರ್ ಕೌರ್ ಆರೋಪಿಸಿದ್ದಾರೆ.

ರಾಂಧವ ಆತ್ಮಹತ್ಯೆ ಪ್ರಕರಣವು ಪಂಜಾಬ್‌ನಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇನ್ನು ಎಫ್‌ಐಆರ್ ದಾಖಲಾಗುವ ಮುನ್ನ ಶಿರೋಮಣಿ ಅಕಾಲಿ ದಳ, ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಒಟ್ಟಾಗಿ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...