ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್: ಬಿಜೆಪಿಯ ‘ಜಾತಿವಾದಿ ಮನಸ್ಥಿತಿ’ ವಿರುದ್ಧ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ಸಜ್ಜು

Date:

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮಾವೇಶ ನಡೆದ ನಂತರ, ಆ ಸ್ಥಳದಲ್ಲಿ ನಡೆದ ‘ಶುದ್ಧೀಕರಣ ಹವನ’ ಪ್ರಕರಣ ಈಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಪ್ರಶ್ನಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧವೇ ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್, ಬಿಜೆಪಿಯ ‘ಜಾತಿವಾದಿ ಮನಸ್ಥಿತಿ’ ವಿರುದ್ಧ ಕಾನೂನು ಹಾಗೂ ಪ್ರಜಾಸತ್ತಾತ್ಮಕ ಹೋರಾಟ ರೂಪಿಸುವುದಾಗಿ ಸ್ಪಷ್ಟಪಡಿಸಿದೆ.

- Advertisement -

ಆಗಸ್ಟ್ 8 ರಂದು ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ದಲಿತ ಸಮುದಾಯದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಮಾವೇಶ ನಡೆದಿತ್ತು. ಇದಾದ ಕೆಲವು ದಿನಗಳ ನಂತರ, ಆಗಸ್ಟ್ 11 ರಂದು ಅದೇ ಸ್ಥಳದಲ್ಲಿ ಕೆಲವರು ‘ಶುದ್ಧೀಕರಣ ಯಜ್ಞ’ ನಡೆಸಿದ್ದರು. ಇದನ್ನು ದಲಿತ ವಿರೋಧಿ ಹಾಗೂ ಅಸ್ಪೃಶ್ಯತೆಯ ಸಂಕೇತ ಎಂದು ಕರೆದಿದ್ದ ರಾಹುಲ್ ಗಾಂಧಿ, ಶುದ್ಧೀಕರಣ ನಡೆಸಿದವರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನೂ ಓದಿ: ಖರ್ಗೆ ಸಭೆಯ ಬಳಿಕ ‘ಶುದ್ಧೀಕರಣ’ ವಿವಾದ: ಎಫ್‌ಐಆರ್‌ಗೆ ಒತ್ತಾಯಿಸಿದ್ದ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲು!

ಆದರೆ, ಶ್ರೀರಾಮ್ ಸೇನಾ ಧರ್ಮಾರ್ಥ ಸೇವಾ ನ್ಯಾಸದ ಸದಸ್ಯ ಹಾಗೂ ವಾಲ್ಮೀಕಿ ಸಮುದಾಯದ ಅಮಿತ್ ಕುಮಾರ್ ಎಂಬುವವರು ನೀಡಿದ ದೂರಿನನ್ವಯ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧವೇ ದೂರು ದಾಖಲಾಗಿದೆ. ಧಾರ್ಮಿಕ ಆಚರಣೆಗೆ ‘ಜಾತಿಯ ಬಣ್ಣ’ ಬಳಿದು ಸಮುದಾಯಗಳ ನಡುವೆ ದ್ವೇಷ ಹೆಚ್ಚಿಸಲು ರಾಹುಲ್ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196, 299 ಹಾಗೂ SC/ST ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಬಿಜೆಪಿ ಸರ್ಕಾರದ ಈ ನಡವಳಿಕೆಗೆ ತೀವ್ರ ಕಿಡಿಕಾರಿರುವ ಕಾಂಗ್ರೆಸ್ ನಾಯಕಿ ಕುಮಾರಿ ಸೆಲ್ಜಾ, “ಶುದ್ಧೀಕರಣದಂತಹ ಅಸ್ಪೃಶ್ಯತೆಯ ಆಚರಣೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಅದರ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರನ್ನೇ ಅಪರಾಧಿಯನ್ನಾಗಿ ಮಾಡಲು ಹೊರಟಿರುವುದು ಬಿಜೆಪಿಯ ದಲಿತ ವಿರೋಧಿ ಮತ್ತು ಸಂವಿಧಾನ ವಿರೋಧಿ ಮನಸ್ಥಿತಿಗೆ ಸಾಕ್ಷಿ” ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ದಲಿತರ ಆತ್ಮಗೌರವ ಹಾಗೂ ಸಂವಿಧಾನದ ರಕ್ಷಣೆಗಾಗಿ ಈ ಜಾತಿವಾದಿ ಮನಸ್ಥಿತಿಯ ವಿರುದ್ಧ ಕೊನೆಯವರೆಗೂ ಶಕ್ತಿಮೀರಿ ಕಾನೂನು ಹೋರಾಟ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

ಕನ್ನಾಟ್ ಪ್ಲೇಸ್‌ನಲ್ಲಿ ಸಿಜೆಪಿ ಪ್ರತಿಭಟನೆ: ತಡೆ ನೀಡಲು ದೆಹಲಿ ಹೈಕೋರ್ಟ್ ನಕಾರ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ...

ಜಂತರ್ ಮಂತರ್ ಪ್ರತಿಭಟನಾ ಸ್ಥಳ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ...