ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ಪ್ರಕರಣ ದಾಖಲಿಸಿರುವ ದೆಹಲಿ ಪೊಲೀಸರ ಕ್ರಮವನ್ನು ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತೀವ್ರವಾಗಿ ಖಂಡಿಸಿದ್ದಾರೆ. “ದೆಹಲಿ ಪೊಲೀಸರಿಗೆ ಎಫ್‌ಐಆರ್ ದಾಖಲಿಸುವುದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸವಿಲ್ಲ” ಎಂದು ಟೀಕಿಸಿದ್ದಾರೆ.
ಏಕಪಕ್ಷೀಯ ನಿಲುವು ತೆಗೆದುಕೊಂಡ ಆರೋಪ ಹೊತ್ತಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ‘ಇಂಡಿಯಾ’ ಒಕ್ಕೂಟ ನಡೆಸಿದ ಪ್ರತಿಭಟನೆ ವೇಳೆ, ದೆಹಲಿಯ ಆಕಾಶ್‌ವಾಣಿ ಭವನದ ಆವರಣಕ್ಕೆ ರಾಹುಲ್ ಗಾಂಧಿ ಸೇರಿದಂತೆ ಹಲವು ಇಂಡಿಯಾ ಒಕ್ಕೂಟದ ನಾಯಕರು ಆಕಾಶವಾಣಿ ಭವನಕ್ಕೆ ಪ್ರವೇಶಿಸಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ತುಮಕೂರು | ರಾಹುಲ್‌ಗಾಂಧಿ ಮೇಲಿನ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧವೂ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ. “ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರ (ವಿಕಸಿತ ಭಾರತ) ಆಗಲು ಸಾಧ್ಯವಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯ” ಎಂದು ಹೇಳಿದರು.
This video cannot be played in your browser. Open the video directly
ಇನ್ನು ಈ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡಾ ಪ್ರತಿಕ್ರಿಯಿಸಿದ್ದಾರೆ. “ನನ್ನ ವಿರುದ್ಧ ಈಗಾಗಲೇ 45 ಎಫ್‌ಐಆರ್‌ಗಳು ಇವೆ. 100ಕ್ಕೂ ಅಧಿಕ ಎಫ್‌ಐಆರ್ ನನ್ನ ಗುರಿ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ಹೋರಾಡುವಾಗ ದಾಖಲಾಗುವ ಪ್ರತಿಯೊಂದು ಎಫ್‌ಐಆರ್ ಕೂಡ ನನಗೆ ಹೆಮ್ಮೆಯ ಪದಕವಿದ್ದಂತೆ” ಎಂದಿದ್ದಾರೆ.





