ತಮಿಳರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್

Date:

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ನಡೆದಿದ್ದ ‘ಲೌಡ್ ಸ್ಪೀಕರ್’ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಂ ಯುವಕರ ವಿರುದ್ದ ನಿನ್ನೆ ಬಿಜೆಪಿ ಹಾಗೂ ಸಂಘಪರಿವಾರ ನಡೆಸಿದ ಪ್ರತಿಭಟನೆಯ ವೇಳೆ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳುನಾಡಿನ ಜನರನ್ನು ಅವಹೇಳನಗೈದಿರುವುದಕ್ಕೆ ತಮಿಳುನಾಡಿನಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ತಮಿಳುನಾಡಿನ ಜನರು ಬೆಂಗಳೂರಿನ ಕೆಫೆಗಳಲ್ಲಿ ಬಾಂಬ್ ಇಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ತಮಿಳುನಾಡು ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಶೋಭಾ ಕರಂದ್ಲಾಜೆಯ ವಿರುದ್ಧ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153 (ಪ್ರಚೋದನೆ ನೀಡುವುದು, ಗಲಭೆ ಉಂಟುಮಾಡುವ ಉದ್ದೇಶ, 153A (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜನೆ) ಹಾಗೂ ಭಾಷೆ, 505 (1)(ಬಿ) ಮತ್ತು 505 (2) ಸಾರ್ವಜನಿಕರ ಶಾಂತಿಗೆ ಭಂಗವಾಗಲು ಹೇಳಿಕೆ ನೀಡಿದ್ದಕ್ಕೆ ಸಂಬಂಧಪಟ್ಟ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಶೋಭಾ ಕರಂದ್ಲಾಜೆ ಹೇಳಿದ್ದೇನು?

ಪ್ರತಿಭಟನೆಯ ವೇಳೆ ಶೋಭಾ ಕರಂದ್ಲಾಜೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಬೆಂಗಳೂರಿನ ರಾಮೇಶ್ವರಂ ಕೆಫೆ ಘಟನೆಯನ್ನು ಉಲ್ಲೇಖಿಸಿದ್ದಾರೆ. ಈ ವೇಳೆ, “ತಮಿಳುನಾಡಿನ ಜನರು ಅಲ್ಲಿ ತರಬೇತಿ ಪಡೆದು ಇಲ್ಲಿ ಬಂದು ಬಾಂಬ್‌ ಹಾಕುತ್ತಾರೆ. ಕೆಫೆಯಲ್ಲಿ ಬಾಂಬ್ ಇಟ್ಟಿದ್ದೂ ಕೂಡ ಅಲ್ಲಿಂದ ಬಂದವರು” ಎಂದು ಹೇಳಿಕೆ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ತಮಿಳುನಾಡು ಸಿಎಂ ಸ್ಟ್ಯಾಲಿನ್, “ಕೇಂದ್ರದ ಬಿಜೆಪಿ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಬೇಜವಾಬ್ದಾರಿತನದಿಂದ ಕೂಡಿದ ಹೇಳಿಕೆ ಇದು. ತಮಿಳರು ಮತ್ತು ಕನ್ನಡಿಗರ ನಡುವೆ ಒಡಕುಂಟು ಮಾಡಲು ಈ ಹೇಳಿಕೆ ನೀಡಿದ್ದಾರೆ. ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ವಿರುದ್ಧ ಚುನಾವಣಾ ಆಯೋಗ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು. ಆ ಬಳಿಕ ಶೋಭಾ ಕರಂದ್ಲಾಜೆ ತಮಿಳುನಾಡಿನ ಜನರ ಕ್ಷಮೆಯಾಚಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...