ಬಿಹಾರ| ವಿಶೇಷ ಹೋಳಿ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ

Date:

ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಹೋಳಿ ವಿಶೇಷ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ದಾನಪುರದಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯದ ಬಗ್ಗೆ ವರದಿಯಾಗಿಲ್ಲ.

ಇನ್ನು ಮಂಗಳವಾರ (ಮಾರ್ಚ್ 26) ತಡರಾತ್ರಿ ಈ ಘಟನೆ ನಡೆದಿದೆ. ರೈಲು ಸಂಖ್ಯೆ 01410 ದಾನಪುರ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ ಕೋಚ್ ಸಂಖ್ಯೆ ಎಂ-9 ನಲ್ಲಿ ಬೆಂಕಿ ಕಾಣಿಸಿಕೊಂಡಿತು, ಪ್ರಾಯಾಣಿಕರು ಆತಂಕಕ್ಕೆ ಒಳಗಾಗಿದ್ದಾರೆ. ಘಟನೆಯ ನಂತರ ರೈಲನ್ನು ನಿಲ್ಲಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ.

ರಾತ್ರಿ 1ರಿಂದ 2ರ ನಡುವೆ ಈ ಘಟನೆ ನಡೆದಿದ್ದು, ರೈಲಿಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಪಡೆದ ತಕ್ಷಣ ರೈಲ್ವೇಯ ಹಿರಿಯ ಅಧಿಕಾರಿಗಳು, ತಂಡ ಸ್ಥಳಕ್ಕೆ ಧಾವಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ 13 ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಬೆಂಗಳೂರು | ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; ಸುಟ್ಟು ಕರಕಲಾದ 4 ಬೈಕ್‌ಗಳು

ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೂರ್ವ ಮಧ್ಯ ರೈಲ್ವೆ ಸಿಪಿಆರ್‌ಒ, “ಅರಾಹ್ ಜಂಕ್ಷನ್‌ನಿಂದ ಸ್ವಲ್ಪ ದೂರದಲ್ಲಿರುವ ಕರಿಸಾತ್ ನಿಲ್ದಾಣದ ಬಳಿ ಮಾರ್ಚ್ 26 ರಂದು ಪಾಟ್ನಾ-ದೆಹಲಿ ಹೋಳಿ ವಿಶೇಷ ರೈಲಿನ ಒಂದು ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವುನೋವುಗಳು ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಚುನಾವಣೆ | ಇನ್ನುಳಿದ ಹಂತಗಳಲ್ಲಿ ಬಿಜೆಪಿ ಸ್ಥಿತಿ ಮತ್ತಷ್ಟು ಹದಗೆಡಲಿದೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಸ್ಥಿತಿ ಇನ್ನಷ್ಟು ಹದಗೆಡಲಿದೆ ಎಂದು...

‘ತಾರಕ್ ಮೆಹ್ತಾ’ ನಟ ಗುರುಚರಣ್ ಸಿಂಗ್ ನಾಪತ್ತೆ; ಅಪಹರಣ ಪ್ರಕರಣ ದಾಖಲು

ಅತ್ಯಂತ ಜನಪ್ರಿಯ ಭಾರತೀಯ ಟಿವಿ ಶೋ ಆದ 'ತಾರಕ್ ಮೆಹ್ತಾ ಕಾ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...