ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ

Date:

ಕೋಲ್ಕತ್ತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ  ಭಾರಿ ಬೆಂಕಿ ಅವಘಡ ಸಂಭವಿಸಿದೆ.

- Advertisement -

ವಿಮಾನ ನಿಲ್ದಾಣದ ಒಳಗಿನ ತಪಾಸಣೆ ಪ್ರದೇಶದಲ್ಲಿ (ಚೆಕ್-ಇನ್) ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು. ವಿಮಾನ ಹತ್ತಲು ತೆರಳುತ್ತಿದ್ದ ಪ್ರಯಾಣಿಕರು ಭೀತಿಗೆ ಒಳಗಾಗಿದ್ದರು.  ಮೂರು ಅಗ್ನಿಶಾಮಕ ದಳಗಳು, ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲು ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾತ್ರಿ 9:12ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ 9:40ರ ವೇಳೆಗೆ ಸಂಪೂರ್ಣವಾಗಿ ನಂದಿಸಲಾಗಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈ ದುಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ʻಹವಾನಿಯಂತ್ರಣ ವ್ಯವಸ್ಥೆಯಲ್ಲಿ ಕಾಣಿಸಿಕೊಂಡ ದೋಷವೇ ಬೆಂಕಿ ಅವಘಡಕ್ಕೆ  ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆದರೆ ನಿರ್ಧಿಷ್ಟ  ಕಾರಣ ತನಿಖೆಯ ನಂತರವಷ್ಟೇ ತಿಳಿಯಲಿದೆ ಎಂದು ತುರ್ತು ಸೇವೆ, ಸುರಕ್ಷತೆ ಸಚಿವ ಸುಜಿತ್ ಬೋಸ್ ತಿಳಿಸಿದ್ದಾರೆ. ಈ ಕುರಿತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಕಾರ (ಎಎಐ)ತನಿಖೆ ಪ್ರಾರಂಭಿಸಿದೆ.

ಈ ಸುದ್ದಿ ಓದಿದ್ದೀರಾ?: ಗುಜರಾತ್ | ಉದ್ಘಾಟನೆಗೂ ಮುನ್ನವೇ ಮುರಿದು ಬಿತ್ತು ಸೇತುವೆ

ಬೆಂಕಿ ಅವಘಡದಿಂದಾಗಿ ಸುಮಾರು 1 ಗಂಟೆ ಕಾಲ ಪ್ರಯಾಣಿಕರು ವಿಮಾನ ನಿಲ್ದಾಣ ಪ್ರವೇಶಿಸುವುದನ್ನು ತಡೆಯಲಾಗಿತ್ತು. ಕೆಲ ವಿಮಾನಗಳ ಹಾರಾಟ ಕೂಡ ವಿಳಂಬವಾಯಿತು. ರಾತ್ರಿ 10.30ಕ್ಕೆ ಚೆಕ್-ಇನ್ ಸೇವೆ ಪುನರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...