ಗರೀಬ್ ರಥ ಎಕ್ಸ್‌ಪ್ರೆಸ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

Date:

ಅಮೃತಸರದಿಂದ ಬಿಹಾರದ ಸಹರ್ಸಾಗೆ ತೆರಳುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ನ ಮೂರು ಎಸಿ ಬೋಗಿಗಳು ಸಿರ್ಹಿಂದ್ ರೈಲ್ವೆ ನಿಲ್ದಾಣದ ಬಳಿ ಬೆಂಕಿಗೆ ಆಯುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -

ರೈಲು ಸಿರ್ಹಿಂದ್‌ ನಿಲ್ದಾಣವನ್ನು ದಾಟಿ ಮುಂದೆ ಸಾಗುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ರೈಲು ನಿಧಾನಗತಿಯಲ್ಲಿ ಚಲಿಸುತ್ತಿದ್ದರಿಂದ, ರೈಲನ್ನು ತಕ್ಷಣವೇ ನಿಲ್ಲಿಸಲಾಗಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ರೈಲಿನಲ್ಲಿ ಹೊರಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಆದಾಗ್ಯೂ, ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟದಲ್ಲಿ ರೈಲಿನ ಮೂರು ಬೋಗಿಗಳು ಭಾಗಶಃ ಸುಟ್ಟುಹೋಗಿದ್ದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿ ಪ್ರಕಾರ, “ಆರಂಭದಲ್ಲಿ ಜಿ-19 ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ ಪ್ರಯಾಣಿಕರೊಬ್ಬರು ರೈಲು ನಿಲ್ಲಿಸಲು ತುರ್ತು ಸರಪಳಿಯನ್ನು ಎಳೆದಿದ್ದು, ತಕ್ಷಣವೇ ರೈಲು ನಿಂತಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಬೋಗಿಯಿಂದ ಕೆಳಗಿಳಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಬೆಂಕಿ ಹೊತ್ತಿಕೊಂಡ ಮೂರು ಕೋಚ್‌ಗಳನ್ನು ರೈಲಿನ ಉಳಿದ ಭಾಗದಿಂದ ಬೇರ್ಪಡಿಸಲಾಗಿದ್ದು, ಬೆಂಕಿಯನ್ನು ನಿಯಂತ್ರಿಸಲಾಗಿದೆ. ಓರ್ವ ಮಹಿಳೆಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಫತೇಘರ್ ಸಾಹಿಬ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...