ಆಂಧ್ರ ಪ್ರದೇಶ | ರೈಲಿನಲ್ಲಿ ಬೆಂಕಿ; ಓರ್ವ ಪ್ರಯಾಣಿಕ ಸಾವು, 3 ಬೋಗಿಗಳು ಭಸ್ಮ

Date:

ಆಂಧ್ರಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ದುವ್ವಾಡ ಮೂಲಕ ಹಾದುಹೋಗುತ್ತಿದ್ದ ಟಾಟಾ ನಗರ–ಎರ್ನಾಕುಲಂ (18189) ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಈ ದುರಂತದಲ್ಲಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದಾರೆ.

- Advertisement -

ಮೃತರನ್ನು ವಿಜಯವಾಡ ನಿವಾಸಿ ಚಂದ್ರಶೇಖರ್ ಸುಂದರ್ (70) ಎಂದು ಗುರುತಿಸಲಾಗಿದೆ. ಅವರು ಬಿ1 ಎಸಿ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬೆಳಗಿನ ಜಾವ 1.30ರ ಸುಮಾರಿಗೆ ಪ್ಯಾಂಟ್ರಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಅದು ಪಕ್ಕದ ಬಿ1 ಹಾಗೂ ಎಂ2 ಎಸಿ ಬೋಗಿಗಳಿಗೆ ವೇಗವಾಗಿ ಹರಡಿತು. ಎಲಮಂಚಿಲಿ ಸಮೀಪ ಹೊಗೆ ಕಂಡುಬಂದ ತಕ್ಷಣ ಲೋಕೋ ಪೈಲಟ್‌ ಗಳು ರೈಲನ್ನು ಹತ್ತಿರದ ನಿಲ್ದಾಣದಲ್ಲಿ ನಿಲ್ಲಿಸಿದರೂ, ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಎರಡು ಬೋಗಿಗಳು ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಘಟನೆಯಿಂದ ರೈಲಿನಲ್ಲಿದ್ದ ಪ್ರಯಾಣಿಕರು ಆತಂಕಿತರಾದರು. ದಟ್ಟವಾದ ಹೊಗೆ ಆವರಿಸುತ್ತಿದ್ದಂತೆ ನಿದ್ದೆಯಲ್ಲಿದ್ದ, ಭಯಭೀತರಾದ ಪ್ರಯಾಣಿಕರು ತಮ್ಮ ಬೋಗಿಗಳಿಂದ ಹೊರಬಂದು ಪ್ಲಾಟ್‌ಫಾರ್ಮ್‌ಗೆ ಧಾವಿಸಿದರು.

ರೈಲು ಅನಕಪಲ್ಲಿಗೆ ಸುಮಾರು ನಾಲ್ಕು ಗಂಟೆಗಳ ತಡವಾಗಿ ತಲುಪಿತು. ನಂತರ ನರಸಿಂಗಬಳ್ಳಿ ಬಳಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬಿ1 ಬೋಗಿಯಲ್ಲಿ ಬ್ರೇಕ್ ಜಾಮ್ ಆಗಿರುವುದೇ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

ಎಲಮಂಚಿಲಿ ಹಾಗೂ ನಕ್ಕಪಲ್ಲಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸಿದರು. ಸುಟ್ಟುಹೋದ ಬೋಗಿಗಳಲ್ಲಿದ್ದ ಎಲ್ಲ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿತ್ತು.

ಚಳಿಗಾಲದ ತೀವ್ರ ಚಳಿ ನಡುವೆಯೇ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಸುಮಾರು 2,000 ಪ್ರಯಾಣಿಕರು ನಿಲ್ದಾಣದಲ್ಲೇ ಸಿಲುಕಿಕೊಂಡರು. ಘಟನೆಯಿಂದ ವಿಶಾಖಪಟ್ಟಣ–ವಿಜಯವಾಡ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಬೆಳಗಿನ ಜಾವ 3.30ರ ಸುಮಾರಿಗೆ ಸುಟ್ಟುಹೋದ ಬೋಗಿಗಳನ್ನು ಬೇರ್ಪಡಿಸಿ, ಉಳಿದ ಬೋಗಿಗಳಲ್ಲಿ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸಿ ರೈಲನ್ನು ಮುಂದುವರಿಸಲು ಅಧಿಕಾರಿಗಳು ಅನುಮತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...