ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ.
14 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಹಲವಾರು ಜನರನ್ನು ರಕ್ಷಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಗವತ್ ಅಹಿಂಸೆಯ ಮಾತಾಡಿದ್ದಾರೆ; ಅಂದಮೇಲೆ ಸಿದ್ದರಾಮಯ್ಯರ ಹೇಳಿಕೆಯಲ್ಲಿ ತಪ್ಪೇನಿದೆ?
ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತರಿಗೆ ಅಗತ್ಯ ಚಿಕಿತ್ಸಾ ನೆರವು ನೀಡುವಂತೆ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದ್ದಾರೆ.
ಇದು ಒಂದು ದುರಂತ ಘಟನೆ. ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಇನ್ನೂ ಬಹಳಷ್ಟು ಜನರು ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತೆ ಅಥವಾ ಭದ್ರತೆ ಇರಲಿಲ್ಲ. ನಿಗಮ ಏನು ಮಾಡುತ್ತಿದೆ ಎಂದು ನನಗೆ ತಿಳಿದಿಲ್ಲ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.