ಉತ್ತರ ಪ್ರದೇಶ | ಹಾಡಹಗಲೇ ನಡುರಸ್ತೆಯಲ್ಲೇ ಗುಂಪುಗಳ ನಡುವೆ ಗುಂಡಿನ ಕಾಳಗ; ವಿಡಿಯೋ ವೈರಲ್

Date:

ಬಿಜೆಪಿಯ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹಾಳಾಗುತ್ತಿದ್ದು, ಜಮೀನು ವಿವಾದವೊಂದರ ಸಂಬಂಧ ಹಾಡಹಗಲೇ ನಡುರಸ್ತೆಯಲ್ಲೇ ಗುಂಪುಗಳ ನಡುವೆ ಗುಂಡಿನ ಕಾಳಗ ಘಟನೆ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಉತ್ತರ ಪ್ರದೇಶದ ಬರೇಲಿಯ ಇಜ್ಜತ್‌ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಬರೇಲಿಯ ಇಜ್ಜತ್‌ನಗರ ಪ್ರದೇಶದಲ್ಲಿ ಜಮೀನೊಂದನ್ನು ವಶಪಡಿಸಿಕೊಳ್ಳುವ ಕುರಿತು ಗಲಾಟೆ ನಡೆದಿದೆ. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಪಿಲಿಭಿತ್ ಬೈಪಾಸ್‌ನಲ್ಲಿ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೇ, ಸ್ಥಳದಲ್ಲಿದ್ದ ಎರಡು ಬುಲ್ಡೋಝರ್‌ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುಮಾರು 30 ನಿಮಿಷಗಳ ಕಾಲ ರಸ್ತೆಯಲ್ಲಿ ಗುಂಡಿನ ಕಾಳಗ ನಡೆದಿತ್ತು, ಈ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಪೊಲೀಸರು ಬರುವುದನ್ನು ಅರಿತ ಗುಂಡಿನ ಕಾಳಗದಲ್ಲಿ ನಿರತರಾಗಿದ್ದವರ ಪೈಕಿ ಕೆಲವರು ಪರಾರಿಯಾಗಿದ್ದಾರೆ. ಎರಡು ಗುಂಪಿನ ಪೈಕಿ ಒಂದು ಗುಂಪಿನ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಘಟನೆಯ ಹಲವು ವೀಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ಸಿನಿಮಾ ಶೈಲಿಯಲ್ಲಿ ನಡುರಸ್ತೆಯಲ್ಲೇ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ. ಅದೃಷ್ಟವಶಾತ್ ಯಾವುದೇ ಸಾರ್ವಜನಿಕರಿಗೆ ಗಾಯವಾಗಿಲ್ಲ ಎಂದು ವರದಿಯಾಗಿದೆ.

“ಜಮೀನು ವಿವಾದಕ್ಕೆ ಸಂಬಂಧಿಸಿ ಆದಿತ್ಯ ಉಪಾಧ್ಯಾಯ ಮತ್ತು ರಾಜೀವ್ ರಾಣಾ ಎಂಬ ಎರಡು ಗುಂಪುಗಳ ನಡುವೆ ಪರಸ್ಪರ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇಜ್ಜತ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಯ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಜಯ್ ಮತ್ತು ರೋಹಿತ್ ಎಂಬ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ಇಬ್ಬರನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಅನಿತಾ ಚೌಹಾಣ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ‘ಕೆಂಪು ಬೀಕನ್’ ಅಳವಡಿಸಿದ್ದ ಐಎಎಸ್ ಅಧಿಕಾರಿಯ ಆಡಿ ಕಾರು ವಶ

ತಮ್ಮ ಐಷಾರಾಮಿ ಕಾರಿಗೆ ಅಕ್ರಮವಾಗಿ 'ಕೆಂಪು ಬೀಕನ್' ದೀಪವನ್ನು ಅಳವಡಿಸಿದ ಆರೋಪದ...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...