ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಯಾದವ್ ನಿವಾಸದ ಹೊರಗೆ ಗುಂಡಿನ ದಾಳಿ

Date:

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌ ಅವರ ಗುರುಗ್ರಾಮದಲ್ಲಿರುವ ನಿವಾಸದ ಹೊರಗೆ ಅಪರಿಚಿತರು ಭಾನುವಾರ ಮುಂಜಾನೆ ಗುಂಡು ಹಾರಿಸಿದ್ದಾರೆ. ಗುಂಡುಗಳು ಮನೆಯ ಹೊರಗೆ ಭೂಮಿಗೆ ಮತ್ತು ಮೊದಲ ಮಹಡಿಗೆ ತಗುಲಿವೆ.

- Advertisement -

ಬೆಳಿಗ್ಗೆ ಸುಮಾರು 5.30ರಿಂದ 6 ಗಂಟೆಯ ನಡುವೆ ಗುಂಡಿನ ದಾಳಿ ನಡೆದಿದೆ. ಬೈಕ್‌ನಲ್ಲಿ ಬಂದ ಮೂವರು ಸೆಕ್ಟರ್ 57ರಲ್ಲಿರುವ ಯಾದವ್ ಅವರ ಮನೆಯ ಮೇಲೆ 25ಕ್ಕೂ ಅಧಿಕ ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಹಾವಿನ ವಿಷ ಪ್ರಕರಣ | ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ

ಎರಡನೇ ಮತ್ತು ಮೂರನೇ ಮಹಡಿಯಲ್ಲಿ ವಾಸಿಸುವ ಯಾದವ್ ಆ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ. ದಾಳಿ ನಡೆದಾಗ ಅವರ ಕೆಲವು ಕುಟುಂಬ ಸದಸ್ಯರು ಒಳಗೆ ಇದ್ದರು. ಯಾರಿಗೂ ಗಾಯಗಳಾಗಿಲ್ಲ. ಎಲ್ವಿಶ್‌ ಪ್ರಸ್ತುತ ಹರಿಯಾಣದ ಹೊರಗಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಗುರುಗ್ರಾಮ ಪೊಲೀಸ್ ಅಧಿಕಾರಿ ಸಂದೀಪ್ ಕುಮಾರ್, “ಗುರುಗ್ರಾಮದ ಸೆಕ್ಟರ್ 57ರಲ್ಲಿರುವ ಯೂಟ್ಯೂಬರ್ ಮತ್ತು ಬಿಗ್ ಬಾಸ್ ಒಟಿಟಿ ವಿಜೇತ ಎಲ್ವಿಶ್ ಯಾದವ್ ಅವರ ನಿವಾಸ ಹೊರಗೆ ಮೂವರು ಮುಸುಕುಧಾರಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಬೆಳಿಗ್ಗೆ 5:30 ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಡಜನ್‌ಗೂ(12ಕ್ಕೂ ಅಧಿಕ) ಹೆಚ್ಚು ಸುತ್ತು ಗುಂಡು ಹಾರಿಸಲಾಗಿದೆ. ಈ ವೇಳೆ ಎಲ್ವಿಶ್ ಯಾದವ್ ಮನೆಯಲ್ಲಿ ಇರಲಿಲ್ಲ” ಎಂದು ತಿಳಿಸಿದ್ದಾರೆ.

ಸದ್ಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ. ಕುಟುಂಬದಿಂದ ಔಪಚಾರಿಕ ದೂರು ದಾಖಲಾದ ನಂತರ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನು “ಘಟನೆಗೂ ಮುನ್ನ ಎಲ್ವಿಶ್‌ಗೆ ಯಾವುದೇ ಬೆದರಿಕೆಗಳು ಬಂದಿಲ್ಲ. ನಾವು ಮಲಗಿದ್ದಾಗ ದಾಳಿಕೋರರು ಬೈಕ್‌ನಲ್ಲಿ ಬಂದು ಗುಂಡು ಹಾರಿಸಲು ಪ್ರಾರಂಭಿಸಿದರು. ಮೂವರು ಮುಸುಕುಧಾರಿಗಳು ಇದ್ದರು. ಒಬ್ಬರು ಬೈಕ್‌ನಲ್ಲಿ ಕುಳಿತಿದ್ದರು. ಉಳಿದ ಇಬ್ಬರು ಕೆಳಗೆ ಇಳಿದು ಮನೆಯ ಮೇಲೆ ಗುಂಡು ಹಾರಿಸಿದರು. ಅವರು ಸುಮಾರು 25 ರಿಂದ 30 ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಪ್ರಸ್ತುತ ಎಲ್ವಿಶ್ ಕೆಲಸದ ನಿಮಿತ್ತ ನಗರದಿಂದ ಹೊರಗಿದ್ದಾನೆ” ಎಂದು ತಂದೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರೇವ್ ಪಾರ್ಟಿಗಾಗಿ ಹಾವಿನ ವಿಷ: ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಎಫ್‌ಐಆರ್

ವಿದೇಶಿಯರನ್ನು ಆಹ್ವಾನಿಸಿ, ವಿಷಕಾರಿ ಹಾವುಗಳ ವಿಷವನ್ನು ಬಳಸಿಕೊಂಡು ರೇವ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪದಲ್ಲಿ ಬಿಗ್‌ಬಾಸ್ ಸ್ಪರ್ಧಿ, ಯೂಟ್ಯೂಬರ್ ಎಲ್ವಿಶ್ ಯಾದವ್‌ ಅವರನ್ನು ನೋಯ್ಡಾ ಪೊಲೀಸರು ಕಳೆದ ವರ್ಷ ಮಾರ್ಚ್‌ನಲ್ಲಿ ಬಂಧಿಸಿದ್ದರು. ಸದ್ಯ ಎಲ್ವಿಶ್ ಜಾಮೀನು ಮೇಲೆ ಹೊರಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

2023ರ ನವೆಂಬರ್‌ ತಿಂಗಳಲ್ಲಿ ನೋಯ್ಡಾದಲ್ಲಿ ಆಯೋಜನೆಗೊಂಡಿದ್ದ ರೇವ್ ಪಾರ್ಟಿಗೆ ದಾಳಿ ನಡೆಸಿ ನೋಯ್ಡಾ ಪೊಲೀಸರು ಐವರನ್ನು ಬಂಧಿಸಿದ್ದರು. ಈ ವೇಳೆ ಐದು ನಾಗರ ಹಾವು ಸೇರಿ ಒಟ್ಟಾಗಿ ಒಂಬತ್ತು ಹಾವುಗಳನ್ನು ಮತ್ತು ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಅದು ಮಾತ್ರವಲ್ಲದೆ ಎಲ್ವಿಶ್ ಯಾದವ್ ಮತ್ತು ಅವರ ಸಹಚರರು ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...