ಮೊದಲ ಹಂತದ ಚುನಾವಣೆ | ಏಪ್ರಿಲ್ 17ರಂದು ಬಹಿರಂಗ ಪ್ರಚಾರಕ್ಕೆ ತೆರೆ

Date:

ಬಿರು ಬಿಸಿಲಿನ ನಡುವೆ ದೇಶದೆಲ್ಲೆಡೆ ಚುನಾವಣೆ ಕಾವು ಜೋರಾಗಿದೆ. ಏಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಏಪ್ರಿಲ್ 17ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

- Advertisement -

ಈ ಬಾರಿ ಲೋಕಸಭಾ ಚುನಾವಣೆಯು ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು, ಏಪ್ರಿಲ್ 19ರಿಂದ ಮತದಾನ ನಡೆಯಲಿದೆ. ಜೂನ್‌ 4 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಏ.19ರಂದು (ಶುಕ್ರವಾರ) ಮತದಾನ ನಡೆಯಲಿದ್ದು, ಗುರುವಾರ ಸಂಜೆವರೆಗೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮತದಾರರ ಮನೆಮನೆಗೆ ತೆರಳಿ ಪ್ರಚಾರ ನಡೆಸಬಹುದಾಗಿದೆ. ಈ ಮೊದಲ ಹಂತದ ಚುನಾವಣೆಗಳು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಜೂ.4ರಂದು ಎಲ್ಲ 7 ಹಂತದ ಚುನಾವಣೆ ಮುಗಿದ ಬಳಿಕ ಒಟ್ಟಿಗೆ ಫಲಿತಾಂಶ ಪ್ರಕಟವಾಗಲಿದೆ.

ಮೊದಲ ಹಂತದಲ್ಲಿ ತಮಿಳುನಾಡಿನ 39 ಕ್ಷೇತ್ರಗಳು, ರಾಜಸ್ಥಾನದ 12 ಲೋಕಸಭಾ ಕ್ಷೇತ್ರಗಳು, ಉತ್ತರ ಪ್ರದೇಶದ 8 ಕ್ಷೇತ್ರಗಳು, ಮಧ್ಯ ಪ್ರದೇಶದ 6 ಕ್ಷೇತ್ರಗಳು, ಉತ್ತರಾಖಂಡ ಮತ್ತು ಮಹಾರಾಷ್ಟ್ರ, ಅಸ್ಸಾಂನ ತಲಾ 5 ಕ್ಷೇತ್ರಗಳು, ಬಿಹಾರದ 4 ಕ್ಷೇತ್ರ, ಪಶ್ಚಿಮ ಬಂಗಾಳದ 3 ಕ್ಷೇತ್ರ, ಮಣಿಪುರ, ಅರುಣಾಚಲ ಪ್ರದೇಶ, ಮೇಘಾಲಯ ತಲಾ 2 ಕ್ಷೇತ್ರಗಳು, ಪುದುಚೆರಿ, ಅರುಣಾಚಲ ಪ್ರದೇಶ, ಛತ್ತೀಸ್‌ಘಡ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ವಲಸೆ ಕಾರ್ಮಿಕರ ಮಕ್ಕಳ ಮಾರ್ಗದರ್ಶಿಯಾಗಿದ್ದ ಬೆಂಗಳೂರು ಎಸ್ಐ ಈಗ ಐಎಎಸ್ ಅಧಿಕಾರಿ

ಮೊದಲ ಹಂತದ ಚುನಾವಣೆಗೆ 20 ರಾಜ್ಯಗಳಲ್ಲಿ ಮಾ.20 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾ.27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಬಿಹಾರದಲ್ಲಿ ಮಾತ್ರ ಹಬ್ಬದ ಕಾರಣಕ್ಕೆ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಗೆ ಮಾರ್ಚ್ 28 ಕೊನೆಯ ದಿನವಾಗಿತ್ತು. ಬಿಹಾರದಲ್ಲಿ ಮಾರ್ಚ್ 30ರಂದು ನಾಮಪತ್ರಗಳ ಪರಿಶೀಲನೆ ನಡೆಸಿ, ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 2 ಕೊನೆಯ ದಿನವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...