ಜಮ್ಮು ಕಾಶ್ಮೀರ | ಕಂದಕಕ್ಕೆ ಉರುಳಿದ ಟೆಂಪೋ: ಐವರ ಸಾವು, 17 ಮಂದಿಗೆ ಗಾಯ

Date:

ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದು ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಟೆಂಪೋ ಟ್ರಾವೆಲರ್ ಮಂಗಳವಾರ ಬೆಳಿಗ್ಗೆ ದೋಡಾ-ಬರಾತ್ ರಸ್ತೆಯ ಪೋಂಡಾ ಪ್ರದೇಶದಲ್ಲಿ ರಸ್ತೆಯಿಂದ ಜಾರಿ ಕಂದಕಕ್ಕೆ ಉರುಳಿದೆ. ಗಾಯಗೊಂಡ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ | ಕಂದಕಕ್ಕೆ ಉರುಳಿದ ಬಸ್‌; 36 ಮಂದಿ ದುರ್ಮರಣ

ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ನಾಗರಿಕರೂ ಸಹಾಯ ಮಾಡಿದ್ದಾರೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, 17 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ದೋಡಾದ ಮುಖ್ಯ ವೈದ್ಯಾಧಿಕಾರಿ ಡಾ. ಓಮರ್ ಕುಮಾರ್ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದು, “ಗಾಯಾಳುಗಳನ್ನು ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ. ಅಲ್ಲಿ ಇಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಮೃತರ ಸಂಖ್ಯೆ ಐದಕ್ಕೆ ತಲುಪಿದೆ” ಎಂದು ಹೇಳಿದ್ದಾರೆ.

ಗಾಯಗೊಂಡವರಲ್ಲಿ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡವರಲ್ಲಿ ಒಬ್ಬರನ್ನು ವಿಶೇಷ ಚಿಕಿತ್ಸೆಗಾಗಿ ಜಮ್ಮು ಕಾಶ್ಮೀರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್, “ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯ ಮತ್ತು ವೈದ್ಯಕೀಯ ಸಹಾಯವನ್ನು ಒದಗಿಸಲಾಗುತ್ತಿದೆ. ಜಿಲ್ಲಾಧಿಕಾರಿ ವೈಯಕ್ತಿಕವಾಗಿ ಸಂಪೂರ್ಣ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...