ಛತ್ತೀಸ್‌ಗಢ | ಎನ್‌ಕೌಂಟರ್‌ಗಳಲ್ಲಿ ಐವರು ಮಾವೋವಾದಿಗಳು ಹತ

Date:

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಭದ್ರತಾ ಪಡೆಗಳು ಪ್ರತ್ಯೇಕ ಎರಡು ಎನ್‌ಕೌಂಟರ್ ನಡೆಸಿ ಐವರು ಮಾವೋವಾದಿಗಳ ಹತ್ಯೆ ಮಾಡಿದೆ.

- Advertisement -

ಕಳೆದ ಮೂರು ದಿನಗಳಲ್ಲಿ ಮಾವೋವಾದಿ ನಾಯಕರುಗಳಾದ ಸುಧಾಕರ್ ಮತ್ತು ಭಾಸ್ಕರ್ ಸೇರಿದಂತೆ ಒಟ್ಟು ಏಳು ಮಂದಿ ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ. ಮೇ 14ರಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ವರದಿ ಪ್ರಕಾರ 2025ರ ನಾಲ್ಕು ತಿಂಗಳ ಅವಧಿಯಲ್ಲೇ ಸುಮಾರು 197 ಮಾವೋವಾದಿಗಳ ಹತ್ಯೆ ಮಾಡಲಾಗಿದೆ. ‘ಇದರಲ್ಲಿ ಆದಿವಾಸಿಗಳೂ ಸೇರಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸ್ಥಳೀಯರ ಹತ್ಯೆಯೂ ನಡೆದಿದೆ’ ಎಂಬ ಆರೋಪಗಳೂ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಎನ್‌ಕೌಂಟರ್‌; ಎಂಟು ನಕ್ಸಲರು ಹತ

ಇತ್ತೀಚಿನ ಕಾರ್ಯಾಚರಣೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಏಳು ಮಾವೋವಾದಿಗಳ ಶವವನ್ನು ವಶಕ್ಕೆ ಪಡೆದಿದೆ” ಎಂದಿದ್ದಾರೆ.

ಮಾವೋವಾದಿ ನಾಯಕ ಸುಧಾಕರ್, ತೆಲಂಗಾಣ ರಾಜ್ಯ ಸಮಿತಿ ಸದಸ್ಯ ಬಂಡಿ ಪ್ರಕಾಶ್, ದಂಡಕಾರಣ್ಯ ವಿಶೇಷ ವಲಯ ಸಮಿತಿ(DKSZC) ಸದಸ್ಯ ಪಪ್ಪಾ ರಾವ್ ಇರುವ ಮಾಹಿತಿ ಆಧಾರದಲ್ಲಿ ಜೂನ್ 4ರಂದು ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆ(ಎಸ್‌ಟಿಎಫ್), ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ), ಸಿಆರ್‌ಪಿಎಫ್‌ನ ವಿಶೇಷ ಘಟಕ CoBRAದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ಹತ್ಯೆಗೀಡಾದ ಐವರು ಮಾವೋವಾದಿಗಳ ಗುರುತು ಪತ್ತೆಯಾಗಿಲ್ಲ. ಈ ಪೈಕಿ ಇಬ್ಬರು ಮಹಿಳೆಯರು. ಕಾರ್ಯಾಚರಣೆ ವೇಳೆ ಎರಡು ಎಕೆ-47 ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಮೇ 21ರಂದು ನಿಷೇಧಿತ ಸಿಪಿಐ(ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು(70) ಅವರ ಎನ್‌ಕೌಂಟರ್ ಮಾಡಲಾಗಿದೆ.

ಮಾವೋವಾದಿಗಳ ಹತ್ಯೆ ಹೆಚ್ಚಾಗುತ್ತಿದ್ದಂತೆ 2024ರಲ್ಲಿ 928 ನಾಯಕರು ಮುಖ್ಯವಾಹಿನಿಗೆ ಬಂದಿದ್ದಾರೆ. 2025ರಲ್ಲಿ ಈವರೆಗೆ 718 ಮಾವೋವಾದಿಗಳು ಮುಖ್ಯವಾಹಿನಿಗೆ ಬಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...