ಜಂತರ್ ಮಂತರ್‌ನಲ್ಲಿ ಧ್ವಜಾರೋಹಣ: ರಾಷ್ಟ್ರಧ್ವಜ ಹಾರಿಸುವುದು ಅಪರಾಧವೇ – ಸಿಜೆಪಿ ನಾಯಕ ದೀಪ್ಕೆ ಪ್ರಶ್ನೆ

Date:

ದೆಹಲಿಯ ಜಂತರ್ ಮಂತರ್ ಬಳಿ ರಾಷ್ಟ್ರಧ್ವಜ ಹಾರಿಸಿದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. “ಭಾರತದಲ್ಲಿ ರಾಷ್ಟ್ರಧ್ವಜ (ತ್ರಿವರ್ಣ ಧ್ವಜ) ಹಾರಿಸುವುದು ಯಾವಾಗದಿಂದ ಅಪರಾಧವಾಯಿತು?” ಎಂದು ದೀಪ್ಕೆ ದೆಹಲಿ ಪೊಲೀಸರನ್ನು ನೇರವಾಗಿ ಪ್ರಶ್ನಿಸಿದ್ದಾರೆ.

- Advertisement -

ಸಿಜೆಪಿ ಸಂಚಾಲಕರಾದ ಸೌರವ್ ದಾಸ್, ಆಶುತೋಷ್ ರಾಂಕಾ, ಅಜಿಂಕ್ಯ ಶಿಂದೆ ಸೇರಿದಂತೆ ಪ್ರಮುಖ ನಾಯಕರನ್ನು ಪೊಲೀಸರು ಜಂತರ್ ಮಂತರ್‌ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯನ್ನು “ಸರ್ವಾಧಿಕಾರಿ ಮನಸ್ಥಿತಿಯ ಪರಮಾವಧಿ” ಎಂದು ದೀಪ್ಕೆ ಬಣ್ಣಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದನ್ನೂ ಓದಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಬಂಧನದಲ್ಲಿರುವ ನಾಯಕರನ್ನು ಭೇಟಿಯಾಗಲು ಅವರ ವಕೀಲರಿಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ. “ನ್ಯಾಯಸಮ್ಮತ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ವಕೀಲರ ಭೇಟಿಗೆ ತಡೆ ಒಡ್ಡುವುದು ಕಾನೂನುಬಾಹಿರ. ದೆಹಲಿ ಪೊಲೀಸರ ಈ ನಡವಳಿಕೆ ಬಂಧನವಲ್ಲ, ಬದಲಿಗೆ ಅಪಹರಣಕ್ಕೆ (ಕಿಡ್ನಾಪಿಂಗ್) ಸಮನಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ರಾಷ್ಟ್ರಧ್ವಜ ಹಾರಿಸುವುದು ಕಾನೂನಿನ ಉಲ್ಲಂಘನೆ ಎಂದು ಭಾವಿಸುವವರನ್ನು “ದೇಶದ್ರೋಹಿಗಳು” ಎಂದು ಕರೆದಿರುವ ಅವರು, ತಮ್ಮ ನಾಯಕರ ಬಂಧನದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಮತ್ತು ಪ್ರತಿಭಟನೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...