ನೇಪಾಳದಲ್ಲಿ ಹಠಾತ್ ಪ್ರವಾಹ: ಕೈಲಾಸ ಯಾತ್ರೆಗೆ ತೆರಳಿದ್ದ 105 ಭಾರತೀಯರು ನಾಪತ್ತೆ; 19 ಮಂದಿ ಸಾವು

Date:

ಟಿಬೆಟ್‌ನ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಸುಮಾರು 350ಕ್ಕೂ ಹೆಚ್ಚು ಯಾತ್ರಿಕರು ನೇಪಾಳದಲ್ಲಿ ಹಠಾತ್ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ 105 ಮಂದಿ ಭಾರತೀಯರು ಇದ್ದಾರೆ ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿ ತಿಳಿಸಿದೆ. ಭೀಕರ ಪ್ರವಾಹದಲ್ಲಿ ಈವರೆಗೆ 19 ಮಂದಿ ಮೃತಪಟ್ಟಿದ್ದಾರೆ.

- Advertisement -

ಟಿಬೆಟ್‌ ಭಾಗದಿಂದ ಹರಿದು ಬಂದ ಪ್ರವಾಹದ ನೀರು ನೇಪಾಳದ ಭೋಟೆ ಕೋಶಿ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ನುವಾಕೋಟ್‌ ಮತ್ತು ಧಾದಿಂಗ್‌ ಜಿಲ್ಲೆಗಳಲ್ಲಿ ವ್ಯಾಪಕ ಹಾನಿ ಉಂಟುಮಾಡಿದೆ. ಹಲವು ಗ್ರಾಮಗಳು ಪ್ರವಾಹದ ರಭಸಕ್ಕೆ ಕೊಚ್ಚಿಹೋಗಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನೇಪಾಳ ಪ್ರವಾಸೋದ್ಯಮ ಮಂಡಳಿಯ ಪ್ರಕಾರ, ಪ್ರವಾಹ ಪೀಡಿತ ಪ್ರದೇಶದಿಂದ 291 ವಿದೇಶಿಯರು ಹಾಗೂ 93 ನೇಪಾಳಿ ಪ್ರಜೆಗಳು ಸೇರಿದಂತೆ ಒಟ್ಟು 384 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ವಿದೇಶಿಯರಲ್ಲಿ 105 ಮಂದಿ ಭಾರತೀಯರಾಗಿದ್ದಾರೆ. ವಿವಿಧ ಪ್ರವಾಸೋದ್ಯಮ ಸಂಸ್ಥೆಗಳ ಮೂಲಕ ಇವರು ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದರು. ಇನ್ನು ರಸುುವಾ ಜಿಲ್ಲೆಯಲ್ಲಿ 26 ಮಂದಿ ನೇಪಾಳ ಪೊಲೀಸ್ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಸಶಸ್ತ್ರ ಪೊಲೀಸ್ ಪಡೆಯ ಏಳು ಸಿಬ್ಬಂದಿಯೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಾಗಿ ನೇಪಾಳ ಸೇನೆ ಹೆಲಿಕಾಪ್ಟರ್‌ಗಳು ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿಯನ್ನು ನಿಯೋಜಿಸಿದೆ. ಪ್ರವಾಹದಿಂದ ಉಂಟಾಗಿರುವ ಹಾನಿಯ ಸಂಪೂರ್ಣ ವಿವರ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದು ಸೇನೆ ತಿಳಿಸಿದೆ.

ಪ್ರವಾಹದಿಂದ ನೇಪಾಳದ ಉತ್ತರ ಜಿಲ್ಲೆಗಳಲ್ಲಿ ರಸ್ತೆ ಹಾಗೂ ವಿದ್ಯುತ್ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದೆ. ನೇಪಾಳ ವಿದ್ಯುತ್ ಪ್ರಾಧಿಕಾರದ ಪ್ರಕಾರ, ರಸುವಾಗಢಿ, ಚಿಲಿಮೆ, ತ್ರಿಶೂಲಿ 3A, ತ್ರಿಶೂಲಿ 3B ಹಬ್ 220 ಕೆವಿ ಸಬ್‌ಸ್ಟೇಷನ್‌, ತ್ರಿಶೂಲಿ ಜಲವಿದ್ಯುತ್ ಕೇಂದ್ರ ಮತ್ತು ದೇವಿಘಾಟ್ ಜಲವಿದ್ಯುತ್ ಕೇಂದ್ರ ಸೇರಿದಂತೆ ಕನಿಷ್ಠ ಆರು ಪ್ರಮುಖ ಜಲವಿದ್ಯುತ್ ಹಾಗೂ ಪ್ರಸರಣ ಸೌಲಭ್ಯಗಳು ಹಾನಿಗೊಳಗಾಗಿವೆ.

ಪ್ರವಾಹದಿಂದ ವಿದ್ಯುತ್ ಉತ್ಪಾದನೆ, ಪ್ರಸರಣ ಮತ್ತು ವಿತರಣಾ ವ್ಯವಸ್ಥೆಗೆ ಹಾನಿಯಾಗಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ. ಇದೇ ವೇಳೆ ಹಲವು ಹೆದ್ದಾರಿಗಳನ್ನೂ ಬಂದ್ ಮಾಡಲಾಗಿದೆ.

ನೇಪಾಳ ಪೊಲೀಸ್ ಹಾಗೂ ಇತರರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೊಗಳಲ್ಲಿ, ಕೆಸರು ಮಿಶ್ರಿತ ಭಾರಿ ಪ್ರಮಾಣದ ನೀರು ಹಿಮಾಲಯದ ಕಣಿವೆಗಳ ಮೂಲಕ ರಭಸದಿಂದ ಹರಿದು ಬಂದು ಮನೆಗಳು ಹಾಗೂ ಇತರ ಕಟ್ಟಡಗಳನ್ನು ಕೊಚ್ಚಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡುಬಂದಿವೆ.

ಪ್ರವಾಹದಿಂದ ಉಂಟಾಗಿರುವ ಹಾನಿಯ ನಿಖರ ಪ್ರಮಾಣ ಇನ್ನೂ ತಿಳಿದುಬಂದಿಲ್ಲ. ಹಲವು ವಸತಿ ಪ್ರದೇಶಗಳು ಹಾನಿಗೊಳಗಾಗಿರುವ ಸಾಧ್ಯತೆಯಿದೆ ಎಂದು ನೇಪಾಳ ಪೊಲೀಸ್ ವಕ್ತಾರ ಅಬಿ ನಾರಾಯಣ್ ಕಾಫ್ಲೆ ತಿಳಿಸಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರಗೆ ಕ್ಲೀನ್ ಚಿಟ್, ಶೀಘ್ರದಲ್ಲೇ ಸಂಪುಟಕ್ಕೆ ಮಹಿಳೆ ಸೇರ್ಪಡೆ: ಸಿಎಂ ಡಿ.ಕೆ. ಶಿವಕುಮಾರ್

ನದಿ ದಡದ ಸಮೀಪ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರವಾಹ ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಲು ನೇಪಾಳ ಪ್ರಧಾನಿ ಬಾಲೇಂದ್ರ ಶಾ ಅವರು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ಕರೆದಿದ್ದಾರೆ. ವೈದ್ಯಕೀಯ ತಂಡ, ಸ್ಕೌಟ್ಸ್‌ ಮತ್ತು ರೆಡ್‌ಕ್ರಾಸ್‌ ಸಹಯೋಗದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕಾರ್ಯ ಆರಂಭವಾಗಿದೆ ಎಂದು ಅವರು ತಿಳಿಸಿದ್ದಾರೆ.

ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ದಕ್ಷಿಣ ಏಷ್ಯಾದಲ್ಲಿ ಮುಂಗಾರು ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತಗಳು ಸಾಮಾನ್ಯವಾಗಿವೆ. ಹವಾಮಾನ ಬದಲಾವಣೆಯಿಂದ ಈ ಭಾಗದಲ್ಲಿ ಇಂತಹ ತೀವ್ರ ಹವಾಮಾನ ಘಟನೆಗಳ ಪ್ರಮಾಣ ಮತ್ತು ತೀವ್ರತೆ ಹೆಚ್ಚುತ್ತಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...