ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ಒಬ್ಬರು ಸಾವು, 5 ಮಂದಿಗೆ ಗಾಯ

Date:

ಭಾರಿ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಛಾವಣಿಯ ಒಂದು ಭಾಗ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ ಎಂದು ದೆಹಲಿ ಅಗ್ನಿ ಶಾಮಕ ಸೇವೆ ತಿಳಿಸಿದೆ.

- Advertisement -

ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ವ್ಯಕ್ತಿಯೊಬ್ಬರು ಕುಸಿತದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಛಾವಣಿ ಕುಸಿತದಿಂದಾಗಿ ಟರ್ಮಿನಪ್ 1ರ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಾಗೆಯೇ ಸುರಕ್ಷತಾ ದೃಷ್ಟಿಯಿಂದ ಚಕ್ ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ 5.30ಕ್ಕೆ ಅಗ್ನಿ ಶಾಮಕ ತಂಡ ಛಾವಣಿ ಕುಸಿತದ ಬಗ್ಗೆ ಕರೆ ಸ್ವೀಕರಿಸಿದ್ದು, ತಕ್ಷಣ ಸ್ಥಳಕ್ಕೆ 4 ಅಗ್ನಿ ಶಾಮಕ ವಾಹನಗಳು ಆಗಮಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

“ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಛಾವಣಿ ಕುಸಿತವಾಗಿರುವ ಘಟನೆಯ ಬಗ್ಗೆ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಟರ್ಮಿನಲ್ 1ರಲ್ಲಿ ತೊಂದರೆಯಾದ ಪ್ರಯಾಣಿಕರೆಲ್ಲರಿಗೂ ವಿಮಾನ ನಿಲ್ದಾಣದ ಸಿಬ್ಬಂದಿ ಸಲಹೆ ನೀಡುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ” ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ(ಜೂ.27) ಭಾರಿ ಮಳೆಯಾಗಿದ್ದು ದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶಗಳು ಜಲಾವೃತವಾಗಿವೆ.

ದೆಹಲಿಯಲ್ಲಿ ಬೆಳಿಗ್ಗೆ 5.30 ರವರೆಗೆ ಸಫ್ದರ್‌ಜಂಗ್‌ನಲ್ಲಿ 153.7 ಮಿಮೀ ಮತ್ತು ಪಾಲಂ ವಿಮಾನ ನಿಲ್ದಾಣದಲ್ಲಿ 93 ಮಿಮೀ ಮಳೆಯಾಗಿದೆ.

ಒಂದು ದಿನದ ಹಿಂದಷ್ಟೆ ಮಧ್ಯಪ್ರದೇಶದ ಜಬಲ್‌ಪುರ ವಿಮಾನ ನಿಲ್ದಾಣದ ಕಾರ್‌ ಪಾರ್ಕಿಂಗ್‌ ಪ್ರದೇಶದಲ್ಲಿ ಛಾವಣಿಯಲ್ಲಿದ್ದ ಲೋಹದ ವಸ್ತು ಬಿದ್ದ ಪರಿಣಾಮ ಸರ್ಕಾರಿ ಅಧಿಕಾರಿಯ ಕಾರೊಂದು ಸಂಪೂರ್ಣವಾಗಿ ನುಜ್ಜುಗುಜ್ಜಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

ಜಬಲ್‌ಪುರ ವಿಮಾನ ನಿಲ್ದಾಣ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...