ಒಡಿಶಾ ಪ್ರವಾಹ | 100 ಗ್ರಾಮಗಳ ಮೇಲೆ ಪ್ರಭಾವ: ರಸ್ತೆ, ಹೊಲಗಳು ಜಲಾವೃತ

Date:

ಒಡಿಶಾ ಪ್ರವಾಹ ಸ್ಥಿತಿ ಗಂಭೀರವಾಗುತ್ತಿದ್ದು ಬಾಲಸೋರ್‌ನ ಸುಮಾರು 100 ಗ್ರಾಮಗಳ ಮೇಲೆ ಪ್ರಭಾವ ಉಂಟಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ರಸ್ತೆಗಳು ಮತ್ತು ಹೊಲಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.

- Advertisement -

ಭಾರೀ ಮಳೆ ಸುರಿಯುತ್ತಿದ್ದು, ಜಾರ್ಖಂಡ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಈ ಬೆನ್ನಲ್ಲೇ ಸುಬರ್ಣರೇಖಾ ನದಿಯ ಸಮೀಪದ ಭೋಗ್ರೈ, ಬಲಿಯಾಪಾಲ್, ಜಲೇಶ್ವರ ಮತ್ತು ಬಸ್ತಾ ಎಂಬ ನಾಲ್ಕು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಜಲಕಾ ನದಿಯಲ್ಲಿ ಪ್ರವಾಹ ಉಂಟಾಗಿ ಕೆಲವು ಹಳ್ಳಿಗಳು ಮತ್ತು ಬಾಲಸೋರ್ ಸದರ್ ಪ್ರದೇಶದ ಭಾಗದ ಮೇಲೆ ಪ್ರಭಾವ ಬೀರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಚಿಕ್ಕೋಡಿ | ಅಕ್ಕ ಪ್ರಿಯಾಂಕಾ ಬೆನ್ನಿಗೆ ನಿಂತ ತಮ್ಮ ರಾಹುಲ್, ʼಗೆಲುವು ಅಕ್ಕಂದೆʼ ಎನ್ನುತ್ತಿರುವ ಕಾರ್ಯಕರ್ತರು

ಸುಬರ್ಣರೇಖಾ ಮತ್ತು ಜಲಕಾ ನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಿದ್ದರೂ ಅಪಾಯಮಟ್ಟಕ್ಕಿಂತ ಕೆಳಕ್ಕಿಳಿದಿಲ್ಲ. ಬಸ್ತಾ, ಜಲೇಶ್ವರ, ಬಲಿಯಾಪಾಲ್, ಭೋಗ್ರೈಗೆ ಬಾಲಸೋರ್ ಜಿಲ್ಲಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈವರೆಗೆ 46 ಗ್ರಾಮ ಪಂಚಾಯತ್‌ಗಳು ಪ್ರವಾಹಕ್ಕೆ ತುತ್ತಾಗಿದ್ದು 2,916 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಈವರೆಗೆ 17 ನಿರಾಶ್ರಿತರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. 300ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಈ ನಡುವೆ ಜುಲೈ 5ರವರೆಗೆ ಒಡಿಶಾದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...