ಹಠಾತ್ ಪ್ರವಾಹ ಭೀತಿ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ರೆಡ್‌ ಅಲರ್ಟ್‌

Date:

Advertisements

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತ ಮತ್ತು ಈಶಾನ್ಯ ಭಾರತದ ರಾಜ್ಯಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ನಡುವಿನ ಸಾಗರ್ ದ್ವೀಪ ಮತ್ತು ಖೇಪುಪಾರ ಪ್ರದೇಶಗಳ ಬಳಿಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದಿದೆ. ಇದರಿಂದ, ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಹಠಾತ್ ಭಾರೀ ಮಳೆಯಾಗಲಿದ್ದು, ಪ್ರವಾಹ ಮತ್ತು ಭೂಕುಸಿತ ಸಂಭವಿಸಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ

ಈಶಾನ್ಯ ರಾಜ್ಯಗಳಾದ ಮೇಘಾಲಯ, ಅರುಣಾಚಲ ಪ್ರದೇಶ, ತ್ರಿಪುರ, ಸಿಕ್ಕಿಂ, ಅಸ್ಸಾಂ ಮತ್ತು ಪೂರ್ವ ಕರಾವಳಿ ರಾಜ್ಯಗಳಾದ ಪಶ್ಚಿಮ ಬಂಗಾಳ, ಒಡಿಶಾ ಹಾಗೂ ದಕ್ಷಿಣ ರಾಜ್ಯಗಳಾದ ಕರ್ನಾಟಕ, ಗೋವಾ ಹಾಗೂ ಕೇರಳದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ರಾಜ್ಯಗಳ ಪೈಕಿ ಬಹುತೇಕ ರಾಜ್ಯಗಳಲ್ಲಿ 300 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

Advertisements

ಹೆಚ್ಚು ಮಳೆಯಾಗುವ ಕಾರಣ ಮಣ್ಣಿನ ಸವಕಳಿ ಹಾಗೂ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಬಹುದು. ಭೂಕುಸಿತವೂ ಸಂಭವಿಸಬಹುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಡಿಢೀರ್ ಪ್ರವಾಹ ಉಂಟಾಗುವ ಸಾಧ್ಯತೆಗಳಿವೆ. ಮೀನುಗಾರರು ಜೂನ್ 1ರವರೆಗೆ ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X