ಕುಗ್ರಾಮದ ದಲಿತ ಯುವಕನ ‘ಹಾರುವ ಕಾರು’ ಆವಿಷ್ಕಾರ: ತಂತ್ರಜ್ಞಾನ ಲೋಕದಲ್ಲಿ ಹೊಸ ಸಂಚಲನ

Date:

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಕುಗ್ರಾಮವೊಂದರ ದಲಿತ ಸಮುದಾಯದ ಯುವಕನೊಬ್ಬ, ಸಂಪೂರ್ಣ ವಿದ್ಯುತ್ ಚಾಲಿತ ‘ಹಾರುವ ಕಾರು’ (Electric flying vehicle) ಆವಿಷ್ಕರಿಸುವ ಮೂಲಕ ದೇಶದ ಗಮನ ಸೆಳೆದಿದ್ದಾನೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಯಿಟ್ಟಿರುವ ರವಿ ತಮ್ತಾ ಅವರ ಈ ಅಸಾಧಾರಣ ಸಾಧನೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಮುಕ್ತಕಂಠದಿಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

- Advertisement -

ರವಿ ತಮ್ತಾ ಅವರು ಉತ್ತರಾಖಂಡದ ಕುಮಾವೂನ್ ಭಾಗದ ‘ತಮ್ತಾ’ (ಪರಿಶಿಷ್ಟ ಜಾತಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಐತಿಹಾಸಿಕವಾಗಿ ತಾಮ್ರ ಹಾಗೂ ಲೋಹದ ಕರಕುಶಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ದಲಿತ ಸಮುದಾಯದ ಯುವಕನೊಬ್ಬ, ಇಂದು ಅತ್ಯಾಧುನಿಕ ಏರೋಸ್ಪೇಸ್ ಮತ್ತು ಡ್ರೋನ್ ತಂತ್ರಜ್ಞಾನದಲ್ಲಿ ಸಾಧನೆ ಮಾಡಿರುವುದು ಸಾಮಾಜಿಕ ಮತ್ತು ವೈಜ್ಞಾನಿಕ ದೃಷ್ಟಿಯಿಂದ ಅತ್ಯಂತ ಮಹತ್ವದ ಮೈಲಿಗಲ್ಲಾಗಿದೆ. ಭೌಗೋಳಿಕ ಹಾಗೂ ಸಾಮಾಜಿಕ ಅಡೆತಡೆಗಳನ್ನು ಮೀರಿ ಬೆಳೆದಿರುವ ಅವರ ಈ ಯಶಸ್ಸು, ಅವಕಾಶ ಮತ್ತು ಪರಿಶ್ರಮವಿದ್ದರೆ ಎಂತಹ ಹಿನ್ನೆಲೆಯವರಾದರೂ ಜಾಗತಿಕ ಮಟ್ಟದ ತಂತ್ರಜ್ಞಾನವನ್ನು ಎಟುಕಿಸಿಕೊಳ್ಳಬಹುದು ಎಂಬುದಕ್ಕೆ ಜೀವಂತ ಉದಾಹರಣೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಜಾಗೇಶ್ವರ ಧಾಮದ ಸಮೀಪವಿರುವ ಕಫ್ಲಿಖಾನ್ ಗ್ರಾಮದ ನಿವಾಸಿಯಾಗಿರುವ ರವಿ, ತಮ್ಮದೇ ನವೋದ್ಯಮ ‘ಹ್ಯಾಪಿಡಾ ಸ್ಕೈ ಪ್ರೈವೇಟ್ ಲಿಮಿಟೆಡ್’ ಮೂಲಕ ಈ ಸಾಧನೆ ಮಾಡಿದ್ದಾರೆ. ಸತತ ಹಲವಾರು ವರ್ಷಗಳ ಸಂಶೋಧನೆ ಮತ್ತು ಅಭಿವೃದ್ಧಿಯ (R&D) ಬಳಿಕ ‘ಹ್ಯಾಪಿಡಾ ಸ್ಕೈನೆಕ್ಸ್’ (HAPIDA SKYNeX) ಎಂಬ ಮೂಲಮಾದರಿಯ (prototype) ಹಾರುವ ಕಾರನ್ನು ಯಶಸ್ವಿಯಾಗಿ ಪರೀಕ್ಷಿಸಿದ್ದಾರೆ. ಇದು ಶೂನ್ಯ-ಹೊಗೆ ಸೂಸುವ (zero-tailpipe-emission) ಪರಿಸರಸ್ನೇಹಿ ವಾಹನವಾಗಿದ್ದು, ಭಾರತದಲ್ಲಿ ಕೈಗೆಟುಕುವ, ಸುರಕ್ಷಿತ ಹಾಗೂ ಸುಸ್ಥಿರ ವಾಯು ಚಲನಶೀಲತೆಯನ್ನು ಪರಿಚಯಿಸುವ ಗುರಿ ಹೊಂದಿದೆ.

ರವಿ ಅವರ ಸಾಧನೆಯನ್ನು ಕೊಂಡಾಡಿರುವ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, “ಡ್ರೋನ್ ತಂತ್ರಜ್ಞಾನದಲ್ಲಿ ನಾವೀನ್ಯತೆ ಮೆರೆದಿರುವ ಯುವಕನ ಸಾಧನೆ ಕೇವಲ ಉತ್ತರಾಖಂಡಕ್ಕಷ್ಟೇ ಅಲ್ಲ, ಇಡೀ ದೇಶಕ್ಕೆ ಸ್ಫೂರ್ತಿದಾಯಕ. ನಮ್ಮ ಯುವಜನತೆಯಲ್ಲಿ ಪ್ರತಿಭೆ ಮತ್ತು ವೈಜ್ಞಾನಿಕ ಚಿಂತನೆಯ ಕೊರತೆಯಿಲ್ಲ ಎಂಬುದನ್ನು ಇದು ಸಾಬೀತುಪಡಿಸಿದೆ,” ಎಂದು ಎಕ್ಸ್ (X) ಖಾತೆಯಲ್ಲಿ ಶ್ಲಾಘಿಸಿದ್ದಾರೆ.

​ಕೇಂದ್ರ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ಸಹ ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದು, “ಪ್ರತಿಭೆಗೆ ಭೌಗೋಳಿಕ ಗಡಿಗಳಿಲ್ಲ ಎನ್ನುವುದಕ್ಕೆ ರವಿ ತಮ್ತಾ ಸಾಕ್ಷಿ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ನಾವೀನ್ಯತಾ ವ್ಯವಸ್ಥೆ ಅದ್ಭುತವಾಗಿ ಬೆಳೆಯುತ್ತಿದ್ದು, ದೇಶದ ಮೂಲೆ ಮೂಲೆಗಳಿಂದಲೂ ಇಂತಹ ಸಾಧನೆಗಳು ಹೊರಹೊಮ್ಮುತ್ತಿವೆ,” ಎಂದಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಯುವ ನವೋದ್ಯಮಿಯನ್ನು ಖುದ್ದಾಗಿ ಭೇಟಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮೂಲಮಾದರಿಯ ಯಶಸ್ವಿ ಹಾರಾಟವು ಭವಿಷ್ಯದ ವಾಣಿಜ್ಯೀಕರಣದ ನಿಟ್ಟಿನಲ್ಲಿ ನಾವು ಇಟ್ಟಿರುವ ಮೊದಲ ಪ್ರಮುಖ ಹೆಜ್ಜೆಯಾಗಿದೆ. ಮುಂದಿನ ದಿನಗಳಲ್ಲಿ ಈ ವಾಹನವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವ ಮುನ್ನ ಮತ್ತಷ್ಟು ಕಠಿಣ ಪರೀಕ್ಷೆಗಳು ಹಾಗೂ ಅಗತ್ಯ ನಿಯಂತ್ರಕ ಅನುಮೋದನೆಗಳಿಗೆ ಒಳಪಡಿಸಲಾಗುವುದು,” ಎಂದು ರವಿ ತಮ್ತಾ ಸ್ಪಷ್ಟಪಡಿಸಿದ್ದಾರೆ. ಗ್ರಾಮೀಣ ಭಾಗದ ದಲಿತ ಯುವಕನೊಬ್ಬನ ಕನಸಿನ ಕೂಸಾದ ಈ ‘ಹಾರುವ ಕಾರು’, ಭಾರತದ ಭವಿಷ್ಯದ ಸಾರಿಗೆ ವ್ಯವಸ್ಥೆಗೆ ಮತ್ತು ನವೋದ್ಯಮ ಕ್ಷೇತ್ರಕ್ಕೆ ಹೊಸ ಆಶಾಕಿರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...