ನಿರ್ಮಾಣ ಹಂತದಲ್ಲೇ ಕುಸಿದು ಬಿದ್ದ ಇನ್ನೊಂದು ಮೇಲ್ಸೇತುವೆ; ʼಇದು ಗುಜರಾತ್‌ ಮಾಡೆಲ್‌ʼ ಎಂದ ನೆಟ್ಟಿಗರು!

Date:

ಗುಜರಾತ್‌ನ ಆನಂದ್ ಜಿಲ್ಲೆಯ ಆದಾಸ್ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಮೇಲ್ಸೇತುವೆಯ (ROB) ಒಂದು ಭಾಗ ಹಠಾತ್ತನೆ ಕುಸಿದು ಬಿದ್ದಿದೆ. ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು ದೃಢಪಡಿಸಿವೆ.

- Advertisement -

ವಡೋದ್ ಮತ್ತು ಆದಾಸ್ ರೋಡ್ ನಿಲ್ದಾಣಗಳ ನಡುವೆ ದೀರ್ಘಕಾಲದಿಂದ ಈ ಮೇಲ್ಸೇತುವೆಯ ಕಾಮಗಾರಿ ನಡೆಯುತ್ತಿತ್ತು. ಶನಿವಾರದಂದು ಎರಡು ಪಿಲ್ಲರ್‌ಗಳ ನಡುವಿನ ಕಾಂಕ್ರೀಟ್ ರಚನೆಯ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರಿಂದ, ಇಡೀ ಮೇಲ್ಸೇತುವೆಯ ನಿರ್ಮಾಣ ಹಂತದ ಆಕೃತಿಗೂ ಭಾರಿ ಹಾನಿಯಾಗಿದೆ. ಘಟನೆ ಸಂಭವಿಸಿದ ತಕ್ಷಣವೇ ರೈಲ್ವೆ ಮತ್ತು ಸಂಬಂಧಪಟ್ಟ ಏಜೆನ್ಸಿಗಳ ಅಧಿಕಾರಿಗಳು ಹಾಗೂ ತಾಂತ್ರಿಕ ತಜ್ಞರ ತಂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಕುರಿತು ಮಾಹಿತಿ ನೀಡಿರುವ ವಡೋದರಾ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನುಭವ್ ಸಕ್ಸೇನಾ, “ವಡೋದ್ ಮತ್ತು ಆದಾಸ್ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 250ರ ಮೇಲಿರುವ ಈ ಮೇಲ್ಸೇತುವೆ ಯೋಜನೆಯನ್ನು ವಡೋದರಾ ವಿಭಾಗದ ‘ಗತಿ ಶಕ್ತಿ ಯುನಿಟ್’ ಅನುಷ್ಠಾನಗೊಳಿಸುತ್ತಿದೆ. ಇದೊಂದು ಸಣ್ಣ ಘಟನೆಯಾಗಿದ್ದು, ಸೇತುವೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದಾಗ ಕೇವಲ ಅಪ್ರೋಚ್ ಗಿರ್ಡರ್‌ಗಳು ಮಾತ್ರ ಕುಸಿದಿವೆ. ಅಪಘಾತ ನಡೆದ ಸ್ಥಳವು ಪ್ರಮುಖ ರೈಲ್ವೆ ಹಳಿಗಳಿಂದ ಸಾಕಷ್ಟು ದೂರದಲ್ಲಿರುವುದರಿಂದ, ದೈನಂದಿನ ರೈಲು ಸಂಚಾರಕ್ಕಾಗಲಿ ಅಥವಾ ಸಾರ್ವಜನಿಕ ರಸ್ತೆ ಸಂಚಾರಕ್ಕಾಗಲಿ ಯಾವುದೇ ರೀತಿಯ ಅಡ್ಡಿಯಾಗಿಲ್ಲ” ಎಂದು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ‘ಗೌರವಾನ್ವಿತ ಜಿರಳೆ’ – ಸೋನಮ್‌ಗೆ ಮತ್ತೆ ಬಂಧನದ ಎಚ್ಚರಿಕೆ ನೀಡಿದ್ರಾ ಲಡಾಖ್ ಉಪರಾಜ್ಯಪಾಲರು?

ಪಿಟಿಐ ಹಂಚಿಕೊಂಡಿರುವ ಕುಸಿದು ಬಿದ್ದಿರುವ ಸೇತುವೆಯ ಸ್ಥಳದ ವಿಡಿಯೋಗೆ ಹಲವು X ಖಾತೆದಾರರು ಪ್ರತಿಕ್ರಿಯಿಸಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೇ ಹೀಗಾಗುತ್ತದೆ, ಇದು ಗುಜರಾತ್‌ ಮಾಡೆಲ್‌, ಇಂತ ವಿಷಯಗಳು ಗೋದಿ ಮಾಧ್ಯಮಗಳಲ್ಲಿ ಪ್ರಸಾರವಾಗುವುದಿಲ್ಲ, ಭಾರತ ಟ್ರಿಲಿಯನ್‌ ಲೆಕ್ಕದಲ್ಲಿ ಆರ್ಥಿಕತೆ ಹೊಂದಿದೆಯಂತೆ, ಆದರೆ ನೆಟ್ಟಗೊಂದು ಕಾಮಗಾರಿ ಮಾಡಲಾಗುತ್ತಿಲ್ಲ! ಎಂಬಿತ್ಯಾದಿಯಾಗಿ ಟೀಕಿಸುತ್ತಿದ್ದಾರೆ. ಜೊತೆಗೆ ಕಾಮಗಾರಿ ಮುಗಿಯುವ ಮುನ್ನವೇ ಮೇಲ್ಸೇತುವೆ ಕುಸಿದಿರುವುದಕ್ಕೆ ಕಳಪೆ ಕಾಮಗಾರಿ ಮತ್ತು ವ್ಯವಸ್ಥೆಯಲ್ಲಿನ ಭ್ರಷ್ಟಾಚಾರವೇ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸುವವರನ್ನೇ ಗುರಿಯಾಗಿಸಿಕೊಂಡು, ಕೆಲ ಐಟಿ ಸೆಲ್‌ ಅತೀ ಬುದ್ಧಿವಂತರು “ದೇಶದ್ರೋಹಿಗಳು” ಎಂದು ಹಣೆಪಟ್ಟಿ ಕಟ್ಟಿ ಸಾರ್ವಜನಿಕರ ಗಮನವನ್ನು ದಿಕ್ಕುತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಈಗ ಮತ್ತೊಂದು ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...